Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ಫರೋಹನು, “ನೀವು ನಿಮ್ಮ ಮನೆಯವರೆಲ್ಲರನ್ನು ಕರೆದುಕೊಂಡು ಹೋಗುವುದಕ್ಕೆ ನಾನೆಂದಿಗೂ ಅಪ್ಪಣೆಕೊಡುವುದಿಲ್ಲ. ಕೊಟ್ಟೆನಾದರೆ ಸರ್ವೇಶ್ವರನ ದಯೆಯೊಂದೇ ನಿಮ್ಮನ್ನು ಕಾಪಾಡಬೇಕಾಗುವುದು. ನೋಡಿ, ನೀವು ದುರಾಲೋಚನೆಯಿಂದ ಕೂಡಿದವರು ಎಂಬುದು ಸರಿಯಷ್ಟೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಫರೋಹನು, “ನಾನು ನಿಮ್ಮನ್ನು ಮತ್ತು ನಿಮ್ಮ ಮಕ್ಕಳನ್ನು ಹೋಗುವುದಕ್ಕೆ ಅಪ್ಪಣೆ ಕೊಡುವುದಿಲ್ಲ; ಕಳುಹಿಸಿಕೊಟ್ಟರೆ, ಯೆಹೋವನು ನಿಮ್ಮ ಸಂಗಡವಿರುವನು. ನೋಡಿ, ನೀವು ದುರಾಲೋಚನೆಯಿಂದ ಕೂಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಫರೋಹನು - ನೀವು ನಿಮ್ಮ ಮನೆಯವರೆಲ್ಲರನ್ನು ಕರೆದುಕೊಂಡು ಹೋಗುವದಕ್ಕೆ ನಾನು ಎಂದಿಗೂ ಅಪ್ಪಣೆ ಕೊಡುವದಿಲ್ಲ; ನಾನು ಅಪ್ಪಣೆಕೊಟ್ಟರೆ ಯೆಹೋವನ ದಯವು ನಿಮಗುಂಟಾಗಬಹುದು, ಸರಿ. ನೋಡಿಕೊಳ್ಳಿರಿ, ನೀವು ದುರಾಲೋಚನೆ ಮಾಡಿಕೊಂಡವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಫರೋಹನು ಅವರಿಗೆ, “ಯೆಹೋವನಾಣೆ, ನೀವು ನಿಮ್ಮ ಸ್ತ್ರೀಯರನ್ನೂ ಮಕ್ಕಳನ್ನೂ ಕರೆದುಕೊಂಡು ಹೋಗಲು ನಾನು ಅನುಮತಿ ಕೊಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಫರೋಹನು ಅವರಿಗೆ, “ನಾನು ನಿಮ್ಮ ಮಡದಿ ಮಕ್ಕಳನ್ನೂ ಕಳುಹಿಸಿಕೊಟ್ಟು, ಯೆಹೋವ ದೇವರು ನಿಮ್ಮ ಸಂಗಡ ಇರಲಿ ಎಂದು ನಾನು ಹೇಳಬಯಸುವಿರೋ? ಇಲ್ಲಾ! ನೀವು ಕೇಡು ಮಾಡಲು ನಿರ್ಧರಿಸಿರುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:10
7 ತಿಳಿವುಗಳ ಹೋಲಿಕೆ  

ನೀವು ಹಿಜ್ಕೀಯನಿಂದ ಮರುಳಾಗಿ ಮೋಸಹೋಗಬೇಡಿ; ಅವನನ್ನು ನಂಬಲೂಬೇಡಿ. ಯಾವ ರಾಜ್ಯಜನಾಂಗಗಳ ದೇವತೆಯೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆಹೋದರು. ಅಂದ ಮೇಲೆ, ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ?".


ಸರ್ವೇಶ್ವರ ಸ್ವಾಮಿ ಅವರಿಗೆ ಹಗಲು ಹೊತ್ತಿನಲ್ಲಿ ದಾರಿತೋರಿಸಲು ಮೇಘಸ್ತಂಭ ರೂಪದಲ್ಲೂ ರಾತ್ರಿವೇಳೆಯಲ್ಲಿ ಬೆಳಕನ್ನೀಯಲು ಅಗ್ನಿಸ್ತಂಭ ರೂಪದಲ್ಲೂ ಅವರ ಮುಂದೆ ಸಾಗಿದರು. ಹೀಗೆ ಅವರು ಹಗಲಿರುಳು ಪ್ರಯಾಣ ಮಾಡಿದರು.


ಸ್ವಾಮಿಯ ಅಪ್ಪಣೆಯಿಲ್ಲದೆ ಯಾರ ಮಾತೂ ಸಾರ್ಥಕವಾಗದು.


ಅದಕ್ಕೆ ಮೋಶೆ, “ನಾವು ಸರ್ವೇಶ್ವರ ಸ್ವಾಮಿಗಾಗಿ ಹಬ್ಬವನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು, ಮುದುಕರು ಎಲ್ಲರು ಹೋಗುತ್ತೇವೆ; ಗಂಡುಹೆಣ್ಣು ಮಕ್ಕಳನ್ನೂ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ,” ಎಂದು ಉತ್ತರಕೊಟ್ಟನು.


ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಸರ್ವೇಶ್ವರನನ್ನು ಆರಾಧಿಸಬಹುದು. ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೆ?” ಎಂದು ಹೇಳಿ ಅವರನ್ನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.


ಫರೋಹನು ಮೋಶೆಯನ್ನು ಕರೆಯಿಸಿ, “ನೀವು ಹೋಗಿ ಸರ್ವೇಶ್ವರನಿಗೆ ಆರಾಧನೆ ಮಾಡಿಬರಬಹುದು; ನಿಮ್ಮ ಮಡದಿ ಮಕ್ಕಳೂ ಹೋಗಿಬರಬಹುದು; ನಿಮ್ಮ ದನಕುರಿಗಳನ್ನು ಮಾತ್ರ ಇಲ್ಲೇ ಬಿಟ್ಟು ಹೋಗಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು