Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:28 - ಕನ್ನಡ ಸತ್ಯವೇದವು C.L. Bible (BSI)

28 ಯೇಸುವನ್ನು ಕಂಡೊಡನೆ ಗಟ್ಟಿಯಾಗಿ ಕೂಗುತ್ತಾ ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಪರಾತ್ಪರ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದಯವಿಟ್ಟು ನನ್ನನ್ನು ಪೀಡಿಸಬೇಡಿ,” ಎಂದು ದನಿಯೆತ್ತಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಬಿದ್ದು ಮಹಾಶಬ್ದದಿಂದ - ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂತ ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28-29 ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವನು ಯೇಸುವನ್ನು ಕಂಡಾಗ, ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಮಹೋನ್ನತ ದೇವಪುತ್ರರೇ, ನನ್ನ ಗೊಡವೆ ನಿಮಗೆ ಏಕೆ? ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತೆನಿ ಜೆಜುಕ್ ಬಗಟಲ್ಲ್ಯಾ ತನ್ನಾ, ಮೊಟ್ಯಾನ್ ಬೊಬ್ ಮಾರ್‍ಲ್ಯಾನ್, ಅನಿ ಜೆಜುಚ್ಯಾ ಪಾಂಯಾತ್ನಿ ಪಡುನ್ ಜೆಜುಕ್, “ಜೆಜು ಮೊಟ್ಯಾ ದೆವಾಚ್ಯಾ ಲೆಕಾ! ಮಾಜೆಕ್ನಾ ತುಕಾ ಕಾಯ್ ಪಾಜೆ ಹೊಲಾ? ಮಾಕಾ ಶಿಕ್ಷಾ ದಿವ್‍ನಕೊ ಮನುನ್ ಮಿಯಾ ತುಜೆಕ್ಡೆ ಮಾಗ್ನಿ ಕರ್‍ತಾ” ಮನುನ್ ಬೊಬ್ ಮಾರುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:28
14 ತಿಳಿವುಗಳ ಹೋಲಿಕೆ  

ಅವರು ಯೇಸುವನ್ನು ನೋಡಿದೊಡನೆಯೇ, “ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?” ಎಂದು ಕೂಗಿಕೊಂಡರು.


ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.


ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ದೇವರು ಒಬ್ಬರೇ ಎಂದು ನೀವು ನಂಬುತ್ತೀರಿ. ಈ ನಂಬಿಕೆ ಒಳ್ಳೆಯದೇ. ಆದರೆ ದೆವ್ವಗಳೂ ನಂಬುತ್ತವೆ; ಹೆದರಿ ನಡುಗುತ್ತವೆ.


ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


ಯೇಸು ದಡದ ಮೇಲೆ ಕಾಲಿಟ್ಟದ್ದೇ ತಡ, ಆ ಊರಿನವನೊಬ್ಬನು ಬಂದು ಅವರನ್ನು ಎದುರುಗೊಂಡನು. ಅವನಿಗೆ ಪಿಶಾಚಿ ಹಿಡಿದಿತ್ತು. ಅವನು ಬಟ್ಟೆತೊಟ್ಟು ಬಹಳ ದಿನಗಳಾಗಿತ್ತು; ಮನೆ ಬಿಟ್ಟು ಸಮಾಧಿಗಳ ಗುಹೆಗಳಲ್ಲೇ ವಾಸಿಸುತ್ತಿದ್ದನು.


ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಆಗಲೆ ಕಟ್ಟಪ್ಪಣೆ ಮಾಡಿದ್ದರು. ಎಷ್ಟೋ ಸಾರಿ ಅದು ಅವನ ಮೇಲೆ ಬಂದಿತ್ತು. ಜನರು ಅವನನ್ನು ಸರಪಳಿ ಸಂಕೋಲೆಗಳಿಂದ ಬಂಧಿಸಿ ಕಾವಲಿನಲ್ಲಿ ಇಟ್ಟಿದ್ದರೂ ಅವುಗಳನ್ನು ಅವನು ಮುರಿದುಹಾಕುತ್ತಿದ್ದನು; ದೆವ್ವ ಅವನನ್ನು ಬೆಂಗಾಡಿಗೆ ಅಟ್ಟುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು