Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:16 - ಕನ್ನಡ ಸತ್ಯವೇದವು C.L. Bible (BSI)

16 “ನೀವು ಹಿಬ್ರಿಯ ಮಹಿಳೆಯರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗು ಗಂಡಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು,” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಅವರಿಗೆ, “ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರಿಗೆ - ನೀವು ಇಬ್ರಿಯರ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವದು ಗಂಡುಮಗುವಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಇಬ್ರಿಯ ಸ್ತ್ರೀಯರಿಗೆ ನೀವು ಹೆರಿಗೆ ಮಾಡುವಾಗ ಹೆಣ್ಣುಮಗು ಹುಟ್ಟಿದರೆ, ಅದನ್ನು ಉಳಿಸಿರಿ; ಗಂಡುಮಗು ಹುಟ್ಟಿದರೆ ಸಾಯಿಸಿರಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರಿಗೆ, “ನೀವು ಹಿಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವುದಕ್ಕೆ ಹೆರಿಗೆಯ ಸಮಯದಲ್ಲಿ ಅವರನ್ನು ಪರಾಂಬರಿಸುವಾಗ, ಗಂಡು ಮಗುವಾದರೆ ಅದನ್ನು ಕೊಂದುಹಾಕಿರಿ, ಹೆಣ್ಣಾದರೆ ಬದುಕಲಿ,” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:16
7 ತಿಳಿವುಗಳ ಹೋಲಿಕೆ  

ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, "ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು,” ಎಂದು ಆಜ್ಞೆಮಾಡಿದನು.


ಆದರೆ ಗೇಣಿದಾರರು ಮಗನನ್ನು ಕಂಡೊಡನೇ, ‘ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,’ ಎಂದು ತಮ್ಮ ತಮ್ಮಲ್ಲೇ ಒಳಸಂಚು ಮಾಡಿಕೊಂಡರು.


ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು.


ಅವನು ನಮ್ಮ ಜನರೊಡನೆ ಕುಯುಕ್ತಿಯಿಂದ ನಡೆದುಕೊಂಡನು. ಅವರ ಹಸುಳೆಗಳನ್ನು ನಿರ್ನಾಮಮಾಡಲು ಅವುಗಳನ್ನು ಹೊರಗೆ ಹಾಕಬೇಕೆಂದು ಬಲಾತ್ಕಾರಮಾಡಿದನು.


ವಿಶ್ವಾಸವಿದ್ದುದರಿಂದಲೇ ಮೋಶೆ ಹುಟ್ಟಿದಾಗ ಆ ಮಗುವಿನ ಸೌಂದರ್ಯವನ್ನು ಕಂಡು, ತಂದೆತಾಯಿಗಳು ರಾಜಾಜ್ಞೆಗೆ ಅಂಜದೆ, ಮೂರು ತಿಂಗಳವರೆಗೆ ಅದನ್ನು ಬಚ್ಚಿಟ್ಟರು.


ಇದೂ ಸಾಲದೆಂದು ಈಜಿಪ್ಟಿನ ಅರಸನು ಶಿಪ್ರಾ ಮತ್ತು ಪೂಗಾ ಎಂಬ ಹಿಬ್ರಿಯ ಸೂಲಗಿತ್ತಿಯರಿಗೆ,


ಮಾರ್ಪಡಿಸಿದ ಈಜಿಪ್ಟರನು ತನ್ನ ಜನರನು ದ್ವೇಷಿಸುವಂತೆ I ತನ್ನ ದಾಸರೊಡನವರು ಕುಯುಕ್ತಿಯಿಂದ ನಡೆದುಕೊಳ್ಳುವಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು