Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:16 - ಕನ್ನಡ ಸತ್ಯವೇದವು C.L. Bible (BSI)

16 ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕೂಡಲೆ ಕರೆಯಿಸಿ, “ನಾನು ನಿಮ್ಮ ದೇವರಾದ ಸರ್ವೇಶ್ವರನಿಗೂ ನಿಮಗೂ ದ್ರೋಹಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ, “ನಾನು ನಿಮ್ಮ ದೇವರಾದ ಯೆಹೋವನಿಗೂ, ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರಿಸಿ - ನಾನು ನಿಮ್ಮ ದೇವರಾದ ಯೆಹೋವನಿಗೂ ನಿಮಗೂ ಪಾಪಮಾಡಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಫರೋಹನು ಕೂಡಲೇ ಮೋಶೆ ಆರೋನರನ್ನು ಕರೆಸಿ, “ನಾನು ನಿಮ್ಮ ದೇವರಾದ ಯೆಹೋವನಿಗೂ ನಿಮಗೂ ವಿರುದ್ಧವಾಗಿ ಪಾಪ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ, “ನಾನು ನಿಮ್ಮ ದೇವರಾದ ಯೆಹೋವ ದೇವರಿಗೂ, ನಿಮಗೂ ವಿರೋಧವಾಗಿ ಪಾಪಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:16
14 ತಿಳಿವುಗಳ ಹೋಲಿಕೆ  

ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಸರ್ವೇಶ್ವರನು ಸತ್ಯವಂತನು; ನಾನೂ ನನ್ನ ಜನರೂ ತಪ್ಪಿತಸ್ಥರು.


“ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಒಡೆಯರೇ, ತಮ್ಮ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದುದರಿಂದಲೇ ನಾನು ಈ ದಿನ ಅರಸನನ್ನು ಸ್ವಾಗತಿಸುವುದಕ್ಕೆ ಎಲ್ಲಾ ಜೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ,” ಎಂದು ಹೇಳಿದನು.


ಆಗ ಸೌಲನು, “ನಾನು ಪಾಪಮಾಡಿದೆ, ದಾವೀದನೇ, ನನ್ನ ಪುತ್ರನೇ, ಹಿಂದಿರುಗಿ ಬಾ; ಈ ದಿನ ನನ್ನ ಜೀವ ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದೆಂದು ಮಾನ್ಯವಾಯಿತು. ಆದುದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವುದಿಲ್ಲ. ಈವರೆಗೆ ನಾನು ಮಾಡಿದ್ದು ಹುಚ್ಚುತನ ಹಾಗೂ ದೊಡ್ಡ ತಪ್ಪು,” ಎಂದು ಹೇಳಿದನು.


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಯೇಲರ ಮುಂದೆ ಹಾಗು ಜನರ ಹಿರಿಯರ ಮುಂದೆ ನನ್ನ ಮಾನವನ್ನು ಉಳಿಸಿ; ನಾನು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು ಶಕ್ತನಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಬೇಡಿಕೊಂಡನು.


ಸೌಲನು ಸಮುವೇಲನಿಗೆ, “ನಾನು ಸರ್ವೇಶ್ವರನ ಮತ್ತು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆ.


ಅದಕ್ಕೆ ಬಿಳಾಮನು, “ನಾನು ಪಾಪಮಾಡಿದೆ, ನೀನೆ ನನಗೆದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯದೆ ಹೋಯಿತು. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ,” ಎಂದನು.


ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಸಿ, “ನೀವು ಹೋಗಿ ಈ ದೇಶದಲ್ಲೇ ನಿಮ್ಮ ದೇವರಿಗೆ ಬಲಿಯನ್ನೊಪ್ಪಿಸಬಹುದು,” ಎಂದನು.


ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.


ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು