Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:41 - ಕನ್ನಡ ಸತ್ಯವೇದವು C.L. Bible (BSI)

41 ಅಷ್ಟರಲ್ಲಿ ಪ್ರಾರ್ಥನಾಮಂದಿರದ ಅಧಿಕಾರಿ ಯಾಯೀರನೆಂಬವನು ಅಲ್ಲಿಗೆ ಬಂದು, ಯೇಸುವಿನ ಪಾದಕ್ಕೆರಗಿ, ತನ್ನ ಮನೆಗೆ ಬರಬೇಕೆಂದು ವಿನಂತಿಸಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41-42 ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41-42 ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಬಿದ್ದನು. ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಅವನ ಒಬ್ಬಳೇ ಮಗಳು ಸಾಯುವವಳಾಗಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಆತನು ಹೋಗುತ್ತಿರುವಲ್ಲಿ ಜನರು ಗುಂಪುಗುಂಪಾಗಿ ಆತನನ್ನು ಇರಿಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯಾಯಿರನೆಂಬ ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದನು. ಅವನು ಸಭಾಮಂದಿರದ ಅಧಿಕಾರಿಯಾಗಿದ್ದನು. ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ಸಭಾಮಂದಿರದ ಅಧಿಕಾರಿಯಾಗಿದ್ದ, ಯಾಯೀರನೆಂಬವನು ಬಂದು ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು, ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತನ್ನಾ ಜಾಯಿರ್ ಮನ್ತಲೊ ಎಕ್ ಮಾನುಸ್ ಯೆಲೊ, ತೊ ಥೈತ್ಲ್ಯಾ ಸಿನಾಗೊಗಾಚೊ ಅದಿಕಾರಿ ಹೊವ್ನ್ ಹೊತ್ತೊ; ತೊ ಎಗ್ದಮ್ ಜೆಜುಚ್ಯಾ ಪಾಂಯಾತ್ ಪಡ್ಲೊ, ಅನಿ ಜೆಜುಕ್ ಅಪ್ನಾಚ್ಯಾ ಘರಾಕ್ಡೆ ಯೆ, ಮನುನ್ ಮಾಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:41
15 ತಿಳಿವುಗಳ ಹೋಲಿಕೆ  

ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.


ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,” ಎಂದು ಕೇಳಿಕೊಂಡರು.


ಯೇಸು ಸಬ್ಬತ್‍ದಿನದಲ್ಲಿ ಗುಣಮಾಡಿದ್ದನ್ನು ಕಂಡು, ಪ್ರಾರ್ಥನಾಮಂದಿರದ ಅಧಿಕಾರಿ ಕುಪಿತನಾದನು. ಕೂಡಿದ್ದ ಜನರನ್ನು ಉದ್ದೇಶಿಸಿ, “ಕೆಲಸ ಮಾಡಲು ಆರು ದಿನಗಳಿವೆ, ಆ ದಿನಗಳಲ್ಲಿ ಬಂದು ಗುಣಮಾಡಿಸಿಕೊಳ್ಳಿರಿ; ಸಬ್ಬತ್‍ದಿನದಲ್ಲಿ ಮಾತ್ರ ಕೂಡದು,” ಎಂದನು.


ಯೇಸುಸ್ವಾಮಿ ಇನ್ನೂ ಮಾತನಾಡುತ್ತಾ ಇರುವಾಗಲೇ ಒಬ್ಬನು ಯಾಯೀರನ ಮನೆಯಿಂದ ಬಂದು ಆ ಯಾಯಿರನಿಗೆ, “ನಿಮ್ಮ ಮಗಳು ತೀರಿಹೋದಳು. ಇನ್ನು ಗುರುವಿಗೆ ತೊಂದರೆಕೊಡಬೇಡಿ,” ಎಂದನು.


ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ.


ಲುದ್ದವು ಜೊಪ್ಪಕ್ಕೆ ಸಮೀಪದಲ್ಲೇ ಇತ್ತು. ಪೇತ್ರನು ಲುದ್ದದಲ್ಲಿರುವುದನ್ನು ಕೇಳಿದ ಭಕ್ತಾದಿಗಳು, “ದಯವಿಟ್ಟು ಬೇಗನೆ ನಮ್ಮೂರಿಗೆ ಬನ್ನಿ,” ಎಂದು ಇಬ್ಬರ ಮುಖಾಂತರ ಹೇಳಿ ಕಳುಹಿಸಿದರು.


ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು!


ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.


ಮಾರ್ತ ಯೇಸುವನ್ನು ಕಂಡು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರ ಸಾಯುತ್ತಿರಲಿಲ್ಲ.


ಕಾರಣ - ಸುಮಾರು ಹನ್ನೆರಡು ವರ್ಷ ವಯಸ್ಸಿನ ಅವನ ಏಕೈಕ ಪುತ್ರಿ ಮರಣಾವಸ್ಥೆಯಲ್ಲಿದ್ದಳು. ಯೇಸು ಹೊರಟುಬರುವಾಗ ಜನರ ಗುಂಪು ಅವರನ್ನು ಸುತ್ತಲೂ ಒತ್ತರಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು