Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:10 - ಕನ್ನಡ ಸತ್ಯವೇದವು C.L. Bible (BSI)

10 ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು - ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ, ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕಿವಿಯಿದ್ದರೂ ತಿಳುಕೊಳ್ಳದಂತೆಯೂ ಸಾಮ್ಯರೂಪವಾಗಿ ಹೇಳಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು, “ನೀವು ದೇವರ ರಾಜ್ಯದ ಗುಟ್ಟುಗಳನ್ನು ತಿಳಿದುಕೊಳ್ಳಬೇಕೆಂದು ನಿಮ್ಮನ್ನು ಆರಿಸಿಕೊಳ್ಳಲಾಗಿದೆ. ಆದರೆ ಬೇರೆ ಜನರೊಂದಿಗೆ ನಾನು ಸಾಮ್ಯಗಳ ಮೂಲಕ ಮಾತಾಡುತ್ತೇನೆ, ಏಕೆಂದರೆ, ‘ಅವರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸಿಕೊಳ್ಳುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “ ‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ಜೆಜುನ್ “ದೆವಾಚ್ಯಾ ರಾಜಾಚೊ ಘುಟಾಚಿ ಸಮ್ಜನ್ ತುಮ್ಕಾ ಎವ್ಡೆಚ್ ದಿಲ್ಲೆ ಹಾಯ್. ಖರೆ ದುಸ್ರ್ಯಾಕ್ನಿ ತೊ ಘುಟ್ ಕಾನಿಯಾಂಚ್ಯಾ ವೈನಾಚ್ ಸಾಂಗುನ್ ಹೊತಾ. ಕಶ್ಯಾಕ್ ಮಟ್ಲ್ಯಾರ್ ತೆನಿ ಬಗ್ತ್ಯಾತ್, ಖರೆ ತೆಂಕಾ ದಿಸಿನಾ, ಅನಿ ಆಯಿಕ್ತ್ಯಾತ್, ಖರೆ ತೆಂಕಾ ಕಾಯ್ಬಿ ಕಳಿನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:10
24 ತಿಳಿವುಗಳ ಹೋಲಿಕೆ  

ಅದಕ್ಕೆ, “ನೀನು ಜನರ ಬಳಿಗೆ ಹೋಗಿ ಹೀಗೆಂದು ಹೇಳು : ‘ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು. ಕಣ್ಣಾರೆ ಕಂಡರೂ ಗ್ರಹಿಸಬಾರದು.’


ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ,


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.


ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಸರ್ವೇಶ್ವರ ಇಂದಿನವರೆಗೂ ಅಯ್ಯೋ ನಿಮಗೆ ಅನುಗ್ರಹಿಸಲಿಲ್ಲ!


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಇಷ್ಟಾನುಸಾರ ಪ್ರತಿಯೊಬ್ಬನಿಗೂ ಹಂಚುತ್ತಾರೆ.


“ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”


ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


“ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


‘ಕಣ್ಣಾರೆ ನೋಡಿಯೂ ಅವರು ಕಾಣರು; ಕಿವಿಯಾರೆ ಕೇಳಿಯೂ ಅವರು ಗ್ರಹಿಸರು. ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರು; ಪಾಪಕ್ಷಮೆ ಹೊಂದಿಯಾರು’,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು