Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:10 - ಕನ್ನಡ ಸತ್ಯವೇದವು C.L. Bible (BSI)

10 ಯುದ್ಧವೇನಾದರು ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ನಾಡನ್ನು ಬಿಟ್ಟು ಪಲಾಯನ ಗೈಯಬಹುದು. ಆದ್ದರಿಂದ ಅವರು ವೃದ್ಧಿಯಾಗದಂತೆ ನಾವು ಉಪಾಯ ಹೂಡಬೇಕು,” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ದೇಶವನ್ನು ಬಿಟ್ಟುಹೋದಾರು. ಅವರು ವೃದ್ಧಿಯಾಗದಂತೆ ನಾವು ಉಪಾಯ ಮಾಡೋಣ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯುದ್ಧವೇನಾದರೂ ಸಂಭವಿಸಿದರೆ, ಇಸ್ರೇಲರು ನಮ್ಮ ವೈರಿಗಳೊಡನೆ ಸೇರಿಕೊಂಡು ನಮ್ಮನ್ನು ಸೋಲಿಸಿ ನಮ್ಮಿಂದ ತಪ್ಪಿಸಿಕೊಳ್ಳಬಹುದು. ಆದ್ದರಿಂದ ಅವರು ಅಭಿವೃದ್ಧಿಯಾಗದಂತೆ ನಾವು ಉಪಾಯವನ್ನು ಮಾಡೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು, ನಮಗೆ ವಿರೋಧವಾಗಿ ಯುದ್ಧಮಾಡಿ, ದೇಶವನ್ನು ಬಿಟ್ಟು ಹೋಗಬಹುದು ಆದ್ದರಿಂದ ಅವರು ವೃದ್ಧಿಯಾಗದಂತೆ ಅವರೊಂದಿಗೆ ಬುದ್ಧಿವಂತಿಕೆಯಿಂದ ನಾವು ವರ್ತಿಸೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:10
13 ತಿಳಿವುಗಳ ಹೋಲಿಕೆ  

ಅವನು ನಮ್ಮ ಜನರೊಡನೆ ಕುಯುಕ್ತಿಯಿಂದ ನಡೆದುಕೊಂಡನು. ಅವರ ಹಸುಳೆಗಳನ್ನು ನಿರ್ನಾಮಮಾಡಲು ಅವುಗಳನ್ನು ಹೊರಗೆ ಹಾಕಬೇಕೆಂದು ಬಲಾತ್ಕಾರಮಾಡಿದನು.


ಅವರು ನಿನಗೆ “ನಮ್ಮೊಡನೆ ಬಾ, ಹೊಂಚುಹಾಕಿ ಹತ್ಯೆಮಾಡೋಣ;


ಮಾರ್ಪಡಿಸಿದ ಈಜಿಪ್ಟರನು ತನ್ನ ಜನರನು ದ್ವೇಷಿಸುವಂತೆ I ತನ್ನ ದಾಸರೊಡನವರು ಕುಯುಕ್ತಿಯಿಂದ ನಡೆದುಕೊಳ್ಳುವಂತೆ II


ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II


ಮಾರನೆಯ ದಿನ ಬೆಳಿಗ್ಗೆ ಕೆಲವು ಯೆಹೂದ್ಯರು ಒಟ್ಟುಗೂಡಿ ಒಳಸಂಚುಹೂಡಿದರು. ಪೌಲನನ್ನು ಕೊಲ್ಲುವ ತನಕ ತಾವು ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥ ಮಾಡಿದರು.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೆ ಒಯ್ಯುವ ಹಾದಿಯಾಗಬಹುದು.


ನಿರರ್ಥಕಗೊಳಿಸುತ್ತಾನೆ ವಕ್ರಿಗಳ ತಂತ್ರೋಪಾಯಗಳನು ಸಿಕ್ಕಿಸಿಬಿಡುತ್ತಾನೆ ಅವರವರ ಯೋಜನೆಗಳಲ್ಲೆ ಜ್ಞಾನಿಗಳನು.


ಆದುದರಿಂದ ತಾವು ದಯಮಾಡಿ ಬಂದು ಈ ಜನಕ್ಕೆ ಶಾಪಹಾಕಿ ನಮಗೆ ನೆರವಾಗಬೇಕು. ಆಗ ಇವರನ್ನು ಸೋಲಿಸಿ ಈ ನಾಡಿನಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ತಮ್ಮ ಆಶೀರ್ವಾದದಿಂದ ಶುಭ, ತಮ್ಮ ಶಾಪದಿಂದ ಅಶುಭವುಂಟಾಗುತ್ತದೆ ಎಂದು ನಾನು ಬಲ್ಲೆ,” ಎಂದು ಹೇಳಿಕಳಿಸಿದನು.


ಆದರೆ ಆ ಫಿಲಿಷ್ಟಿಯ ರಾಜರುಗಳು ಅವನ ಮೇಲೆ ಕೋಪಗೊಂಡು, :ಈ ಮನುಷ್ಯನನ್ನು ಕಳುಹಿಸಿಬಿಡು; ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ್ದ ಸ್ಥಳದಲ್ಲೇ ವಾಸಿಸಲಿ; ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೇ ಶತ್ರುವಾಗಿ ನಿಂತಾನು. ಫಿಲಿಷ್ಟಿಯರ ತಲೆಗಳನ್ನು ಕಡುಯುವುದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು