Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:43 - ಕನ್ನಡ ಸತ್ಯವೇದವು C.L. Bible (BSI)

43 ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಾ ಇದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿ ಇದ್ದಳು. ಆಕೆ ತನ್ನ ಆಸ್ತಿಪಾಸ್ತಿಯನ್ನೆಲ್ಲಾ ವೈದ್ಯರಿಗೆ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆಗ ಹನ್ನೆರಡು ವರುಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿದ್ದ ಸ್ತ್ರೀಯೊಬ್ಬಳು ಅಲ್ಲಿದ್ದಳು. ಆಕೆ ತನ್ನಲ್ಲಿದ್ದ ಹಣವನ್ನೆಲ್ಲಾ ವೈದ್ಯರಿಗೆ ಖರ್ಚು ಮಾಡಿದ್ದಳು. ಆದರೆ ಯಾವ ವೈದ್ಯನಿಗೂ ಆಕೆಯನ್ನು ವಾಸಿಮಾಡಲು ಸಾಧ್ಯವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಅವಳು ತನ್ನ ಆಸ್ತಿಯನ್ನೆಲ್ಲಾ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತ್ಯಾ ಲೊಕಾತ್ನಿ ಬಾರಾ ವರ್ಸಾಕ್ನಾ ರಗಾತ್ ಜಾತಲ್ಯಾ ರೊಗಾನ್ ತರಾಸ್ ಕರುನ್ ಘೆವ್ನ‍ಗೆತ್ ಹೊತ್ತಿ ಎಕ್ ಬಾಯ್ಕೊಮನುಸ್ ಹೊತ್ತಿ; ತೆನಿ ಅಪ್ನಾಕ್ಡೆ ಹೊತ್ತೆ ಸಗ್ಳೆ ಪೈಸೆ ಸಾರುನ್, ಆರಾಮ್ ಕರ್‍ತಲ್ಯಾಕ್ನಿ ಜಾವ್ನ್ ಬಗಟ್ಲಿನ್, ಖರೆ ಕೊನಾಚ್ಯಾನ್‍ಬಿ ತಿಕಾ ಗುನ್ ಕರುಕ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:43
22 ತಿಳಿವುಗಳ ಹೋಲಿಕೆ  

ಅಬ್ರಹಾಮನ ವಂಶಜಳಾದ ಈಕೆಯನ್ನು ಸೈತಾನನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು; ಈ ಕಟ್ಟಿನಿಂದ ಈಕೆಯನ್ನು ಸಬ್ಬತ್‍ದಿನ ಬಿಡಿಸಬಾರದಿತ್ತೆ?” ಎಂದರು.


ಯೇಸು ಸ್ವಾಮಿ ನಡೆದುಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡರು.


ಹದಿನೆಂಟು ವರ್ಷಗಳಿಂದ ದೆವ್ವಪೀಡಿತಳಾಗಿ ನರಳುತ್ತಿದ್ದ ಒಬ್ಬ ಮಹಿಳೆ ಅಲ್ಲಿದ್ದಳು. ಆಕೆ ಒಬ್ಬ ಗೂನಿ; ನೆಟ್ಟಗೆ ನಿಲ್ಲಲು ಸ್ವಲ್ಪವೂ ಆಗುತ್ತಿರಲಿಲ್ಲ.


ಯೇಸು ದಡದ ಮೇಲೆ ಕಾಲಿಟ್ಟದ್ದೇ ತಡ, ಆ ಊರಿನವನೊಬ್ಬನು ಬಂದು ಅವರನ್ನು ಎದುರುಗೊಂಡನು. ಅವನಿಗೆ ಪಿಶಾಚಿ ಹಿಡಿದಿತ್ತು. ಅವನು ಬಟ್ಟೆತೊಟ್ಟು ಬಹಳ ದಿನಗಳಾಗಿತ್ತು; ಮನೆ ಬಿಟ್ಟು ಸಮಾಧಿಗಳ ಗುಹೆಗಳಲ್ಲೇ ವಾಸಿಸುತ್ತಿದ್ದನು.


ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!


ಅವನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಸರ್ವೇಶ್ವರನ ಸಹಾಯವನ್ನು ಕೋರಲಿಲ್ಲ; ವೈದ್ಯರ ಸಹಾಯವನ್ನು ಮಾತ್ರ ಕೋರಿದನು.


ಈ ಅದ್ಭುತದಿಂದ ಗುಣಹೊಂದಿದ ಆ ವ್ಯಕ್ತಿಗೆ ನಲವತ್ತು ವರ್ಷ ಮೀರಿತ್ತು.


‘ಸುಂದರದ್ವಾರ’ ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟುಕುಂಟನೊಬ್ಬ ಇದ್ದನು. ಅವನನ್ನು ಪ್ರತಿದಿನ ಹೊತ್ತುತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಭಿಕ್ಷೆಬೇಡುತ್ತಿದ್ದನು.


ಇವನನ್ನೇ ಕೇಳಿ, ಹೇಗೂ ಪ್ರಾಯದವನಾಗಿದ್ದಾನಲ್ಲವೆ? ತನ್ನ ವಿಷಯವಾಗಿ ತಾನೇ ಮಾತನಾಡಬಲ್ಲ,” ಎಂದು ಉತ್ತರಿಸಿದರು.


ಅವನಿಗೆ ಒಂದು ಮೂಕದೆವ್ವ ಹಿಡಿದಿದೆ. ಅವನ ಮೇಲೆ ಅದು ಬಂದಾಗಲೆಲ್ಲಾ ಅವನನ್ನು ನೆಲಕ್ಕೆ ಅಪ್ಪಳಿಸುತ್ತದೆ. ಅವನು ನೊರೆಕಾರುತ್ತಾ ಹಲ್ಲು ಕಡಿದುಕೊಳ್ಳುತ್ತಾನೆ. ಆಗ ಅವನ ದೇಹವೆಲ್ಲಾ ಮರಗಟ್ಟಿದಂತಾಗುತ್ತದೆ. ಆ ದೆವ್ವವನ್ನು ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಕೇಳಿಕೊಂಡೆ. ಆದರೆ, ಅದು ಅವರಿಂದಾಗಲಿಲ್ಲ,” ಎಂದನು.


ಶತ್ರುವಿರುದ್ಧ ಸಹಾಯಮಾಡಯ್ಯಾ I ಮಾನವನ ನೆರವು ನಮಗೆ ಬರಡಯ್ಯಾ II


ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು.


ಇವರೆಲ್ಲರೂ ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು. ಈಕೆಯಾದರೋ ತನ್ನ ಕಡುಬಡತನದಲ್ಲೂ ತನ್ನಲ್ಲಿ ಇದ್ದುದೆಲ್ಲವನ್ನು ಅರ್ಪಿಸಿದಳು; ತನ್ನ ಜೀವನಾಧಾರವನ್ನೇ ಕೊಟ್ಟುಬಿಟ್ಟಳು,” ಎಂದರು.


ಕಾರಣ - ಸುಮಾರು ಹನ್ನೆರಡು ವರ್ಷ ವಯಸ್ಸಿನ ಅವನ ಏಕೈಕ ಪುತ್ರಿ ಮರಣಾವಸ್ಥೆಯಲ್ಲಿದ್ದಳು. ಯೇಸು ಹೊರಟುಬರುವಾಗ ಜನರ ಗುಂಪು ಅವರನ್ನು ಸುತ್ತಲೂ ಒತ್ತರಿಸುತ್ತಿತ್ತು.


ಆಕೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು. ಆ ಕ್ಷಣವೇ ಅವಳ ರಕ್ತಸ್ರಾವವು ನಿಂತುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು