Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:41 - ಕನ್ನಡ ಸತ್ಯವೇದವು C.L. Bible (BSI)

41 ಆಗ ಯೇಸು, “ಒಬ್ಬ ಸಾಲಿಗನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು, ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಅವನಿಗೆ ಸಾಲ ಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಗ ಯೇಸು, “ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಗ ಯೇಸು - ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐನೂರು ಹಣ ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಹಣ ಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೇಸು, “ಇಬ್ಬರು ಮನುಷ್ಯರಿದ್ದರು. ಅವರಿಬ್ಬರೂ ಒಬ್ಬನೇ ಸಾಹುಕಾರನಿಂದ ಹಣವನ್ನು ಬಡ್ಡಿಗೆ ತೆಗೆದುಕೊಂಡಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡಿದ್ದನು. ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ಯೇಸು, “ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು, ಒಬ್ಬನು ಐದು ನೂರು ಬೆಳ್ಳಿ ನಾಣ್ಯಗಳನ್ನೂ, ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನೂ ಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತನ್ನಾ ಜೆಜುನ್ “ದೊಗೆ ಜಾನಾ ರಿನ್ಕಾರಿ ಹೊತ್ತೆ, ತೆನಿ ರಿನ್ ಫೆಡ್ತಲೆ ಹೊತ್ತೆ. ಎಕ್ಲ್ಯಾನ್ ಪಾಸ್ಸೆ ಚಾಂದಿಚೆ ಪೈಸೆ ದಿತಲೆ ಹೊತ್ತೆ, ಅನಿ ಅನಿ ಎಕ್ಲ್ಯಾನ್ ಪನ್ನಾಸ್ ಚಾಂದಿಚೆ ಪೈಸೆ ದಿತಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:41
17 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು.


ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.


“ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.


ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.


ಮಾನವರೆಲ್ಲರೂ ಪಾಪಿಗಳೇ, ಎಲ್ಲರೂ ದೇವದತ್ತ ಮಹಿಮೆಯನ್ನು ಕಳೆದುಕೊಂಡವರೇ.


ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ, ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ’.”


ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೆ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸಿತ್ತೀರೋ?


ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು.


ಬಳಿಕ ಸರ್ವೇಶ್ವರ ಸ್ವಾಮಿ ನನಗೆ ಇಂತೆಂದರು - “ಭ್ರಷ್ಟಳಾದ ಇಸ್ರಯೇಲ್ ದ್ರೋಹಿಯಾದ ಜುದೇಯಳಿಗಿಂತ ಶಿಷ್ಟಳಾಗಿ ಕಂಡುಬಂದಿದ್ದಾಳೆ.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


“ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದರು. ಅವರು ಕೋರಹನ ಜತೆ ಸೇರಿ ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದವರಲ್ಲ. ಅವರು ಸತ್ತದ್ದು ತಮ್ಮ ಸ್ವಂತ ಪಾಪದ ನಿಮಿತ್ತ. ಅವರಿಗೆ ಗಂಡುಮಕ್ಕಳಿರಲಿಲ್ಲ.


ಆಗ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿ,” ಎಂದರು. ಅದಕ್ಕೆ ಶಿಷ್ಯರು, “ನಾವು ಹೋಗಿ ಇನ್ನೂರು ದೆನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುತಂದು ಅವರಿಗೆ ಊಟಕ್ಕೆ ಬಡಿಸೋಣವೇನು?” ಎಂದರು.


ಅದಕ್ಕೆ ಯೇಸು, “ಸಿಮೋನ್, ನಾನು ನಿನಗೆ ಹೇಳಬೇಕಾದ ವಿಷಯ ಒಂದಿದೆ,” ಎಂದರು. ಸಿಮೋನನು, “ಅದೇನು ಹೇಳಿ ಗುರುವೇ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು