ಲೂಕ 7:6 - ಕನ್ನಡ ಸತ್ಯವೇದವು C.L. Bible (BSI)6 ಯೇಸು ಅವರ ಸಂಗಡವೇ ಹೊರಟರು. ಮನೆಯಿಂದ ಸ್ವಲ್ಪ ದೂರವಿರುವಾಗಲೇ, ಶತಾಧಿಪತಿ ತನ್ನ ಗೆಳೆಯರ ಮುಖಾಂತರ, “ಪ್ರಭುವೇ, ಇಷ್ಟು ಶ್ರಮ ತೆಗೆದುಕೊಳ್ಳಬೇಡಿ; ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ - ಪ್ರಭುವೇ, ತೊಂದರೆ ತೆಗೆದುಕೊಳ್ಳಬೇಡ; ನೀನು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನ್ನಲ್ಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಯೇಸು ಅವರ ಜೊತೆ ಹೊರಟನು. ಯೇಸು ಮನೆಯ ಹತ್ತಿರ ಬರುತ್ತಿರುವಾಗ, ಆ ಅಧಿಕಾರಿಯು ಸ್ನೇಹಿತರನ್ನು, “ಪ್ರಭುವೇ, ನೀನು ನನ್ನ ಮನೆಗೆ ಬರುವಷ್ಟು ನಾನು ಯೋಗ್ಯನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೇಸು ಅವರೊಂದಿಗೆ ಹೋದರು. ಅವರು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗಲೇ ಶತಾಧಿಪತಿಯು ಸ್ನೇಹಿತರನ್ನು ಯೇಸುವಿನ ಬಳಿಗೆ ಕಳುಹಿಸಿ, “ಕರ್ತದೇವರೇ, ನಿಮ್ಮನ್ನು ತೊಂದರೆ ಪಡಿಸಿಕೊಳ್ಳಬೇಡಿರಿ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತನ್ನಾ ಜೆಜು ತೆಂಚ್ಯಾ ವಾಂಗ್ಡಾ ಗೆಲೊ. ಜೆಜು ಘರಾಕ್ನಾ ಉಲ್ಲೆ ಧುರುಚ್ ರಾತಾನಾ, ತ್ಯಾ ಶತಪತಿನ್ ಅಪ್ನಾಚ್ಯಾ ಲೊಕಾನಿಕ್ನಾ “ಗುರುಜಿ, ತಿಯಾ ಮಾಜ್ಯಾ ಘರಾಕ್ ಯೆತಲೊ ತರಾಸ್ ಕರುನ್ ಘೆವ್‍ನಕ್ಕೊ, ತಿಯಾ ಮಾಜ್ಯಾ ಘರಾಕ್ ಯೆಯ್ ಸರ್ಕಿ ಯೊಗ್ಯತಾ ಮಾಕಾ ನಾ ಅಧ್ಯಾಯವನ್ನು ನೋಡಿ |
ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.