Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:19 - ಕನ್ನಡ ಸತ್ಯವೇದವು C.L. Bible (BSI)

19 ಆ ಫರೋಹನಿಗೆ ಸೂಲಗಿತ್ತಿಯರು, “ಹಿಬ್ರಿಯ ಮಹಿಳೆಯರು ಈಜಿಪ್ಟಿನ ಮಹಿಳೆಯರಂತಲ್ಲ; ಏಕೆಂದರೆ ಅವರು ಗಟ್ಟಿಮುಟ್ಟಾದವರು. ಸೂಲಗಿತ್ತಿಯರು ಹತ್ತಿರ ಬರುವುದಕ್ಕೆ ಮುಂಚೆಯೇ ಹೆರುತ್ತಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸೂಲಗಿತ್ತಿಯರು ಫರೋಹನಿಗೆ, “ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತೆ ಅಲ್ಲ, ಅವರು ಬಹು ಚುರುಕು ಬುದ್ಧಿಯವರು. ಸೂಲಗಿತ್ತಿಯು ಅವರ ಹತ್ತಿರ ಬರುವುದಕ್ಕೆ ಮೊದಲೇ ಮಗುವನ್ನು ಹೆರುತ್ತಿದ್ದರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತಲ್ಲ; ಅವರು ಚುರುಕಾಗಿದ್ದಾರೆ; ಅವರು ಸೂಲಗಿತ್ತಿಯು ತಮ್ಮ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುವರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದಾದಿಯರು, “ಇಬ್ರಿಯ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಿಗಿಂತ ಚುರುಕಾಗಿದ್ದಾರೆ. ನಾವು ಅವರಿಗೆ ಸಹಾಯ ಮಾಡುವುದಕ್ಕಿಂತ ಮೊದಲೇ ಅವರು ಹೆರುತ್ತಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸೂಲಗಿತ್ತಿಯರು ಫರೋಹನಿಗೆ, “ಹಿಬ್ರಿಯರ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯರು ಅವರ ಹತ್ತಿರ ಬರುವುದಕ್ಕೆ ಮುಂಚೆಯೇ ಹೆರುತ್ತಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:19
5 ತಿಳಿವುಗಳ ಹೋಲಿಕೆ  

ಅವನು, “ಅರಸರು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟಪ್ಪಣೆಮಾಡಿ ನನ್ನನ್ನು ಕಳುಹಿಸಿದ್ದಾರೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ.


ಆಗ ಆ ಅರಸನು ಅವರನ್ನು ಕರೆಯಿಸಿ, “ನೀವು ಗಂಡುಮಕ್ಕಳನ್ನು ಉಳಿಸಿದ್ದು ಏಕೆ? ಎಂದು ವಿಚಾರಿಸಿದನು.


ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನೆ ಮಾಡಿದರು. ಅವರಲ್ಲಿ ದೈವಭಕ್ತಿ ಇದ್ದುದರಿಂದ ಅವರಿಗೆ ವಂಶಾಭಿವೃದ್ಧಿಯನ್ನು ಉಂಟುಮಾಡಿದರು. ಇತ್ತ ಇಸ್ರಯೇಲರು ಸಂಖ್ಯೆಯಲ್ಲೂ ಶಕ್ತಿಯಲ್ಲೂ ಪ್ರವರ್ಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು