Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:17 - ಕನ್ನಡ ಸತ್ಯವೇದವು C.L. Bible (BSI)

17 ಆದರೆ ಆ ಸೂಲಗಿತ್ತಿಯರು ದೈವಭಕ್ತರು. ಈಜಿಪ್ಟಿನ ಅರಸ ಹೇಳಿದಂತೆ ಮಾಡದೆ ಗಂಡುಮಕ್ಕಳನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಡುವವರಾದದರಿಂದ ಐಗುಪ್ತ್ಯರ ಅರಸನ ಮಾತಿನಂತೆ ಮಾಡದೆ ಗಂಡುಮಕ್ಕಳನ್ನೂ ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಈಜಿಪ್ಟಿನ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:17
22 ತಿಳಿವುಗಳ ಹೋಲಿಕೆ  

ಅದಕ್ಕೆ ಪ್ರತ್ಯುತ್ತರವಾಗಿ ಪೇತ್ರ ಮತ್ತು ಉಳಿದ ಪ್ರೇಷಿತರು, “ನಾವು ವಿಧೇಯರಾಗಬೇಕಾದದ್ದು ದೇವರಿಗೆ, ಮಾನವರಿಗಲ್ಲ.


ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ಆಗ ಅವರು ರಾಜಸನ್ನಿಧಿಯಲ್ಲಿ, “ರಾಜರೇ, ಜುದೇಯದಿಂದ ಸೆರೆಯಾಳುಗಳಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿಮ್ಮನ್ನಾಗಲಿ, ನಿಮ್ಮ ಹಸ್ತಾಕ್ಷರದ ರುಜುವಿರುವ ಶಾಸನವನ್ನಾಗಲಿ ಮಾನ್ಯಮಾಡುತ್ತಿಲ್ಲ.“ ಬದಲಿಗೆ ದಿನಕ್ಕೆ ಮೂರಾವರ್ತಿ ಪ್ರಾರ್ಥನೆ ಮಾಡುತ್ತಿದ್ದಾನೆ,” ಎಂದು ದೂರಿತ್ತರು.


ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.


ಪಾಪಾತ್ಮನು ನೂರು ಸಾರಿ ಕೆಟ್ಟದ್ದನ್ನು ಮಾಡಿ ದೀರ್ಘಕಾಲ ಬದುಕಿದರೂ ದೇವರಿಗೆ ಹೆದರಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II


ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆ ಇದ್ದರೆ ನಾನು ಹೇಳಿದಂತೆ ಮಾಡಿ;


ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಅದಕ್ಕೆ ಅಬ್ರಹಾಮನು, “ಇಲ್ಲಿಯ ಜನರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದೂ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರು ಎಂದೂ ಭಾವಿಸಿದೆ.


ಆಗ ಆ ಅರಸನು ಅವರನ್ನು ಕರೆಯಿಸಿ, “ನೀವು ಗಂಡುಮಕ್ಕಳನ್ನು ಉಳಿಸಿದ್ದು ಏಕೆ? ಎಂದು ವಿಚಾರಿಸಿದನು.


ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ, “ನೀವು ಹಿಂದಿರುಗಿ ಸರ್ವೇಶ್ವರನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಪಲಾಯನ ಆದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ,” ಎಂದು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಸರ್ವೇಶ್ವರನ ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸುಮಾಡಲಿಲ್ಲ.


ಆದರೆ ಅರಸನು ಯೋವಾಬನಿಗೂ ಇತರ ಸೇನಾಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ, ಅವರು ಇಸ್ರಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟುಹೋದರು.


ಇದನ್ನು ಗಮನಿಸಿದ ಅರಮನೆಯ ದ್ವಾರಪಾಲಕರು, “ನೀನು ಅರಸನ ಆಜ್ಞೆಯನ್ನು ಮೀರುವುದೇಕೆ?” ಎಂದು ಮೊರ್ದೆಕೈಯನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು