Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:56 - ಕನ್ನಡ ಸತ್ಯವೇದವು C.L. Bible (BSI)

56 ಅನಂತರ ಯೇಸು ಮತ್ತು ಶಿಷ್ಯರು ಬೇರೆ ಹಳ್ಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಆಗ ಅವರೆಲ್ಲರು ಬೇರೆ ಹಳ್ಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಬಳಿಕ ಯೇಸು ಮತ್ತು ಆತನ ಶಿಷ್ಯರು ಇನ್ನೊಂದು ಪಟ್ಟಣಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಮನುಷ್ಯಪುತ್ರನಾದ ನಾನು ಮನುಷ್ಯರ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವುದಕ್ಕಾಗಿ ಬಂದೆನು,” ಎಂದು ಹೇಳಿದರು. ಅನಂತರ ಅವರು ಮತ್ತೊಂದು ಹಳ್ಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

56 ತನ್ನಾ ಜೆಜು ಅನಿ ಶಿಸಾ ಅನಿಎಕ್ ಗಾಂವಾಕ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:56
16 ತಿಳಿವುಗಳ ಹೋಲಿಕೆ  

ಕೇಡಿಗೆ ಸೋಲದೆ, ಒಳಿತಿನಿಂದ ಕೇಡನ್ನು ಸೋಲಿಸು.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.


ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.


ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


ಯಾವನಾದರೂ ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದೆಹೋದರೆ ಅಂಥವನಿಗೆ ತೀರ್ಪುಕೊಡುವವನು ನಾನಲ್ಲ. ನಾನು ಬಂದುದು ಲೋಕದ ಉದ್ಧಾರಕ್ಕಾಗಿ, ತೀರ್ಪುಕೊಡುವುದಕ್ಕಾಗಿ ಅಲ್ಲ.


ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು.


ಆಗ ಯೇಸು, “ಸಾಕು ನಿಲ್ಲಿಸು,” ಎಂದು ಹೇಳಿ ಅವನ ಕಿವಿಯನ್ನು ಮುಟ್ಟಿ ಗುಣಪಡಿಸಿದರು.


ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು.


ಯೇಸು ಅವರ ಕಡೆ ತಿರುಗಿ, “ನೀವು ಎಂಥ ಸ್ವಭಾವಿಗಳೆಂದು ನಿಮಗೇ ತಿಳಿಯದು. ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ, ಉದ್ಧಾರಕ್ಕೆ,” ಎಂದು ಅವರನ್ನು ಖಂಡಿಸಿದರು.


ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು.


ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು