Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:35 - ಕನ್ನಡ ಸತ್ಯವೇದವು C.L. Bible (BSI)

35 ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆದರೆ ಜ್ಞಾನವಾದರೋ ತನ್ನ ಎಲ್ಲಾ ಮಕ್ಕಳಿಂದ ಸಮರ್ಥನೆ ಪಡೆದದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆದರೆ ಜ್ಞಾನವು ಸಕಲ ಜ್ಞಾನಾವಲಂಬಿಗಳ ಮೂಲಕ ಜ್ಞಾನವೇ ಎಂದು ಗೊತ್ತಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆದರೆ ಜ್ಞಾನವು ತನ್ನ ಕಾರ್ಯಗಳಿಂದಲೇ ತನ್ನನ್ನು ಸಮರ್ಥಿಸಿಕೊಳ್ಳುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದರೆ ಜ್ಞಾನವನ್ನು ಅನ್ವಯಿಸಿಕೊಳ್ಳುವಾಗಲೇ ಜ್ಞಾನದ ಗುಣಲಕ್ಷಣಗಳು ಸ್ಪಷ್ಟವಾಗಿರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 “ಖರೆ ದೆವಾಚಿ ಬುದ್ವಂತ್ಕಿ ಜೆ ಕೊನ್ ಮಾನುನ್ ಘೆತ್ಯಾತ್, ತೆಂಕಾ ಖರೆ ಕಾಯ್ ಮನುನ್ ಕಳ್ವುನ್ ಘೆವ್ಕ್ ಹೊತಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:35
8 ತಿಳಿವುಗಳ ಹೋಲಿಕೆ  

ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಇದನ್ನು ಕೊಳ್ಳಲು ಬೇಕಾದ ಬುದ್ಧಿಯೇ ಅವನಿಗಿಲ್ಲವಲ್ಲಾ!


ಯೊವಾನ್ನನ ಉಪದೇಶವನ್ನು ಜನಸಾಮಾನ್ಯರೆಲ್ಲರೂ ಕೇಳಿದರು. ಅವರು, ವಿಶೇಷವಾಗಿ ಸುಂಕದವರು, ದೈವಯೋಜನೆಗೆ ತಲೆಬಾಗಿ ಆತನಿಂದ ಸ್ನಾನದೀಕ್ಷೆಯನ್ನು ಪಡೆದರು.


ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.


ಒಬ್ಬ ಫರಿಸಾಯನು ಯೇಸುಸ್ವಾಮಿಯನ್ನು ಊಟಕ್ಕೆ ಆಹ್ವಾನಿಸಿದನು. ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು