ಲೂಕ 9:12 - ಕನ್ನಡ ಸತ್ಯವೇದವು C.L. Bible (BSI)12 ಅಷ್ಟರಲ್ಲಿ ಸಾಯಂಕಾಲವಾಗುತ್ತಾ ಬಂದಿತು. ಹನ್ನೆರಡು ಮಂದಿ ಪ್ರೇಷಿತರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನ ಪ್ರದೇಶ, ಜನರನ್ನು ಕಳುಹಿಸಿಬಿಡಿ; ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟವಸತಿಯನ್ನು ಒದಗಿಸಿಕೊಳ್ಳಲಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲಾ” ಎಂದು ಆತನಿಗೆ ಹೇಳಲಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೊತ್ತು ಇಳಿಯುತ್ತಾ ಬಂತು. ಆ ಹನ್ನೆರಡು ಮಂದಿ ಶಿಷ್ಯರು ಆತನ ಬಳಿಗೆ ಬಂದು - ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಇಳುಕೊಂಡು ಊಟಕ್ಕೆ ಬೇಕಾದ ಪದಾರ್ಥಗಳನ್ನು ದೊರಕಿಸಿಕೊಳ್ಳಲಿ; ನಾವು ಇಲ್ಲಿ ಅಡವಿಯ ಸ್ಥಳದಲ್ಲಿ ಇದ್ದೇವಲ್ಲಾ ಎಂದು ಆತನಿಗೆ ಹೇಳಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಂದು ಸಾಯಂಕಾಲ, ಹನ್ನೆರಡು ಮಂದಿ ಅಪೊಸ್ತಲರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಯಾರೂ ವಾಸವಾಗಿಲ್ಲ. ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ಹೊಲಗಳಿಗೂ ಊರುಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ ಮತ್ತು ರಾತ್ರಿ ನಿದ್ರಿಸಲು ಸ್ಥಳವನ್ನು ಹುಡುಕಿಕೊಳ್ಳಲಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸಂಜೆಯಾಗುತ್ತಿದ್ದಾಗ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಊಟವಸತಿಯನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡಿ. ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ದಿಸ್ ಬುಡುಕ್ ಯೆಲ್ಲ್ಯಾತನ್ನಾ ಬಾರಾ ಜಾನಾ ಶಿಸಾ ಜೆಜುಕ್ಡೆ ಗೆಲಿ, ಅನಿ “ಲೊಕಾಕ್ನಿ ಧಾಡುನ್ ದಿ, ತೆನಿ ಜಾವ್ನ್ ಗಾಂವಾತ್ನಿ, ಅನಿ ಶೆತಾತ್ನಿ ಅಪ್ನಾಕ್ ಜೆವ್ಕ್ ಅನಿ ರಾವ್ಕ್ ಕಾಯ್ತರ್ ಯವಸ್ತಾ ಕರುನ್ ಘೆಂವ್ದಿತ್, ಅದ್ದಿಚ್ ಹ್ಯೊ ಜಾಗೊ ಬಗಟ್ಲ್ಯಾರ್, ಕಡೆಕ್ ಕಾಡುನ್ ಟಾಕಲ್ಲ್ಯಾ ಸಾರ್ಕೊ ಹಾಯ್”, ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |