Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:48 - ಕನ್ನಡ ಸತ್ಯವೇದವು C.L. Bible (BSI)

48 ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆತನು ಆಕೆಗೆ - ಮಗಳೇ ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಯೇಸು ಆಕೆಗೆ, “ಮಗಳೇ, ನೀನು ನಂಬಿದ್ದರಿಂದ ನಿನಗೆ ಸ್ವಸ್ಥವಾಯಿತು. ಸಮಾಧಾನದಿಂದ ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆಗ ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ತನ್ನಾ ಜೆಜುನ್ ತಿಕಾ “ಲೆಕಿ, ತುಜ್ಯಾ ವಿಶ್ವಾಸಾನ್ ತುಕಾ ಬರೆ ಕರ್‍ಲ್ಯಾನ್, ಸಮಾದಾನಾನ್ ಜಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:48
15 ತಿಳಿವುಗಳ ಹೋಲಿಕೆ  

ಯೇಸು ಆಕೆಗೆ, “ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು,” ಎಂದರು.


ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.


ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು.


ಒಮ್ಮೆ, ಅವನು ಕುಳಿತಲ್ಲೇ ಪೌಲನ ಮಾತುಗಳನ್ನು ಆಲಿಸುತ್ತಿದ್ದನು. ಆಗ ಪೌಲನು ಅವನನ್ನೇ ದಿಟ್ಟಿಸಿ ನೋಡಿದನು. ಅವನಲ್ಲಿ ಸ್ವಸ್ಥ ಪಡೆಯುವಷ್ಟು ವಿಶ್ವಾಸವನ್ನು ಕಂಡು ಸ್ವರವೆತ್ತಿ,


ಅನಂತರ ಆ ಸಮಾರಿಯದವನಿಗೆ, “ಎದ್ದುಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದು ಹೇಳಿದರು.


ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿಮುಕ್ತಳಾಗಿ ಆರೋಗ್ಯದಿಂದಿರು,” ಎಂದು ಅನುಗ್ರಹಿಸಿದರು.


ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.


ಯೇಸು ಅವನಿಗೆ, “ದೃಷ್ಟಿಯನ್ನು ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ,” ಎಂದರು.


ಅನಂತರ ಯೇಸು ಆ ಶತಾಧಿಪತಿಗೆ, “ಇನ್ನು ಮನೆಗೆ ಹೋಗು, ನೀನು ವಿಶ್ವಾಸಿಸಿದಂತೆಯೇ ಆಗುವುದು,” ಎಂದರು. ಅದೇ ಕ್ಷಣದಲ್ಲಿ ಅವನ ಸೇವಕನು ಸ್ವಸ್ಥನಾದನು.


ಆಗ ಏಲಿ ಆಕೆಗೆ, “ಸಮಾಧಾನದಿಂದ ಹೋಗು. ಇಸ್ರಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ಈಡೇರಿಸಲಿ,” ಎಂದನು.


ಇದಾದ ಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು, “ನಾನು ಈಜಿಪ್ಟ್ ದೇಶದಲ್ಲಿರುವ ಸ್ವಜನರ ಬಳಿಗೆ ಮರಳಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದನು. ಇತ್ರೋನನು, “ಸುಖವಾಗಿ ಹೋಗಿ ಬಾ,” ಎಂದನು.


ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನಬಂಧು ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು ನ್ಯಾಯನೀತಿಗೆ ಜಯ ದೊರಕಿಸದೆ ಬಿಡನಿವನು.


ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಎಲೀಷನು, “ಸಮಾಧಾನದಿಂದ ಹೋಗು,” ಎಂದು ಉತ್ತರಕೊಟ್ಟನು. ಅವನು ಹೊರಟುಹೋದನು.


ಆಗ ಆ ಮಹಿಳೆ ತಾನು ಮಾಡಿದ್ದನ್ನು ಇನ್ನು ಮುಚ್ಚಿಡಲು ಸಾಧ್ಯವಿಲ್ಲವೆಂದು ಅರಿತು, ನಡುಗುತ್ತಾ ಬಂದು, ಯೇಸುವಿಗೆ ಅಡ್ಡಬಿದ್ದಳು. ತಾನು ಮುಟ್ಟಿದ್ದಕ್ಕೆಕಾರಣವನ್ನೂ ತಾನು ತಕ್ಷಣ ಗುಣಹೊಂದಿದ್ದನ್ನೂ ಎಲ್ಲರ ಮುಂದೆ ಬಹಿರಂಗಪಡಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು