Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:12 - ಕನ್ನಡ ಸತ್ಯವೇದವು C.L. Bible (BSI)

12 ಈಜಿಪ್ಟರು ಅವರಿಗೆ ಎಷ್ಟು ಕಿರುಕುಳ ಕೊಡುತ್ತಿದ್ದರೋ ಅಷ್ಟೂ ಹೆಚ್ಚಿ ಹರಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಐಗುಪ್ತ್ಯರು ಅವರನ್ನು ಎಷ್ಟು ಉಪದ್ರವಪಡಿಸಿದರೂ ಅವರು ಅತ್ಯಧಿಕವಾಗಿ ಹೆಚ್ಚಿ ಹರಡಿಕೊಂಡದ್ದರಿಂದ ಐಗುಪ್ತ್ಯರು ಇಸ್ರಾಯೇಲ್ಯರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈಜಿಪ್ಟಿನವರು ಇಸ್ರೇಲರಿಂದ ಪ್ರಯಾಸಕರವಾದ ಕೆಲಸಗಳನ್ನು ಬಲವಂತವಾಗಿ ಮಾಡಿಸಿದಷ್ಟೂ ಇಸ್ರೇಲರು ಹೆಚ್ಚು ಹರಡಿಕೊಂಡದ್ದರಿಂದ ಈಜಿಪ್ಟಿನ ಜನರು ಇಸ್ರೇಲರಿಗೆ ಹೆಚ್ಚೆಚ್ಚಾಗಿ ಭಯಪಟ್ಚರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಈಜಿಪ್ಟನವರು ಅವರನ್ನು ಎಷ್ಟು ಶ್ರಮಪಡಿಸಿದರೋ, ಅಷ್ಟು ಅಧಿಕವಾಗಿ ಅವರು ಹೆಚ್ಚಿ ಹರಡಿಕೊಂಡದ್ದರಿಂದ ಈಜಿಪ್ಟಿನವರು ಇಸ್ರಾಯೇಲರ ಬಗ್ಗೆ ಹೆದರಿದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:12
17 ತಿಳಿವುಗಳ ಹೋಲಿಕೆ  

ತನ್ನ ಜನರ ಸಂತಾನವನು ಪ್ರಭು ಅಭಿವೃದ್ಧಿಗೊಳಿಸಿದ I ಶತ್ರುಗಳಿಗಿಂತಲೂ ಅವರನು ಬಲಿಷ್ಠರನ್ನಾಗಿಸಿದ II


ಅವನು ತನ್ನ ಜನರಿಗೆ, “ಇಸ್ರಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ, ಬಲಾಢ್ಯರಾಗಿದ್ದಾರೆ, ಅಧೀನದಲ್ಲಿರಿಸಲು ಕಷ್ಟಸಾಧ್ಯ.


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ !” ಎಂದುಕೊಂಡರು.


ಮೂರ್ಖನಿಗೆ ನಾಶ ಕೋಪದಿಂದ ಮೂಢನಿಗೆ ಮರಣ ರೋಷದಿಂದ.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರದ ಮುಂದೆ ನಿಲ್ಲಬಲ್ಲವರಾರು?


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಆದರೂ ಇಸ್ರಯೇಲನ ವಂಶವು ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಿತು. ಅವರು ಶಕ್ತಿಶಾಲಿಗಳಾದರು. ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನೆ ಮಾಡಿದರು. ಅವರಲ್ಲಿ ದೈವಭಕ್ತಿ ಇದ್ದುದರಿಂದ ಅವರಿಗೆ ವಂಶಾಭಿವೃದ್ಧಿಯನ್ನು ಉಂಟುಮಾಡಿದರು. ಇತ್ತ ಇಸ್ರಯೇಲರು ಸಂಖ್ಯೆಯಲ್ಲೂ ಶಕ್ತಿಯಲ್ಲೂ ಪ್ರವರ್ಧಿಸಿದರು.


ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು;


ಇಸ್ರಯೇಲರು ಬಹುಮಂದಿ ಇದ್ದುದರಿಂದ ಮೋವಾಬ್ಯರು ಬಹಳವಾಗಿ ದಿಗಿಲುಪಟ್ಟರು; ಇಸ್ರಯೇಲರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು.


ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.


ಹೆಚ್ಚಿಸಿದಿರಿ ಅವರ ಮಕ್ಕಳನು ಆಗಸದ ನಕ್ಷತ್ರಗಳಷ್ಟೆ; ಬರಮಾಡಿದಿರಿ ಆ ಮಕ್ಕಳನು ವಾಗ್ದತ್ತ ನಾಡಿಗೆ ‘ಅದ ಸೇರಿ, ವಶಮಾಡಿಕೊಳ್ಳಿ’ ಎಂದು ಹೇಳಿದಿರಾ ಪಿತೃಗಳಿಗೆ.


ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು