Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:47 - ಕನ್ನಡ ಸತ್ಯವೇದವು C.L. Bible (BSI)

47 ಅವರ ಮನಸ್ಸಿನ ಆಲೋಚನೆಗಳನ್ನು ಅರಿತ ಯೇಸು, ಒಂದು ಚಿಕ್ಕ ಮಗುವನ್ನು ತಂದು ತಮ್ಮ ಪಕ್ಕದಲ್ಲಿ ನಿಲ್ಲಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಯೇಸು ಅವರ ಮನಸ್ಸಿನ ವಿಚಾರವನ್ನು ತಿಳಿದವನಾಗಿ, ಒಂದು ಚಿಕ್ಕಮಗುವನ್ನು ತನ್ನ ಪಕ್ಕದಲ್ಲಿ ನಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಯೇಸು ಅವರ ಮನಸ್ಸಿನ ವಿಚಾರವನ್ನು ತಿಳಿದು ಒಂದು ಚಿಕ್ಕ ಮಗುವನ್ನು ಹಿಡಿದುಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಅವರ ಆಲೋಚನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಒಂದು ಚಿಕ್ಕ ಮಗುವನ್ನು ಕರೆದು ತನ್ನ ಬಳಿಯಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಯೇಸು, ಅವರ ಮನದ ಆಲೋಚನೆಯನ್ನು ತಿಳಿದವರಾಗಿ, ಒಂದು ಮಗುವನ್ನು ತಮ್ಮ ಬಳಿಯಲ್ಲಿ ನಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಜೆಜುಕ್ ತೆಂಚ್ಯಾ ಮನಾತ್ಲೆ ಕಳ್ಳೆ, ತನ್ನಾ ತೆನಿ ಎಕ್ ಪೊರಾಕ್ ಅಪ್ನಾಕ್ಡೆ ಬಲ್ವುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:47
17 ತಿಳಿವುಗಳ ಹೋಲಿಕೆ  

ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಶ್ವಾಸಿಸುತ್ತೇವೆ,” ಎಂದರು.


ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಯೇಸು ಅವರ ಆಲೋಚನೆಗಳನ್ನು ಗ್ರಹಿಸಿಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಆಲೋಚಿಸುತ್ತಾ ಇರುವುದೇನು?


ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, “ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ?


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಜನರನ್ನು ಕುರಿತು ಯಾರೂ ಅವರಿಗೆ ತಿಳಿಸಬೇಕಾದ ಪ್ರಮೇಯವಿರಲಿಲ್ಲ. ಮಾನವನ ಅಂತರಂಗ ಅವರಿಗೆ ಬಹಿರಂಗವಾಗಿತ್ತು.


ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು