ಲೂಕ 8:23 - ಕನ್ನಡ ಸತ್ಯವೇದವು C.L. Bible (BSI)23 ದೋಣಿ ಸಾಗುತ್ತಿದ್ದಾಗ, ಯೇಸು ನಿದ್ರಾವಶರಾದರು. ಅಷ್ಟರಲ್ಲಿ ಸರೋವರದ ಮೇಲೆ ಬಿರುಗಾಳಿ ಎದ್ದಿತು. ದೋಣಿ ನೀರಿನಿಂದ ತುಂಬಿ ಅವರೆಲ್ಲರೂ ಅಪಾಯಕ್ಕೆ ಒಳಗಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು; ಅಷ್ಟರಲ್ಲಿ ಬಿರುಗಾಳಿ ಕೆರೆಯ ಮೇಲೆ ಬರಲು ದೋಣಿಯೊಳಗೆ ನೀರು ತುಂಬಿಕೊಂಡದರಿಂದ ಅವರು ಅಪಾಯಕ್ಕೆ ಗುರಿಯಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅವರು ಸರೋವರದ ಮೇಲೆ ದೋಣಿಯಲ್ಲಿ ಹೋಗುತ್ತಿರುವಾಗ ಯೇಸುವಿಗೆ ನಿದ್ದೆ ಹತ್ತಿತು. ಇತ್ತ ಸರೋವರದ ಮೇಲೆ ಬಿರುಗಾಳಿ ಬೀಸತೊಡಗಿತು. ದೋಣಿಯೊಳಗೆ ನೀರು ತುಂಬತೊಡಗಿತು. ದೋಣಿಯಲ್ಲಿದ್ದವರೆಲ್ಲರೂ ಅಪಾಯಕ್ಕೀಡಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಅವರು ಪ್ರಯಾಣ ಮಾಡುತ್ತಿದ್ದಾಗ, ಯೇಸು ನಿದ್ರಿಸುತ್ತಿದ್ದರು. ಆಗ ಬಿರುಗಾಳಿಯು ಸರೋವರದ ಮೇಲೆ ಬೀಸಲು, ದೋಣಿಯು ನೀರಿನಿಂದ ತುಂಬಿದ್ದರಿಂದ, ಅವರು ಅಪಾಯಕ್ಕೊಳಗಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತೆನಿ ಜಾವ್ನಗೆತ್ ರಾತಾನಾ ಜೆಜುಕ್ ನಿಜ್‍ಲಾಗ್ಲಿ ತನ್ನಾ ಸಮುಂದರಾತ್ ಎಗ್ದಮ್ ಮೊಟೊ ವಾರೊ ಉಟ್ಲೊ, ಅನಿ ಢೊನಿತ್ ಪಾನಿ ಭರುಕ್‍ಲಾಲೆ,ಅಶೆ ತೆನಿ ಮೊಟ್ಯಾ ಅಪಾಯಾತ್ ಪಡ್ಲ್ಯಾನಿ. ಅಧ್ಯಾಯವನ್ನು ನೋಡಿ |