ಲೂಕ 8:1 - ಕನ್ನಡ ಸತ್ಯವೇದವು C.L. Bible (BSI)1 ತರುವಾಯ ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತರುವಾಯ ಆತನು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮರುದಿನ, ಯೇಸು ಕೆಲವು ನಗರಗಳ ಮತ್ತು ಊರುಗಳ ಮೂಲಕ ಪ್ರಯಾಣ ಮಾಡಿ ಜನರಿಗೆ ಬೋಧಿಸಿದನು ಮತ್ತು ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಿದನು. ಹನ್ನೆರಡು ಮಂದಿ ಅಪೊಸ್ತಲರು ಆತನೊಡನೆ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇದಾದ ಮೇಲೆ, ಯೇಸು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಹೋಗಿ, ದೇವರ ರಾಜ್ಯದ ವಿಷಯ ಪ್ರಚಾರ ಮಾಡುತ್ತಾ ಸುವಾರ್ತೆಯನ್ನು ಸಾರುತ್ತಾ ಇದ್ದರು. ಹನ್ನೆರಡು ಮಂದಿ ಶಿಷ್ಯರು ಅವರೊಂದಿಗೆ ಇದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಉಲ್ಲ್ಯಾ ಎಳಾಚ್ಯಾ ಮಾನಾ, ಜೆಜು ಗಾಂವಾತ್ನಿ, ಅನಿ ಬಾರಿಕ್ಲ್ಯಾ ಗಾಂವಾತ್ನಿ ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗುನ್ಗೆತ್ ಗೆಲೊ, ತೆಚಿ ಬಾರಾ ಶಿಸಾಬಿ ತೆಚ್ಯಾ ವಾಂಗ್ಡಾ ಹೊತ್ತಿ. ಅಧ್ಯಾಯವನ್ನು ನೋಡಿ |
ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.