Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:20 - ಕನ್ನಡ ಸತ್ಯವೇದವು C.L. Bible (BSI)

20 ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪುನಃ ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ದೇವರಿಂದ ಅಭಿಷಿಕ್ತರಾದ ಲೋಕೋದ್ಧಾರಕ ತಾವೇ" ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೇಸು ಅವರನ್ನು, “ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಅವರನ್ನು - ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ ಎಂದು ಕೇಳಲಾಗಿ ಪೇತ್ರನು - ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಯೇಸು, “ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಶಿಷ್ಯರನ್ನು ಕೇಳಿದನು. ಪೇತ್ರನು, “ನೀನು ದೇವರಿಂದ ಬಂದ ಕ್ರಿಸ್ತನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು. ಆಗ ಪೇತ್ರನು, “ನೀವು ದೇವರು ಕಳುಹಿಸಿಕೊಟ್ಟ ಕ್ರಿಸ್ತನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ಜೆಜುನ್ ತೆಂಕಾ “ತರ್ ತುಮಿ ಮಾಕಾ ಕೊನ್ ಮನುನ್ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್. ತನ್ನಾ ಪೆದ್ರುನ್ “ತಿಯಾ ದೆವಾಚೊ ಮೆಸ್ಸಿಯಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:20
20 ತಿಳಿವುಗಳ ಹೋಲಿಕೆ  

ಇನ್ನೂ ಕೆಲವರು, “ಈತನೇ ಲೋಕೋದ್ಧಾರಕ,” ಎಂದರು. ಮತ್ತೆ ಕೆಲವರು, “ಲೋಕೋದ್ಧಾರಕ ಗಲಿಲೇಯದಿಂದ ಬರುವುದುಂಟೇ?


“ನಾನು ಮಾಡಿದ್ದ ಕೃತ್ಯಗಳನ್ನೆಲ್ಲಾ ಕಂಡಂತೆ ತಿಳಿಸಿದ ಒಬ್ಬ ವ್ಯಕ್ತಿ ಅಲ್ಲಿ ಇದ್ದಾರೆ, ಬಂದು ನೋಡಿ, ಅವರೇ ಅಭಿಷಿಕ್ತನಾದ ಲೋಕೋದ್ಧಾರಕ ಏಕಾಗಿರಬಾರದು?” ಎಂದು ಊರಿನ ಜನರನ್ನು ಕರೆದಳು.


ಪವಿತ್ರಗ್ರಂಥದ ಪ್ರಕಾರ ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕಾಗಿತ್ತೆಂದೂ ಮರಣಹೊಂದಿ ಪುನರುತ್ಥಾನ ಹೊಂದಬೇಕಾಗಿತ್ತೆಂದೂ ಪ್ರತಿಪಾದಿಸಿದನು. ‘ನಾನು ನಿಮಗೆ ಸಾರುತ್ತಿರುವ ಯೇಸುಸ್ವಾಮಿಯೇ ಆ ಉದ್ಧಾರಕ’ ಎಂದು ಸ್ಪಷ್ಟಪಡಿಸಿದನು.


ಸೌಲನಾದರೋ ಮತ್ತಷ್ಟು ಸಾಮರ್ಥ್ಯದಿಂದ ಪ್ರಭು ಯೇಸುವೇ ಲೋಕೋದ್ಧಾರಕನೆಂದು ರುಜುವಾತುಪಡಿಸಿ ದಮಸ್ಕಸಿನ ಯೆಹೂದ್ಯರ ಬಾಯಿಮುಚ್ಚಿಸಿದನು.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


“ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳಿದಳು.


ಆಗ ಅವರು, ಆ ಮಹಿಳೆಗೆ, “ನೀನು ಹೇಳಿದುದರಿಂದ ಮಾತ್ರವೇ ಈಗ ನಾವು ನಂಬುತ್ತಿಲ್ಲ, ನಾವೇ ಕಿವಿಯಾರೆ ಕೇಳಿ ನಂಬಿದ್ದೇವೆ; ಲೋಕೋದ್ಧಾರಕ ಇವರೇ ಎಂದು ನಮಗೀಗ ತಿಳಿಯಿತು,” ಎಂದರು.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಇವನು ಮೊದಲು ತನ್ನ ಸಹೋದರ ಸಿಮೋನನನ್ನು ಕಂಡು, “ನಮಗೆ ‘ಮೆಸ್ಸೀಯ’ ಸಿಕ್ಕಿದ್ದಾರೆ,” ಎಂದು ತಿಳಿಸಿ


ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ” ಎಂದು ಉತ್ತರವಿತ್ತನು.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ?” ಎಂದನು.


“ನೀನು ಅಭಿಷಿಕ್ತನಾದ ಲೋಕೋದ್ಧಾರಕನಾಗಿದ್ದರೆ ನಮಗೆ ಹೇಳು,” ಎಂದು ವಿಚಾರಿಸಿದರು. ಆಗ ಯೇಸು, “ನಾನು ಹೇಳಿದರೆ ನೀವು ನನ್ನನ್ನು ನಂಬುವುದಿಲ್ಲ.


ಆದರೆ ಯೇಸು ಮೌನವಾಗಿದ್ದರು. ಯಾವ ಉತ್ತರವನ್ನೂ ಕೊಡಲಿಲ್ಲ. ಪ್ರಧಾನಯಾಜಕನು ಪುನಃ, “ಸ್ತುತ್ಯ ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕ ನೀನೋ?” ಎಂದು ಕೇಳಿದನು.


“ಅಭಿಷಿಕ್ತನಾದ ಲೋಕೋದ್ಧಾರಕನ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಆತ ಯಾರ ಮಗ?” ಅದಕ್ಕವರು, “ದಾವೀದನ ಪುತ್ರ” ಎಂದು ಉತ್ತರಿಸಿದರು.


ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ?


ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.


ಅದಕ್ಕೆ ಅವರು, “ಹಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ; ಕೆಲವರು ‘ಎಲೀಯನು’ ಎನ್ನುತ್ತಾರೆ; ಮತ್ತೆ ಕೆಲವರು ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ’ ಎನ್ನುತ್ತಾರೆ,” ಎಂದು ಉತ್ತರವಿತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು