Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:42 - ಕನ್ನಡ ಸತ್ಯವೇದವು C.L. Bible (BSI)

42 ಆ ಹುಡುಗನು ಬರುತ್ತಿರುವಾಗಲೇ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ವಿಲವಿಲನೆ ಒದ್ದಾಡಿಸಿತು. ಆಗ ಯೇಸು ದೆವ್ವವನ್ನು ಗದರಿಸಿ, ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಆ ಹುಡುಗನು ಇನ್ನೂ ಬರುತ್ತಿರುವಾಗ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಯ ಕೈಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆ ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಆ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವನು ಇನ್ನೂ ಬರುತ್ತಿದ್ದಾಗಲೇ, ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ದೆವ್ವವನ್ನು ಗದರಿಸಿ ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಪುನಃ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತೊ ಝಿಲ್ಗೊ ಜೆಜುಚ್ಯಾ ಜಗ್ಗೊಳ್ ಯೆವ್‍ಲಾಗಲ್ಲೊ. ತನ್ನಾ ಗಿರ್‍ಯಾನ್ ತೆಕಾ ಜಿಮ್ನಿಕ್‍ ಪಾಡ್ವುಲ್ಯಾನ್, ಅನಿ ತೆಕಾ ಲೊಳಿ ಸಾರ್ಕೆ ಕರ್‍ಲ್ಯಾನ್ ಜೆಜುನ್ ತ್ಯಾ ಗಿರ್‍ಯಾಕ್ “ಭಾಯ್ರ್ ಜಾ” ಮನುನ್ ತಾಕಿತ್ ದಿಲ್ಯಾನ್. ತನ್ನಾ ತೊ ಗಿರೊ ಗೆಲೊ, ಅನಿ ತೊ ಝಿಲ್ಗೊ ಬರೊ ಹೊಲೊ, ಅನಿ ತೆನಿ ತೆಚ್ಯಾ ಲೆಕಾಕ್ ತ್ಯಾ ಮಾನ್ಸಾಕ್ಡೆ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:42
12 ತಿಳಿವುಗಳ ಹೋಲಿಕೆ  

ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು.


ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”


ಇವನನ್ನು ದೆವ್ವ ಹಿಡಿಯುತ್ತದೆ. ಆಗ ಇದ್ದಕ್ಕಿದ್ದ ಹಾಗೆ ಕಿರುಚಿಕೊಳ್ಳುತ್ತಾನೆ; ವಿಲವಿಲನೆ ಒದ್ದಾಡುತ್ತಾನೆ; ಬಾಯಲ್ಲಿ ನೊರೆ ಕಿತ್ತುಕೊಳ್ಳುತ್ತದೆ; ಆ ದೆವ್ವವು ಇವನನ್ನು ನಿಶ್ಯಕ್ತನನ್ನಾಗಿ ಮಾಡಿಬಿಡುವ ತನಕ ಬಿಟ್ಟುಹೋಗುವುದೇ ಇಲ್ಲ.


ಆಗ ಆ ಹುಡುಗನನ್ನು ಯೇಸುವಿನ ಬಳಿಗೆ ಕರೆತಂದರು. ಯೇಸುವನ್ನು ನೋಡಿದಾಕ್ಷಣ ಆ ದೆವ್ವ ಹುಡುಗನನ್ನು ನೆಲಕ್ಕೆ ಅಪ್ಪಳಿಸಿ ಒದ್ದಾಡಿಸಿತು. ಹುಡುಗ ಹೊರಳಾಡುತ್ತಾ ನೊರೆಕಾರಿದನು.


ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ,” ಎಂದು ಆಜ್ಞಾಪಿಸಲು, ಅವನು ಆಕೆಯನ್ನು ಕರೆದನು. ಆಕೆ ಬಂದಾಗ ಎಲೀಷನು, “ನಿನ್ನ ಮಗನನ್ನುತೆಗೆದುಕೋ,” ಎಂದು ಹೇಳಿದನು.


ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು.


ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡುಹೋಗಿ ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು; ನಿನ್ನ ಮಗ ಜೀವಂತನಾಗಿದ್ದಾನೆ,” ಎಂದನು.


ಇದನ್ನಾಲಿಸಿದ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ದುಷ್ಟ ಪೀಳಿಗೆಯೇ, ಇನ್ನೆಷ್ಟುಕಾಲ ನಿಮ್ಮೊಂದಿಗಿದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದರು.


ದೇವರ ಮಹತ್ವವನ್ನು ಕಂಡ ಎಲ್ಲರೂ ಆಶ್ಚರ್ಯಚಕಿತರಾದರು. ಯೇಸುಸ್ವಾಮಿ ಮಾಡಿದ ಸಕಲ ಮಹತ್ಕಾರ್ಯಗಳನ್ನು ಕುರಿತು ಜನರೆಲ್ಲರೂ ಸೋಜಿಗಪಡುತ್ತಿರುವಲ್ಲಿ, ಶಿಷ್ಯರಿಗೆ,


ಐದು ಆರು ಕಿಲೋಮೀಟರಿನಷ್ಟು ಹುಟ್ಟು ಹಾಕಿರಬೇಕು. ಆಗ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯನ್ನು ಸಮೀಪಿಸುತ್ತಿರುವುದು ಶಿಷ್ಯರಿಗೆ ಕಾಣಿಸಿತು. ಅದನ್ನು ನೋಡಿ ಅವರು ಹೆದರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು