Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:35 - ಕನ್ನಡ ಸತ್ಯವೇದವು C.L. Bible (BSI)

35 ಅದನ್ನು ನೋಡಲು ಜನರು ಹೊರಟು ಯೇಸುವಿನ ಬಳಿಗೆ ಬಂದರು. ಪಿಶಾಚಿಗಳಿಂದ ಬಿಡುಗಡೆಯಾಗಿದ್ದ ಆ ವ್ಯಕ್ತಿ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ ಬಳಿ ಕುಳಿತಿದ್ದನ್ನು ಅವರೆಲ್ಲರೂ ಕಂಡು ಗಾಬರಿಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಜನರು ನಡೆದ ಸಂಗತಿಯನ್ನು ನೋಡುವದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದು ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಗಳನ್ನು ಹಾಕಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಹೆದರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಅದನ್ನು ನೋಡಲು ಜನರೆಲ್ಲರೂ ಯೇಸುವಿದ್ದಲ್ಲಿಗೆ ಬಂದರು. ಆ ಮನುಷ್ಯನು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿದ್ದುದನ್ನು ಅವರು ನೋಡಿದರು. ಅವನು ಬಟ್ಟೆಗಳನ್ನು ಹಾಕಿಕೊಂಡಿದ್ದನು; ಸ್ವಸ್ಥಬುದ್ಧಿಯುಳ್ಳವನಾಗಿದ್ದನು. ದೆವ್ವಗಳು ಅವನನ್ನು ಬಿಟ್ಟುಹೋಗಿದ್ದವು. ಜನರಿಗೆ ಭಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ಜನರು ನಡೆದ ಸಂಗತಿ ಏನೆಂದು ಕಾಣುವುದಕ್ಕಾಗಿ ಹೊರಟು ಯೇಸುವಿನ ಬಳಿಗೆ ಬಂದರು. ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ, ಬಳಿಯಲ್ಲಿ ಕುಳಿತಿರುವುದನ್ನು ಕಂಡು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಲೊಕಾ ಕಾಯ್ ಹೊಲೆ ಕಾಯ್ ಮನುನ್ ಬಗುಕ್ ಜೆಜು ಹೊತ್ತ್ಯಾಕ್ಡೆ ಯೆಲಿ.ತೆನಿ ಜೆಜುಕ್ಡೆ ಪಾವಲ್ಲ್ಯಾ ತನ್ನಾ ತೊ ಗಿರೊ ಸುಟುನ್ ಬರೊ ಹೊಲ್ಲೊ, ಮಾನುಸ್ ಬರೆ ಕಪ್ಡೆ ನೆಸುನ್, ಬರ್‍ಯಾ ಬುದ್ದಿನ್, ಜೆಜುಚ್ಯಾ ಪಾಂಯಾತ್ನಿ ಬಸಲ್ಲೊ ತೆನಿ ಬಗಟ್ಲ್ಯಾನಿ; ಹೆ ಬಗುನ್ ತೆನಿ ಭಿಂಯಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:35
13 ತಿಳಿವುಗಳ ಹೋಲಿಕೆ  

ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.


ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ಯೇಸು ದಡದ ಮೇಲೆ ಕಾಲಿಟ್ಟದ್ದೇ ತಡ, ಆ ಊರಿನವನೊಬ್ಬನು ಬಂದು ಅವರನ್ನು ಎದುರುಗೊಂಡನು. ಅವನಿಗೆ ಪಿಶಾಚಿ ಹಿಡಿದಿತ್ತು. ಅವನು ಬಟ್ಟೆತೊಟ್ಟು ಬಹಳ ದಿನಗಳಾಗಿತ್ತು; ಮನೆ ಬಿಟ್ಟು ಸಮಾಧಿಗಳ ಗುಹೆಗಳಲ್ಲೇ ವಾಸಿಸುತ್ತಿದ್ದನು.


ಆಗ ಅವನಿಗೆ ಬುದ್ಧಿ ಬಂದಿತು. ನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆ.


ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು.


ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು.


ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಇದನ್ನು ನೋಡಿದೊಡನೆಯೇ, ಹಂದಿ ಮೇಯಿಸುತ್ತಿದ್ದವರು ಓಡಿಹೋಗಿ ನಡೆದ ಈ ಘಟನೆಯನ್ನು ಪಟ್ಟಣದಲ್ಲೂ ಹಳ್ಳಿಯಲ್ಲೂ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು