Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:3 - ಕನ್ನಡ ಸತ್ಯವೇದವು C.L. Bible (BSI)

3 ಕಳುಹಿಸುವಾಗ ಅವರಿಗೆ ಇಂತೆಂದರು, “ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿ; ದಂಡ, ಜೋಳಿಗೆ, ಬುತ್ತಿ ಅಥವಾ ಹಣ ಯಾವುದೂ ಬೇಡ. ಎರಡು ಅಂಗಿಗಳೂ ಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ - ದಾರಿಗೆ ಏನೂ ತಕ್ಕೊಂಡು ಹೋಗಬೇಡಿರಿ, ಕೋಲು ಹಸಿಬೆ ಬುತ್ತಿ ಹಣ ಬೇಡ; ಎರಡಂಗಿಗಳಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನು ಅವರಿಗೆ ಹೇಳಿದ್ದೇನೆಂದರೆ: “ನೀವು ಪ್ರಯಾಣಕ್ಕಾಗಿ ಊರುಗೋಲನ್ನಾಗಲಿ ಚೀಲವನ್ನಾಗಲಿ ಆಹಾರವನ್ನಾಗಲಿ ಹಣವನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ಎರಡು ಅಂಗಿಗಳನ್ನೂ ತೆಗೆದುಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಅವರಿಗೆ, “ನೀವು ಪ್ರಯಾಣಕ್ಕಾಗಿ ಕೋಲು, ಚೀಲ, ರೊಟ್ಟಿ ಅಥವಾ ಹಣವನ್ನು ತೆಗೆದುಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆನಿ ತೆಂಕಾ ಅಶೆ ಸಾಂಗ್ಲ್ಯಾನ್ “ತುಮಿ ಜಾತಾನಾ ವಾಟೆಕ್ ಮನುನ್ ಕಾಯ್ಬಿ ಘೆವ್‍ಕಾಶಿ: ದಾಂಡೊ ಹೊಂವ್ದಿ; ಪಿಸ್ವಿ ಹೊಂವ್ದಿ, ಜೆವಾನ್ ಹೊಂವ್ದಿ,ಪೈಸೆ ಹೊಂವ್ದಿ, ಎಕ್ ಜಾಸ್ತಿಚಿ ಅಂಗಿ ಸೈತ್ ಘೆವ್‍ನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:3
12 ತಿಳಿವುಗಳ ಹೋಲಿಕೆ  

ಬಳಿಕ ಯೇಸುಸ್ವಾಮಿ, “ನಾನು ನಿಮ್ಮನ್ನು ಬುತ್ತಿ, ಜೋಳಿಗೆ, ಜೋಡು ಒಂದೂ ಇಲ್ಲದೆ ಕಳಿಸಿದಾಗ ನಿಮಗೇನಾದರೂ ಕೊರತೆ ಆಯಿತೇ?” ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಅವರು, “ಇಲ್ಲ,” ಎಂದು ಉತ್ತರಕೊಟ್ಟರು.


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಯುದ್ಧಕ್ಕೆ ಹೋಗುವ ಯಾವ ಸೈನಿಕನೂ ಲೋಕವ್ಯವಹಾರಗಳಲ್ಲಿ ಸಿಕ್ಕಿಕೊಳ್ಳನು. ಏಕೆಂದರೆ, ತನ್ನನ್ನು ಸೈನ್ಯಕ್ಕೆ ಸೇರಿಸಿಕೊಂಡವನನ್ನು ಮೆಚ್ಚಿಸಲು ಅವನು ಪ್ರಯತ್ನಿಸುತ್ತಾನೆ.


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.


“ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಉತ್ತರಕೊಟ್ಟನು.


ಎಲೈ ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೆಷ್ಟು ಮಾಡಲಾರರು!


ತರುವಾಯ ಆ ಲೇವಿ ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಬಹುಜನ ಸುಂಕದವರೂ ಇತರರೂ ಯೇಸುವಿನ ಪಂಕ್ತಿಯಲ್ಲೇ ಊಟಕ್ಕೆ ಕುಳಿತಿದ್ದರು.


ಅನಂತರ ಯೇಸುಸ್ವಾಮಿ ಸುತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವಬಿಡಿಸುವ ಅಧಿಕಾರವನ್ನಿತ್ತು, ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.


ಯಾವ ಮನೆಯವರು ನಿಮ್ಮನ್ನು ಬರಮಾಡಿಕೊಳ್ಳುತ್ತಾರೋ ಆ ಮನೆಯಲ್ಲೇ ತಂಗಿರಿ. ಅಲ್ಲಿಂದಲೇ ಮುಂದಕ್ಕೆ ಸಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು