Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:20 - ಕನ್ನಡ ಸತ್ಯವೇದವು C.L. Bible (BSI)

20-21 ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನೆ ಮಾಡಿದರು. ಅವರಲ್ಲಿ ದೈವಭಕ್ತಿ ಇದ್ದುದರಿಂದ ಅವರಿಗೆ ವಂಶಾಭಿವೃದ್ಧಿಯನ್ನು ಉಂಟುಮಾಡಿದರು. ಇತ್ತ ಇಸ್ರಯೇಲರು ಸಂಖ್ಯೆಯಲ್ಲೂ ಶಕ್ತಿಯಲ್ಲೂ ಪ್ರವರ್ಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದ್ದರಿಂದ ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದನು. ಇದರಿಂದ ಇಸ್ರಾಯೇಲ್ ಜನರು ಹೆಚ್ಚಾಗಿ ಬಹಳ ಬಲಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದೇವರು ಆ ಸೂಲಗಿತ್ತಿಯರಿಗೆ ಹಿತವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20-21 ಈ ದಾದಿಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿದ್ದ ಕಾರಣ ಆತನು ಅವರನ್ನೂ ಅವರ ಕುಟುಂಬಗಳನ್ನೂ ಅಭಿವೃದ್ಧಿಪಡಿಸಿದನು. ಇದಲ್ಲದೆ ಇಸ್ರೇಲರ ಸಂಖ್ಯೆಯು ಅಧಿಕವಾಗಿ ಬೆಳೆಯತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದರು. ಇದಲ್ಲದೆ ಇಸ್ರಾಯೇಲರು ಸಂಖ್ಯೆಯಲ್ಲೂ ಹೆಚ್ಚಾಗಿ ಬಹು ಬಲಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:20
17 ತಿಳಿವುಗಳ ಹೋಲಿಕೆ  

ಪಾಪಾತ್ಮನು ನೂರು ಸಾರಿ ಕೆಟ್ಟದ್ದನ್ನು ಮಾಡಿ ದೀರ್ಘಕಾಲ ಬದುಕಿದರೂ ದೇವರಿಗೆ ಹೆದರಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.


ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಆಹಾರವನೀಯುವನು ಭಯಭಕ್ತಿಯುಳ್ಳವರಿಗೆ I ತನ್ನೊಡಂಬಡಿಕೆಯ ಚಿರ ನೆನಪಿರುವುದು ಆತನಿಗೆ II


ಆತನಲ್ಲಿ ಭಯಭಕ್ತಿಯುಳ್ಳವರಿಗೆ I ಆತನ ಪ್ರೀತಿ ತಲತಲಾಂತರದವರೆಗೆ II


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II


ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II


ನಾ ಹೊತ್ತ ಹರಕೆಗಳಿಗೆ ದೇವಾ ನೀ ಲಕ್ಷ್ಯವಿತ್ತೆ I ನಿನ್ನ ಭಕ್ತರಿಗೆ ಸಿಗುವ ಭಾದ್ಯತೆಯ ನನಗೂ ಇತ್ತೆ II


ಈಜಿಪ್ಟರು ಅವರಿಗೆ ಎಷ್ಟು ಕಿರುಕುಳ ಕೊಡುತ್ತಿದ್ದರೋ ಅಷ್ಟೂ ಹೆಚ್ಚಿ ಹರಡಿಕೊಳ್ಳುತ್ತಿದ್ದರು.


ಆದರೂ ಇಸ್ರಯೇಲನ ವಂಶವು ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಿತು. ಅವರು ಶಕ್ತಿಶಾಲಿಗಳಾದರು. ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ಆ ಫರೋಹನಿಗೆ ಸೂಲಗಿತ್ತಿಯರು, “ಹಿಬ್ರಿಯ ಮಹಿಳೆಯರು ಈಜಿಪ್ಟಿನ ಮಹಿಳೆಯರಂತಲ್ಲ; ಏಕೆಂದರೆ ಅವರು ಗಟ್ಟಿಮುಟ್ಟಾದವರು. ಸೂಲಗಿತ್ತಿಯರು ಹತ್ತಿರ ಬರುವುದಕ್ಕೆ ಮುಂಚೆಯೇ ಹೆರುತ್ತಾರೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು