ವಿಮೋಚನಕಾಂಡ 10:2 - ಕನ್ನಡ ಸತ್ಯವೇದವು C.L. Bible (BSI)2 ಇಸ್ರಯೇಲರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ಈ ಸೂಚಕಕಾರ್ಯಗಳನ್ನು ತಿಳಿಸಬೇಕು; ಅಲ್ಲದೆ ಸರ್ವೇಶ್ವರ ಆದ ನಾನು ಈಜಿಪ್ಟಿನವರನ್ನು ಇಷ್ಟಬಂದ ಹಾಗೆ ಆಡಿಸಿ ದಂಡಿಸಿದೆನೆಂದು ತಿಳಿಸಬೇಕು. ಹೀಗೆ ನಾನೇ ಸರ್ವೇಶ್ವರನೆಂದು ಈ ಸೂಚಕಕಾರ್ಯಗಳಿಂದ ನೀವು ತಿಳಿದುಕೊಳ್ಳುವಿರಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಸ್ರಾಯೇಲರು ತಮ್ಮ ಮಕ್ಕಳಿಗೂ, ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡೆಸಿರುವ ಈ ಮಹತ್ಕಾರ್ಯಗಳನ್ನು ವಿವರಿಸಿ ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದ ಹಾಗೆ ಶಿಕ್ಷಿಸಿದನು ಎಂಬುದಾಗಿ ತಿಳಿಸಬೇಕು. ಹೀಗೆ ನಾನು ಫರೋಹನ ಹೃದಯವನ್ನು, ಅವನ ಪರಿವಾರದವರ ಹೃದಯಗಳನ್ನೂ ಕಠಿಣಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ಯರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡಿಸಿರುವ ಮಹತ್ಕಾರ್ಯಗಳನ್ನು ವಿವರಿಸಿ - ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದಂತೆ ಆಡಿಸಿ ಶಿಕ್ಷಿಸಿದನು ಎಂಬದಾಗಿ ತಿಳಿಸುವದಕ್ಕೂ ನಾನು ಫರೋಹನ ಹೃದಯವನ್ನೂ ಅವನ ಪರಿವಾರದವರ ಹೃದಯಗಳನ್ನೂ ಮೊಂಡುಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳುಕೊಳ್ಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಈಜಿಪ್ಟಿನಲ್ಲಿ ಏನು ಮಾಡಿದೆನೆಂದೂ, ನಾನೇ ಯೆಹೋವ ದೇವರೆಂದೂ ನೀವು ತಿಳಿದುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಅದ್ಭುತ ಸೂಚಕಕಾರ್ಯಗಳನ್ನು ತಿಳಿಸಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |