Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:42 - ಕನ್ನಡ ಸತ್ಯವೇದವು C.L. Bible (BSI)

42 ಕಾರಣ - ಸುಮಾರು ಹನ್ನೆರಡು ವರ್ಷ ವಯಸ್ಸಿನ ಅವನ ಏಕೈಕ ಪುತ್ರಿ ಮರಣಾವಸ್ಥೆಯಲ್ಲಿದ್ದಳು. ಯೇಸು ಹೊರಟುಬರುವಾಗ ಜನರ ಗುಂಪು ಅವರನ್ನು ಸುತ್ತಲೂ ಒತ್ತರಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಅವನಿಗೆ ಒಬ್ಬಳೇ ಮಗಳಿದ್ದಳು. ಆಕೆಗೆ ಹನೆರಡು ವರ್ಷ ವಯಸ್ಸಾಗಿತ್ತು. ಆಕೆಯು ಸಾಯುವ ಸ್ಥಿತಿಯಲ್ಲಿದ್ದಳು. ಯೇಸುವು ಯಾಯಿರನ ಮನೆಗೆ ಹೋಗುತ್ತಿದ್ದಾಗ ಜನರು ಆತನ ಸುತ್ತಲೂ ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಏಕೆಂದರೆ ಸುಮಾರು ಹನ್ನೆರಡು ವರ್ಷದ, ಅವನ ಒಬ್ಬಳೇ ಮಗಳು, ಸಾಯುವ ಹಾಗಿದ್ದಳು. ಯೇಸು ದಾರಿಯಲ್ಲಿ ಹೋಗುತ್ತಿದ್ದಾಗ, ಜನರು ಅವರನ್ನು ನೂಕಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಕಶ್ಯಾಕ್ ಮಟ್ಲ್ಯಾರ್, ತೆಚಿ ಬಾರಾ ವರ್ಸಾಚಿ ಲೆಕ್ ಮರ್‍ತಲ್ಯಾ ಸ್ಧಿತಿರ್ ಹೊತ್ತಿ, ತನ್ನಾ ಜೆಜು ತೆಚ್ಯಾ ವಾಂಗ್ಡಾ ಜಾವ್ನಗೆತ್ ಹೊತ್ತೊ, ತನ್ನಾ ಲೊಕಾ ಜೆಜುಚ್ಯಾ ಭೊತ್ಯಾನಿ ಹೊತ್ತಿ, ಅನಿ ಢಕ್ಲಾ-ಢಕ್ಲಿ ಕರಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:42
15 ತಿಳಿವುಗಳ ಹೋಲಿಕೆ  

ಆಗ ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದು ಕೇಳಿದರು. ಯಾರೂ ಮುಟ್ಟಲಿಲ್ಲವೆಂದು ಎಲ್ಲರು ಹೇಳುತ್ತಿರಲು ಪೇತ್ರನು, “ಪ್ರಭೂ, ಇಷ್ಟೊಂದು ಜನರು ಮೇಲೆ ಮೇಲೆ ಬೀಳುತ್ತಾ ನಿಮ್ಮನ್ನು ಒತ್ತರಿಸುತ್ತಿದ್ದಾರಲ್ಲಾ,” ಎಂದನು.


ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು.


ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು.


ಯೇಸು ಅವನ ಜೊತೆಯಲ್ಲಿ ಹೊರಟರು. ದೊಡ್ಡ ಜನಸ್ತೋಮವು ಯೇಸುವನ್ನು ಮುತ್ತಿಕೊಂಡು ಅವರ ಜೊತೆಯಲ್ಲೇ ಹೊರಟಿತು.


“ನರಪುತ್ರನೇ, ಅವರಿಗೆ ಬಲಾಧಾರವೂ ನೇತ್ರಾನಂದವೂ ಆದ ಅವರ ಇಷ್ಟು ಸುಂದರ ಆಲಯವನ್ನೂ ಹೃದಯೋಲ್ಲಾಸವಾದ ಅವನ ಗಂಡು ಹೆಣ್ಣುಮಕ್ಕಳನ್ನೂ ನಾನು ನಿರ್ಮೂಲಮಾಡುವ ದಿನದಲ್ಲಿ


“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು. ಆದರೂ ನೀನು ಗೋಳಾಡಬೇಡ, ಅಳಬೇಡ, ಕಣ್ಣೀರು ಸುರಿಸಬೇಡ.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮಾನವನ ಜೀವಮಾನ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಹಿತವೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಳ್ಳಲು ಸಾಧ್ಯ?


ಅವರು ಉದಯಾಸ್ತಮಾನಗಳ ನಡುವೆ ಜಜ್ಜಿಹೋಗುವರು ಯಾರ ಲಕ್ಷ್ಯವೂ ಇಲ್ಲದೆ ನಿತ್ಯವಿನಾಶ ಹೊಂದುವರು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಅಷ್ಟರಲ್ಲಿ ಪ್ರಾರ್ಥನಾಮಂದಿರದ ಅಧಿಕಾರಿ ಯಾಯೀರನೆಂಬವನು ಅಲ್ಲಿಗೆ ಬಂದು, ಯೇಸುವಿನ ಪಾದಕ್ಕೆರಗಿ, ತನ್ನ ಮನೆಗೆ ಬರಬೇಕೆಂದು ವಿನಂತಿಸಿದನು


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಾ ಇದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿ ಇದ್ದಳು. ಆಕೆ ತನ್ನ ಆಸ್ತಿಪಾಸ್ತಿಯನ್ನೆಲ್ಲಾ ವೈದ್ಯರಿಗೆ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು