Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:18 - ಕನ್ನಡ ಸತ್ಯವೇದವು C.L. Bible (BSI)

18 “ಆದ್ದರಿಂದ ನೀವು ಕಿವಿಕೊಡುವಾಗ ಎಚ್ಚರಿಕೆಯಿಂದಿರಿ; ಏಕೆಂದರೆ, ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ; ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ನೀವು ಕಿವಿಗೊಡುವಾಗ ಜಾಗರೂಕರಾಗಿರಿ; ಸ್ವಲ್ಪ ತಿಳುವಳಿಕೆ ಇರುವ ವ್ಯಕ್ತಿಯು ಹೆಚ್ಚು ತಿಳುವಳಿಕೆಯನ್ನು ಹೊಂದುವನು. ಆದರೆ ತಿಳುವಳಿಕೆ ಇಲ್ಲದ ವ್ಯಕ್ತಿಯು ತನಗಿದೆ ಎಂದುಕೊಂಡಿದ್ದ ತಿಳುವಳಿಕೆಯನ್ನೂ ಕಳೆದುಕೊಳ್ಳುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ನೀವು ಕೇಳುವ ವಿಷಯಗಳಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು; ಇಲ್ಲದವರ ಕಡೆಯಿಂದ ತಮಗಿದೆ ಎಂದುಕೊಳ್ಳುವುದನ್ನು ಸಹ, ಅವರಿಂದ ಕಿತ್ತುಕೊಳ್ಳಲಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆಚೆಸಾಟ್ನಿ, “ಉಶಾರ್ಕಿನ್ ರ್‍ಹಾವಾ ಅನಿ ಬರೆ ಕರುನ್ ಆಯ್ಕಾ; ಕಶ್ಯಾಕ್ ಮಟ್ಲ್ಯಾರ್, ಕೊನಾಕ್ಡೆ ಕಾಯ್ತರ್ ಉಲ್ಲೆಸೆ ಹಾಯ್ ತೆಕಾ ಜಾಸ್ತಿಚೆ ದಿವ್ನ್ ಹೊತಾ, ಖರೆ ಕೊನಾಕ್ಡೆ ಉಲ್ಲೆಸೆಬಿ ನಾ, ತೆಚೆಕ್ಲೆ ಅಸಲ್ಲೆಬಿ ಉಲ್ಲೆಸೆ ಕಾಡುನ್ ಘೆವ್ನ್ ಜಾವ್ನ್ ಹೊತಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:18
25 ತಿಳಿವುಗಳ ಹೋಲಿಕೆ  

ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.


ಆಗ ರಾಜ, ‘ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ, ಇದು ನಿಶ್ಚಯ,’ ಎಂದ.


ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


ನಿಮ್ಮಲ್ಲಿ ಯಾರಾದರೊಬ್ಬನು ತಾನು ದೇವರ ವಾಕ್ಯವನ್ನು ಬೋಧಿಸುವವನು ಅಥವಾ ಪವಿತ್ರಾತ್ಮ ಪ್ರೇರಣೆಯನ್ನು ಹೊಂದಿದವನು ಎಂದು ಭಾವಿಸುವುದಾದರೆ, ನಾನು ನಿಮಗೆ ಬರೆದಿರುವುದೆಲ್ಲ ಪ್ರಭುವಿನ ಆಜ್ಞೆಯೆಂದು ಚೆನ್ನಾಗಿ ತಿಳಿದುಕೊಳ್ಳಲಿ.


ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಯಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ.


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


“ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು.


ಇಂಥ ಬಾಹ್ಯಾಚರಣೆಯಲ್ಲಿ ನಂಬಿಕೆ ಇಡಲು ತಮಗೆ ಹಕ್ಕು ಇದೆಯೆಂದು ಯಾರಾದರೂ ಭಾವಿಸಿದರೆ, ನನ್ನ ಹಕ್ಕು ಅದಕ್ಕೂ ಮಿಗಿಲಾದುದು ಎಂದೇ ಹೇಳುತ್ತೇನೆ.


“ವಿನಾಶಕಾರಿಯಾದ ವಿಕಟಮೂರ್ತಿಯು ಇರಬಾರದ ಸ್ಥಾನದಲ್ಲಿ ಇರುವುದನ್ನು ನೀವು ನೋಡುವಾಗ (ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ) ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ;


ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು