ಲೂಕ 8:39 - ಕನ್ನಡ ಸತ್ಯವೇದವು C.L. Bible (BSI)39 ಆದರೆ ಯೇಸು, “ನಿನ್ನ ಮನೆಗೆ ಹಿಂದಿರುಗಿಹೋಗು, ದೇವರು ನಿನಗೆ ಎಂಥಾ ಉಪಕಾರ ಮಾಡಿದ್ದಾರೆಂಬುದನ್ನು ಪ್ರಕಟಿಸು,” ಎಂದು ಅವನನ್ನು ಬೀಳ್ಕೊಟ್ಟರು. ಅವನು ಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ಊರಿನಲ್ಲೆಲ್ಲಾ ಪ್ರಚಾರಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಆತನು - ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥೆಂಥ ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ವಿವರವಾಗಿ ಹೇಳು ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಅದಕ್ಕೆ ಯೇಸು, “ನಿನ್ನ ಮನೆಗೆ ಹಿಂತಿರುಗಿ ಹೋಗು. ದೇವರು ನಿನಗೆ ಮಾಡಿದ ಉಪಕಾರವನ್ನು ಜನರಿಗೆ ತಿಳಿಸು” ಎಂದು ಹೇಳಿ ಅವನನ್ನು ಕಳುಹಿಸಿದನು. ಆದ್ದರಿಂದ ಆ ಮನುಷ್ಯನು ಅಲ್ಲಿಂದ ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರವನ್ನು ಊರಲ್ಲೆಲ್ಲಾ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 “ನೀನು ನಿನ್ನ ಮನೆಗೆ ಹಿಂದಿರುಗಿ ಹೋಗಿ ದೇವರು ನಿನಗೆ ಎಂಥಾ ಮಹಾಕಾರ್ಯಗಳನ್ನು ಮಾಡಿದ್ದಾರೆಂಬುದನ್ನು ಹೇಳು,” ಎಂದು ಅವನನ್ನು ಕಳುಹಿಸಿಬಿಟ್ಟರು. ಅವನು ತನ್ನ ಮಾರ್ಗವಾಗಿ ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ಊರೆಲ್ಲಾ ಸಾರಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಅನಿ “ತುಜ್ಯಾ ಘರಾಕ್ ಜಾ, ಅನಿ ತುಜ್ಯಾ ಘರಾತ್ಲ್ಯಾಕ್ನಿ ದೆವಾನ್ ಕಾಯ್-ಕಾಯ್ ಕರ್‍ಲ್ಯಾನ್ ತೆ ಸಾಂಗ್”, ಮನುನ್ ಸಾಂಗ್ಲ್ಯಾನ್. ತೊ ಮಾನುಸ್ ಶಾರಾತ್ ಗೆಲೊ,ಅನಿ ಜೆಜುನ್ ಅಪ್ನಾಕ್ ಕಾಯ್-ಕಾಯ್ ಕರಲ್ಲೆ ಸಗ್ಳೆ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |