Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:29 - ಕನ್ನಡ ಸತ್ಯವೇದವು C.L. Bible (BSI)

29 ಪ್ರಾರ್ಥನೆಮಾಡುವ ಸಮಯದಲ್ಲಿ ಯೇಸುವಿನ ಮುಖಚರ್ಯೆಯು ಮಾರ್ಪಟ್ಟಿತು. ಅವರ ಉಡುಪು ಬೆಳ್ಳಗೆ ಪ್ರಜ್ವಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು. ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬೇರೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೇಸು ಪ್ರಾರ್ಥಿಸುತ್ತಿದ್ದಾಗ, ಆತನ ಮುಖವು ರೂಪಾಂತರವಾಯಿತು. ಆತನ ಬಟ್ಟೆಗಳು ಬೆಳ್ಳಗೆ ಹೊಳೆಯತೊಡಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೇಸು ಪ್ರಾರ್ಥನೆ ಮಾಡುತ್ತಿದ್ದಾಗ, ಅವರ ಮುಖಭಾವವು ಬದಲಾಯಿತು ಮತ್ತು ಅವರ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಜೆಜು ಮಾಗ್ನಿ ಕರ್‍ತಾನಾ ತೆಚೆ ತೊಂಡ್ ಬದಲ್ಲೆ, ಅನಿ ತೆಚೆ ಕಪ್ಡೆ ಫಾಂಡ್ರೆ ಖಡ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:29
17 ತಿಳಿವುಗಳ ಹೋಲಿಕೆ  

ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರು, ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತು.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.


ಅಲಂಕೃತ ರಾಜನನ್ನು ನಿಮ್ಮ ಕಣ್ಣುಗಳು ಕಾಣುವುವು. ಸವಿಸ್ತಾರವಾದ ನಾಡೊಂದನ್ನು ನಿಮ್ಮ ಕಣ್ಣುಗಳು ನೋಡಿ ನಲಿಯುವುವು.


ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ತರುವಾಯ, ಹಳ್ಳಿಯೊಂದಕ್ಕೆ ಪ್ರಯಾಣ ಮಾಡುತ್ತಿದ್ದ ತಮ್ಮ ಇಬ್ಬರು ಶಿಷ್ಯರಿಗೆ ಯೇಸುಸ್ವಾಮಿ ಇನ್ನೊಂದು ರೀತಿಯಲ್ಲಿ ಕಾಣಿಸಿಕೊಂಡರು.


ಜನರೆಲ್ಲರು ಸ್ನಾನದೀಕ್ಷೆ ಪಡೆಯುತ್ತಾ ಇದ್ದರು. ಯೇಸುಸ್ವಾಮಿಯೂ ಬಂದು ಸ್ನಾನದೀಕ್ಷೆಪಡೆದು ಪ್ರಾರ್ಥಿಸುತ್ತಿರಲು, ಆಕಾಶವು ತೆರೆಯಿತು.


ಯೇಸುವಾದರೋ ನಿರ್ಜನ ಪ್ರದೇಶಕ್ಕೆ ಹೋಗಿ ಎಂದಿನಂತೆ ಪ್ರಾರ್ಥನೆಯಲ್ಲಿ ಮಗ್ನರಾಗುತ್ತಿದ್ದರು.


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.


ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. “ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?” ಎಂದು ಯೇಸು ಅವರನ್ನು ಪ್ರಶ್ನಿಸಿದರು.


ಇದ್ದಕ್ಕಿದ್ದ ಹಾಗೆ ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪ್ರವಾದಿಗಳು ಅವರೊಡನೆ ಮಾತನಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು