Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:33 - ಕನ್ನಡ ಸತ್ಯವೇದವು C.L. Bible (BSI)

33 ಅವರಿಬ್ಬರೂ ಯೇಸುವನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು - ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು. ತಾನು ಏನು ಹೇಳುತ್ತಿರುವೆನೆಂದೇ ಪೇತ್ರನು ಗ್ರಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ, “ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು” ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆಂದು ತನಗೇ ಗೊತ್ತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇವರು ಆತನನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ - ಗುರುವೇ ನಾವು ಇಲ್ಲೇ ಇರುವದು ಒಳ್ಳೇದು, ಮೂರು ಪರ್ಣಶಾಲೆಗಳನ್ನು ಕಟ್ಟುವೆವು; ನಿನಗೊಂದು ಮೋಶೆಗೊಂದು ಎಲೀಯನಿಗೊಂದು ಎಂದು ಹೇಳಿದನು. ತಾನಂದದ್ದು ತನಗೇ ಗೊತ್ತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಮೋಶೆ ಮತ್ತು ಎಲೀಯ ಆತನನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ಇಲ್ಲಿ ನಾವು ಮೂರು ಗುಡಾರಗಳನ್ನು ಹಾಕುತ್ತೇವೆ. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದು ಹೇಳಿದನು. (ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದು ತಿಳಿಯಲಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು, ನಾವು ನಿಮಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು, ಹೀಗೆ ಮೂರು ಗುಡಾರಗಳನ್ನು ಕಟ್ಟುವೆವು,” ಎಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತಿ ಮಾನ್ಸಾ ಜೆಜುಕ್ ಸೊಡುನ್ ಜಾತಾ-ಜಾತಾನಾಚ್ ಪೆದ್ರುನ್ ಗುರುಜಿ , ಹಿತ್ತೆ ಅಮಿ ಹೊತ್ತೆ ಕವ್ಡೆ ಬರೆ ಹಾಯ್ ನ್ಹಯ್? ಅಮಿ ತಿನ್ ಝೊಪ್ಡಿ ಘಾಲ್ತಾಂವ್, ಎಕ್ ತುಕಾ, ಎಕ್ ಮೊಯ್ಜೆಕ್,ಅನಿ ಅನಿ ಎಕ್ ಎಲಿಯಾಕ್. ಮಟ್ಲ್ಯಾನ್ ತೊ ಕಾಯ್ ಬೊಲಿ ಮನುನ್ ತೆಕಾಚ್ ಗೊತ್ತ್ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:33
13 ತಿಳಿವುಗಳ ಹೋಲಿಕೆ  

“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಆಗ ಫಿಲಿಪ್ಪನು, “ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೇ ಸಾಕು,” ಎಂದನು.


ಅದಕ್ಕೆ ಸಿಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಬಲೆಗಳನ್ನು ಹಾಕುತ್ತೇವೆ,” ಎಂದನು.


ಅದಕ್ಕೆ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೆ? ನಾನು ಪಡೆಯಲಿರುವ ಸ್ನಾನವನ್ನು ಪಡೆಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು ಆಗುತ್ತದೆ,” ಎಂದು ಅವರು ಮರು ನುಡಿದರು.


ಜನರ ಗುಂಪು ಇದ್ದಲ್ಲಿಗೆ ಅವರೆಲ್ಲರು ಮರಳಿಬಂದರು. ಆಗ ಒಬ್ಬನು ಯೇಸುಸ್ವಾಮಿಯ ಬಳಿಗೆ ಬಂದು,


ನಿನ್ನ ಸಾನ್ನಿಧ್ಯ ಸ್ವಾಮಿದೇವಾ, ನನಗೆಂಥ ಸೌಭಾಗ್ಯ I ನಿನ್ನ ಸತ್ಕಾರ್ಯಗಳ ಸಾರಲೆಂದೆ ನಿನ್ನನಾಶ್ರಯಿಸಿಕೊಂಡೆನಯ್ಯಾ II


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ಆಗ ಪೇತ್ರನು ಯೇಸುವಿಗೆ, “ಪ್ರಭೂ, ನಾವು ಇಲ್ಲೇ ಇರುವುದು ಎಷ್ಟು ಒಳ್ಳೆಯದು! ಅಪ್ಪಣೆಯಾದರೆ ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ತಮಗೊಂದು, ಮೋಶೆಗೊಂದು, ಎಲೀಯನಿಗೊಂದು,” ಎಂದನು.


ಆತನು ಇದನ್ನು ಹೇಳುತ್ತಿದ್ದ ಹಾಗೆ ಮೇಘವೊಂದು ಬಂದು ಅವರನ್ನಾವರಿಸಿತು. ಆ ಮೇಘದಲ್ಲಿ ಅವರು ಅದೃಶ್ಯರಾದಾಗ ಶಿಷ್ಯರು ದಿಗಿಲುಗೊಂಡರು.


ಆಗ ಯೊವಾನ್ನನು ಯೇಸುವಿಗೆ, “ಗುರುವೇ, ಯಾವನೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವ ಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲದ ಕಾರಣ ಅವನನ್ನು ತಡೆದೆವು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು