Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:11 - ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಸರ್ವೇಶ್ವರನನ್ನು ಆರಾಧಿಸಬಹುದು. ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೆ?” ಎಂದು ಹೇಳಿ ಅವರನ್ನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಯೆಹೋವನನ್ನು ಆರಾಧಿಸಿ ಬರಬಹುದು. ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೇ” ಎಂದು ಹೇಳಿ ಅವರನ್ನು ಫರೋಹನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಯೆಹೋವನನ್ನು ಆರಾಧಿಸಿ ಬರಬಹುದು; ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೇ ಎಂದು ಹೇಳಿ ಅವರನ್ನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ನನಗೆ ವಿರೋಧವಾಗಿ ಸಂಚುಮಾಡುತ್ತಿರುವುದು ಈಗ ಸ್ಪಷ್ಟವಾಯಿತು” ಎಂದು ಹೇಳಿದನು. ಬಳಿಕ ಫರೋಹನು ಮೋಶೆ ಆರೋನರನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಾಗೆ ಮಾಡದೆ, ಗಂಡಸರಾದ ನೀವು ಮಾತ್ರ ಹೋಗಿ ಯೆಹೋವ ದೇವರಿಗೆ ಆರಾಧನೆ ಮಾಡಿರಿ, ಏಕೆಂದರೆ ಇದನ್ನೇ ನೀವು ಬಯಸಿದಿರಿ,” ಎಂದನು. ತರುವಾಯ ಫರೋಹನು ಅವರನ್ನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:11
5 ತಿಳಿವುಗಳ ಹೋಲಿಕೆ  

ಅವನು ಮೋಶೆಗೆ, “ಇಲ್ಲಿಂದ ಹೊರಡು; ಇನ್ನು ಮುಂದೆ ನನ್ನ ಸಮ್ಮುಖಕ್ಕೆ ಬರಲೇ ಬೇಡ, ಎಚ್ಚರಿಕೆ! ತಿರುಗಿ ಬಂದೆಯಾದರೆ ಮರಣದಂಡನೆ ಆಗುವುದು,” ಎಂದು ಹೇಳಿದನು.


ಸುಳ್ಳು ಕಲ್ಪಿಸಿಹರಾ ಗರ್ವಿಗಳು ನಿನಗೆ ವಿರುದ್ಧವಾಗಿ I ನಾನೋ ಪಾಲಿಪೆ ನಿನ್ನ ನಿಯಮಗಳನು ಹೃತ್ಪೂರ್ವಕವಾಗಿ II


ಅವರಿಗೆ ಆ ಈಜಿಪ್ಟರ ಅರಸನು, “ಎಲೈ ಮೋಶೆ - ಆರೋನರೇ, ನೀವು ಮಾಡುತ್ತಾ ಇರುವುದೇನು? ಈ ಜನರು ತಮ್ಮ ಕೆಲಸವನ್ನು ಬಿಡುವಂತೆ ಮಾಡುತ್ತಿದ್ದೀರಿ. ನಡೆಯಿರಿ ಗುಲಾಮಗಿರಿಗೆ” ಎಂದುಬಿಟ್ಟನು.


ಆಗ ಫರೋಹನು, “ನೀವು ನಿಮ್ಮ ಮನೆಯವರೆಲ್ಲರನ್ನು ಕರೆದುಕೊಂಡು ಹೋಗುವುದಕ್ಕೆ ನಾನೆಂದಿಗೂ ಅಪ್ಪಣೆಕೊಡುವುದಿಲ್ಲ. ಕೊಟ್ಟೆನಾದರೆ ಸರ್ವೇಶ್ವರನ ದಯೆಯೊಂದೇ ನಿಮ್ಮನ್ನು ಕಾಪಾಡಬೇಕಾಗುವುದು. ನೋಡಿ, ನೀವು ದುರಾಲೋಚನೆಯಿಂದ ಕೂಡಿದವರು ಎಂಬುದು ಸರಿಯಷ್ಟೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು