Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:48 - ಕನ್ನಡ ಸತ್ಯವೇದವು C.L. Bible (BSI)

48 “ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು; ಯಾಕಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಬಳಿಕ ಯೇಸು ತನ್ನ ಶಿಷ್ಯರಿಗೆ, “ಒಬ್ಬನು ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಒಬ್ಬನು ನನ್ನನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನು ಕಳುಹಿಸಿದಾತನನ್ನೇ (ದೇವರನ್ನು) ಸ್ವೀಕರಿಸಿಕೊಂಡಂತಾಯಿತು. ನಿಮ್ಮಲ್ಲಿ ಯಾವನು ದೀನನಾಗಿದ್ದಾನೋ ಅವನೇ ನಿಮ್ಮಲ್ಲಿ ಪ್ರಮುಖನಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 “ಯಾರು ಈ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳುತ್ತಾರೋ ಅವರು ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ; ಯಾರು ನನ್ನನ್ನು ಸ್ವೀಕರಿಸಿಕೊಳ್ಳುತ್ತಾರೋ ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುತ್ತಾರೆ. ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡವನಾಗಿರುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಅನಿ ತೆಂಕಾ “ಹ್ಯಾ ಪೊರಾಕ್ ಜೆ ಕೊನ್ ಮಾಜ್ಯಾ ನಾವಾನ್ ಸ್ವಿಕಾರ್ ಕರ್‍ತಾ, ತೊ ಮಾಕಾಚ್ ಸ್ವಿಕಾರ್ ಕರ್‍ತಾ, ಅನಿ ಜೆ ಕೊನ್ ಮಾಕಾ ಸ್ವಿಕಾರ್ ಕರ್‍ತಾ, ತೊ ಮಾಕಾ ಧಾಡಲ್ಲ್ಯಾಕ್ ಸ್ವಿಕಾರ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್, ತುಮ್ಚ್ಯಾ ಮದ್ದಿ ಕೊನ್ ಖಾಲ್ತಿ ಹೊತಾ, ತೊ ಸಗ್ಳ್ಯಾಂಚ್ಯಾನ್ಕಿ ಮೊಟೊ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:48
23 ತಿಳಿವುಗಳ ಹೋಲಿಕೆ  

ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.


ದೇವರ ಪರಾಕ್ರಮಕ್ಕೆ ತಗ್ಗಿ ನಮ್ರರಾಗಿ ನಡೆದುಕೊಳ್ಳಿ. ಆಗ ಅವರು ನಿಮ್ಮನ್ನು ಸಕಾಲದಲ್ಲಿ ಮೇಲಕ್ಕೆತ್ತುವರು;


ಆದರೆ ನೀವು ಹಾಗಾಗಬಾರದು; ನಿಮ್ಮಲ್ಲಿ ಅತಿ ದೊಡ್ಡವನು ಅತಿ ಚಿಕ್ಕವನಂತಾಗಬೇಕು.


ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಮಾನವನಾಗಿ ಜನಿಸಿದ ಯಾವನೂ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಆದರೂ ದೇವರ ಸಾಮ್ರಾಜ್ಯದಲ್ಲಿ ಕನಿಷ್ಠನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ,” ಎಂದರು.


“ನನ್ನ ಹೆಸರಿನಲ್ಲಿ ಇಂಥ ಮಗುವೊಂದನ್ನು ಯಾರು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ; ಯಾರು ನನ್ನನ್ನು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನು ಅಲ್ಲ, ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆ,” ಎಂದರು.


ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ.


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.


ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು