Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:14 - ಕನ್ನಡ ಸತ್ಯವೇದವು C.L. Bible (BSI)

14 ಮುಳ್ಳು ಪೊದೆಗಳ ನಡುವೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿದ ಇನ್ನಿತರರು. ಆದರೆ ಕಾಲಕ್ರಮೇಣ ಬಾಳಿನ ಬವಣೆಗಳು, ಐಶ್ವರ್ಯದ ವ್ಯಾಮೋಹಗಳು ಹಾಗೂ ಸುಖಭೋಗಗಳು ಇವರನ್ನು ಅದುಮಿಬಿಡುತ್ತವೆ; ಇವರ ಫಲ ಪಕ್ವವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬೇರೆ ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವಮಾನದಲ್ಲಿ ಆಗುವ ಚಿಂತೆ ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಮಾಗಿಸುವದಿಲ್ಲ; ಇವರೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಲೋಕದ ಚಿಂತೆಗಳಿಗೂ ಐಶ್ವರ್ಯಗಳಿಗೂ ಭೋಗಗಳಿಗೂ ಅವರು ಅವಕಾಶಕೊಡುವುದರಿಂದ ಅವರು ಬೆಳೆಯಲಾರರು; ಎಂದಿಗೂ ಒಳ್ಳೆಯ ಫಲವನ್ನು ಕೊಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಬೀಜ ಬಿದ್ದ ಮುಳ್ಳುನೆಲವು ಯಾರೆಂದರೆ ವಾಕ್ಯವನ್ನು ಕೇಳಿದ ಮೇಲೆ ಮುಂದುವರಿದು, ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಮತ್ತು ಭೋಗಗಳಿಂದಲೂ ಅದುಮಿಬಿಟ್ಟು, ಪರಿಪಕ್ವತೆಗೆ ಫಲಕೊಡದಿದ್ದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಕಾಟ್ಯಾಂಚ್ಯಾ ಝಿಳಿತ್ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್, ಖರೆ ತೆಂಚ್ಯಾ ಯವ್ಜನ್ಯಾ ಅನಿ ಪಯ್ಸ್ಯಾಂಚಿ ಆಶಾ, ಅನಿ ಹ್ಯಾ ಜಿವನಾಚ್ಯಾ ಯವ್ಜನ್ಯಾ, ತ್ಯಾ ಗೊಸ್ಟಿಯಾಕ್ನಿ ದಡ್ಪುನ್ ಧರ್‍ತ್ಯಾತ್, ಅನಿ ತೆಂಕಾ ಫಳ್ ದಿವ್ಕ್ ದಿನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:14
17 ತಿಳಿವುಗಳ ಹೋಲಿಕೆ  

ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಇನ್ನೂ ಕೆಲವು ಮುಳ್ಳು ಪೊದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಅವುಗಳೊಡನೆ ಬೆಳೆದು ಸಸಿಗಳನ್ನು ಅದುಮಿಬಿಟ್ಟವು.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾಗದು; ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,” ಎಂದರು.


ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ಆದುದರಿಂದ ಕ್ರಿಸ್ತಯೇಸುವನ್ನು ಕುರಿತಾದ ಪ್ರಾಥಮಿಕ ಪಾಠಗಳಲ್ಲೇ ನಿಂತುಬಿಡದೆ ಪ್ರೌಢ ವಿಷಯಗಳತ್ತ ಸಾಗೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು