Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:8 - ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಹೊಸ ರಾಜನೊಬ್ಬನು ಈಜಿಪ್ಟ್ ದೇಶದ ಆಳ್ವಿಕೆಗೆ ಬಂದನು. ಅವನಿಗೆ ಜೋಸೆಫನ ವಿಷಯ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತರುವಾಯ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಐಗುಪ್ತದೇಶದ ಆಳಿಕೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಳಿಕ ಒಬ್ಬ ಹೊಸ ರಾಜನು ಈಜಿಪ್ಟನ್ನು ಆಳತೊಡಗಿದನು. ಈ ರಾಜನಿಗೆ ಯೋಸೇಫನ ವಿಷಯವಾಗಿ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತರುವಾಯ ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:8
10 ತಿಳಿವುಗಳ ಹೋಲಿಕೆ  

ಕಡೆಗೆ ಜೋಸೆಫನನ್ನೇ ಅರಿಯದ ಬೇರೊಬ್ಬ ಅರಸ ರಾಜ್ಯವಾಳಲಾರಂಭಿಸಿದನು.


ಆಗ ಅಲ್ಲಿದ್ದವರು ತಮ್ಮಲ್ಲೇ ಒಬ್ಬ. ಜ್ಞಾನಿಯನ್ನು ಕಂಡುಹಿಡಿದರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದ. ಆದರೆ ಆ ಬಡಜ್ಞಾನಿಯನ್ನು ಆಮೇಲೆ ಯಾರೂ ಸ್ಮರಿಸಲಿಲ್ಲ.


ಅವನು ನಮ್ಮ ಜನರೊಡನೆ ಕುಯುಕ್ತಿಯಿಂದ ನಡೆದುಕೊಂಡನು. ಅವರ ಹಸುಳೆಗಳನ್ನು ನಿರ್ನಾಮಮಾಡಲು ಅವುಗಳನ್ನು ಹೊರಗೆ ಹಾಕಬೇಕೆಂದು ಬಲಾತ್ಕಾರಮಾಡಿದನು.


ಈಜಿಪ್ಟರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.


ಮಾರ್ಪಡಿಸಿದ ಈಜಿಪ್ಟರನು ತನ್ನ ಜನರನು ದ್ವೇಷಿಸುವಂತೆ I ತನ್ನ ದಾಸರೊಡನವರು ಕುಯುಕ್ತಿಯಿಂದ ನಡೆದುಕೊಳ್ಳುವಂತೆ II


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಈಗ ಕೇಳು; “ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.


ನೀನು ಹೋಗಿ ಇಸ್ರಯೇಲರ ಹಿರಿಯರನ್ನು ಕೂಡಿಸು. ಅವರಿಗೆ, “ನಿಮ್ಮ ಪೂರ್ವಜರ ದೇವರು, ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ.


ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು