Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:37 - ಕನ್ನಡ ಸತ್ಯವೇದವು C.L. Bible (BSI)

37 ಅದೇ ಊರಿನಲ್ಲಿ ಪತಿತೆಯೊಬ್ಬಳು ಇದ್ದಳು. ಆಕೆ, ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತಿದ್ದಾರೆಂದು ಕೇಳಿ ಒಂದು ಅಮೃತಶಿಲೆಯ ಭರಣಿ ತುಂಬ ಸುಗಂಧ ತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆಗ ಆ ಊರಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಒರಗಿದ್ದಾನೆಂದು ಗೊತ್ತುಹಿಡುಕೊಂಡು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆ ಊರಿನಲ್ಲಿ ಪಾಪಿಷ್ಠಳಾದ ಒಬ್ಬ ಸ್ತ್ರೀ ಇದ್ದಳು. ಯೇಸುವು ಫರಿಸಾಯನ ಮನೆಯಲ್ಲಿ ಊಟಮಾಡುತ್ತಿದ್ದಾನೆಂದು ಆಕೆಗೆ ತಿಳಿಯಿತು. ಆದ್ದರಿಂದ ಆಕೆ ಭರಣಿಯಲ್ಲಿ ಸ್ವಲ್ಪ ಪರಿಮಳತೈಲವನ್ನು ತೆಗೆದುಕೊಂಡು ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತುಕೊಂಡಿದ್ದಾರೆಂದು ಒಬ್ಬ ಪಾಪಿ ಸ್ತ್ರೀಯು ತಿಳಿದು, ಸುಗಂಧ ತೈಲದ ಭರಣಿಯನ್ನು ತಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತ್ಯಾ ಶಾರಾತ್ ಪಾಪಾಚೆ ಜಿವನ್ ಕರ್‍ತಲಿ ಎಕ್ ಬಾಯ್ಕೊಮನುಸ್ ಹೊತ್ತಿ. ಜೆಜು ಫಾರಿಜೆವಾಚ್ಯಾ ಘರಾತ್ ಜೆವ್ನಾಕ್ ಬಸ್ಲಾ ಮನುನ್ ಆಯಿಕ್ಲಿನ್, ತಸೆ ಮನುನ್ ಎಕ್ ಭರ್‍ನಿಬರ್ ಬರಿ ವಾಸ್ ಎತಲೆ ತೆಲ್ ಘೆವ್ನ್ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:37
18 ತಿಳಿವುಗಳ ಹೋಲಿಕೆ  

ನಾನು ಬಂದಿರುವುದು ಧರ್ಮಿಷ್ಠರನ್ನು ಕರೆಯುವುದಕ್ಕಲ್ಲ, ‘ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ, ದೇವರಿಗೆ ಅಭಿಮುಖಿಗಳಾಗಿರಿ’ ಎಂದು ಪಾಪಿಷ್ಠರನ್ನು ಕರೆಯುವುದಕ್ಕೆ,” ಎಂದರು.


ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


“ಸಜ್ಜನರೇ ಸದ್ಗತಿಯನ್ನು ಹೊಂದುವುದು ಕಷ್ಟವಾಗುವುದಾದರೆ ಇನ್ನು ಭಕ್ತಿಹೀನರೂ ಪಾಪಿಗಳೂ ಆದವರ ಪಾಡೇನು?” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ.


ಧರ್ಮಶಾಸ್ತ್ರದ ನಿರ್ಬಂಧನೆಗಳು ಸಜ್ಜನರಿಗಲ್ಲ; ಬದಲಿಗೆ ಅಕ್ರಮಿಗಳಿಗೆ, ಅವಿಧೇಯರಿಗೆ, ಅಧರ್ಮಿಗಳಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಪ್ರಾಪಂಚಿಕರಿಗೆ, ಹೆತ್ತವರನ್ನು ಹತ್ಯೆಮಾಡುವವರಿಗೆ ಮತ್ತು ಕೊಲೆಗಾರರಿಗೆ.


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು.


ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.


ಹಿಂದೊಮ್ಮೆ ಪ್ರಭುವಿನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿ ಅವರ ಪಾದಗಳನ್ನು ತನ್ನ ತಲೆಗೂದಲಿನಿಂದ ಒರಸಿದವಳೇ ಈ ಮರಿಯ. ಅಸ್ವಸ್ಥನಾಗಿದ್ದ ಲಾಸರನು ಇವಳ ಸಹೋದರ.)


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ.


ಅಧಿಕಾರಿಗಳು ಆ ಹುಟ್ಟು ಕುರುಡನನ್ನು ಮತ್ತೆ ಕರೆಯಿಸಿ, “ನೀನು ದೇವರ ಮುಂದೆ ಪ್ರಮಾಣಮಾಡಿ ಹೇಳು. ಆ ಮನುಷ್ಯ ಪಾಪಿಯೆಂದು ನಮಗೆ ಗೊತ್ತು,” ಎಂದು ಕೇಳಿದರು.


ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು.


ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.


ಒಬ್ಬ ಫರಿಸಾಯನು ಯೇಸುಸ್ವಾಮಿಯನ್ನು ಊಟಕ್ಕೆ ಆಹ್ವಾನಿಸಿದನು. ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು