Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:44 - ಕನ್ನಡ ಸತ್ಯವೇದವು C.L. Bible (BSI)

44 ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ, “ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ - ಈ ಹೆಂಗಸನ್ನು ನೋಡಿದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ತ್ಯಾವಮಾಡಿ ತನ್ನ ತಲೆಯಕೂದಲಿನಿಂದ ಒರಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಬಳಿಕ ಯೇಸು ಸ್ತ್ರೀಯ ಕಡೆಗೆ ನೋಡಿ ಸಿಮೋನನಿಗೆ, “ಈ ಸ್ತ್ರೀಯು ನಿನಗೆ ಕಾಣುತ್ತಿರುವಳೇ? ನಾನು ನಿನ್ನ ಮನೆಯೊಳಗೆ ಬಂದಾಗ ನೀನು ನನ್ನ ಪಾದಗಳಿಗೆ ನೀರು ಕೊಡಲಿಲ್ಲ. ಆದರೆ ಈಕೆ ತನ್ನ ಕಣ್ಣೀರಿನಿಂದ ನನ್ನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿಂದ ಒರೆಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ತರುವಾಯ ಯೇಸು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನನಿಗೆ, “ಈ ಸ್ತ್ರೀಯನ್ನು ಕಂಡಿದ್ದೀಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ. ಇವಳಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತನ್ನ ತಲೆಕೂದಲಿನಿಂದ ಅವುಗಳನ್ನು ಒರೆಸಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಮಾನಾ ತೊ ತ್ಯಾ ಬಾಯ್ಕೊಮನ್ಸಿಕ್ಡೆ ಪರತ್ಲೊ, ಅನಿ ಸಿಮಾವಾಕ್ “ಹ್ಯಾ ಬಾಯ್ಕೊಮನ್ಸಿಕ್ ತಿಯಾ ಬಗುಲೆ ಕಾಯ್? ಮಿಯಾ ತುಜ್ಯಾ ಘರಾಕ್ ಯೆಲೊ, ಖರೆ ತಿಯಾ ಮಾಕಾ ಪಾಯ್ ಧುವ್ಕ್ ಪಾನಿ ದಿವ್ಕ್ ನ್ಹೈಯ್, ಖರೆ ತೆನಿ ತಿಚ್ಯಾ ದುಕ್ಕಾನಿ ಮಾಜೆ ಪಾಂಯೆ ಧುಲಿನ್, ಅನಿ ಅಪ್ನಾಚ್ಯಾ ಕೆಸಾನಿ ತೆನಿ ಮಾಜೆ ಪಾಯ್ ಪುಸ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:44
11 ತಿಳಿವುಗಳ ಹೋಲಿಕೆ  

ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಈ ಬೀದಿಯಲ್ಲಿ ರಾತ್ರಿಯನ್ನು ಕಳೆಯಬೇಡ; ನನ್ನ ಮನೆಗೆ ಬಾ,” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವುಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.


ಆಮೇಲೆ ಗೃಹನಿರ್ವಾಹಕನು ಅವರೆಲ್ಲರನ್ನು ಜೋಸೆಫನ ಮನೆಯೊಳಗೆ ಕರೆತಂದು ಕಾಲು ತೊಳೆದುಕೊಳ್ಳುವುದಕ್ಕೆ ನೀರನ್ನು ಕೊಡಿಸಿದನು. ಅವರ ಕತ್ತೆಗಳಿಗೆ ಮೇವು ಹಾಕಿಸಿದನು.


ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ರಾತ್ರಿ ತಂಗಿರಿ. ಕಾಲುಗಳನ್ನು ತೊಳೆದುಕೊಳ್ಳಿ. ಬೆಳಿಗ್ಗೆ ಎದ್ದು ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು,” ಎಂದನು.


ನೀರು ತರಿಸಿಕೊಡುತ್ತೇನೆ, ಕಾಲುತೊಳೆದುಕೊಂಡು ಈ ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿ.


ಆಕೆ ಎದ್ದು ನಮಸ್ಕಾರ ಮಾಡಿ, ಮಾತಾಡಿಸಿದವನಿಗೆ, “ನಿನ್ನ ದಾಸಿಯಾದ ನಾನು ನನ್ನ ಒಡೆಯರ ಕೈಕೆಳಗಿರುವ ಸೇವಕರ ಪಾದ ತೊಳೆಯುವುದಕ್ಕೂ ಸಿದ್ಧಳಾಗಿದ್ದೇನೆ,” ಎಂದು ಉತ್ತರಕೊಟ್ಟಳು.


ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?


ಅನಂತರ ಅವನಿಗೆ, “ನೀನು ಮನೆಗೆ ಹೋಗಿ ಕೈಕಾಲು ತೊಳೆದುಕೋ,” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು.


ಅವಳು ಯೇಸುವಿನ ಹಿಂಬದಿಯಲ್ಲಿ ಅಳುತ್ತಾನಿಂತು, ತನ್ನ ಕಂಬನಿಯಿಂದ ಅವರ ಪಾದಗಳನ್ನು ತೊಳೆದು ತಲೆಕೂದಲಿನಿಂದ ಒರಸಿ, ಆ ಪಾದಗಳಿಗೆ ಮುತ್ತಿಟ್ಟು, ಸುಗಂಧ ತೈಲವನ್ನುಹಚ್ಚಿದಳು.


ಅದಕ್ಕೆ ಸಿಮೋನನು, “ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ,” ಎಂದನು. “ಸರಿಯಾಗಿ ಹೇಳಿದೆ,” ಎಂದರು ಯೇಸು.


ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ತಮ್ಮ ಶಿಷ್ಯರ ಕಾಲುಗಳನ್ನು ತೊಳೆಯುತ್ತಾ ತಾವು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಒರಸತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು