Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:21 - ಕನ್ನಡ ಸತ್ಯವೇದವು C.L. Bible (BSI)

21 ಆ ಬಳಿಕ ಸರ್ವೇಶ್ವರ ಮೋಶೆಗೆ, “ಆಕಾಶದತ್ತ ನಿನ್ನ ಕೈಚಾಚು. ಆಗ ಈಜಿಪ್ಟ್ ದೇಶದಲ್ಲೆಲ್ಲಾ ಕತ್ತಲೆಯುಂಟಾಗುವುದು. ಜನರು ತಡವರಿಸಿ ನಡೆಯಬೇಕಾಗುವಷ್ಟು ಕತ್ತಲೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತರುವಾಯ ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಯನ್ನು ಚಾಚು. ಆಗ ಐಗುಪ್ತ ದೇಶದಲ್ಲೆಲ್ಲಾ ಕತ್ತಲು ಉಂಟಾಗುವುದು. ಆ ಕತ್ತಲೆಯಿಂದಾಗಿ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ತರುವಾಯ ಯೆಹೋವನು ಮೋಶೆಗೆ - ಆಕಾಶಕ್ಕೆ ನಿನ್ನ ಕೈ ಚಾಚು; ಆಗ ಐಗುಪ್ತದೇಶದಲ್ಲೆಲ್ಲಾ ಕತ್ತಲುಂಟಾಗುವದು; ಆ ಕತ್ತಲಿನಿಂದ ಜನರು ತಡವರಿಸುತ್ತಾ ನಡೆಯುವರೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಳಿಕ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು. ಆಗ ಕಾರ್ಗತ್ತಲೆಯು ಈಜಿಪ್ಟನ್ನು ಆವರಿಸುವುದು. ಆ ಕಾರ್ಗತ್ತಲೆಯಿಂದ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟ್ ದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:21
23 ತಿಳಿವುಗಳ ಹೋಲಿಕೆ  

ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.


ಈ ಕಳ್ಳಬೋಧಕರು ನೀರಿಲ್ಲದ ಬಾವಿಗಳು, ಬಿರುಗಾಳಿಯಿಂದ ಚದರಿಹೊಗುವ ಮಂಜುಮೋಡಗಳು, ಕಾರ್ಗತ್ತಲಿನ ಕಂದಕವೇ ಅವರ ಪಾಲಿಗೆ ಕಟ್ಟಿಟ್ಟ ಬುತ್ತಿ.


ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.


ಆಗ ಸುಮಾರು ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ಸೂರ್ಯನು ಕಾಂತಿಹೀನನಾದನು; ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಆಗ ನಡುಮಧ್ಯಾಹ್ನ. ಆ ಹೊತ್ತಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.


ಕಾಳ ರಾತ್ರಿಯಾಯಿತು ಪ್ರಭು ಕಳಿಸಲು ಕತ್ತಲನು I ಈಜಿಪ್ಟರಾದರೊ ಇದಿರಿಸಿದರು ಆತನ ಮಾತನು II


ಕುರುಡರಂತೆ ನಡುಮಧ್ಯಾಹ್ನದಲ್ಲೂ ಕತ್ತಲಾಯಿತೆಂದು ನೀವು ತಡವರಿಸುವಿರಿ; ನೀವು ಮಾಡುವ ಕೆಲಸ ಯಾವುದೂ ಕೈಗೂಡುವುದಿಲ್ಲ. ಅನ್ಯರು ನಿಮ್ಮನ್ನು ನಿರಂತರವಾಗಿ ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು. ನಿಮಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.


ಸರ್ವೇಶ್ವರ ಮೋಶೆಗೆ; “ಆಕಾಶದತ್ತ ನಿನ್ನ ಕೈಚಾಚು; ಆಗ ಈಜಿಪ್ಟ್ ದೇಶದಲ್ಲೆಲ್ಲಾ ಆನೆಕಲ್ಲಿನ ಮಳೆ ಬೀಳುವುದು - ಮನುಷ್ಯರ ಮೇಲೂ ಮೃಗಗಳ ಮೇಲೂ ಹೊಲದಲ್ಲಿನ ಪೈರುಪಚ್ಚೆಗಳ ಮೇಲೂ ಬೀಳುವುದು,” ಎಂದು ಹೇಳಿದರು.


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲೇ ಮರೆಯಾಗುತ್ತದೆ. ಅದರ ಹೆಸರು ಕಾರಿರುಳು.


“ಜ್ಞಾನಿಗೆ ಹಣೆಯಲ್ಲಿ ಕಣ್ಣು, ಮೂಢನೋ ಕತ್ತಲೆಯಲ್ಲಿ ನಡೆಯುತ್ತಾನೆ". ಆದರೆ ಇವರಿಬ್ಬರ ಗತಿ ಒಂದೇ ಎಂದು ಕಂಡುಬಂದಿತು.


ಸುರಿಸಿದನು ಕೋಪರೌದ್ರಗಳನು, ಉಗ್ರಹಿಂಸೆಗಳನು I ಕಳಿಸಿದನವರ ಮೇಲೆ ಸಂಹಾರಕ ದೂತಗಣಗಳನು II


ಇಳಿಜಾರು, ಕಾರಿರುಳು ಇರುವ ಹಾದಿಯಲಿ I ಪ್ರಭುವಿನ ದೂತನವರನು ಓಡಿಸಿಬಿಡಲಿ II


ನಾಲ್ಕನೆಯ ದೇವದೂತನು ತುತೂರಿಯನ್ನು ಊದಿದನು. ಸೂರ್ಯಚಂದ್ರ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗಕ್ಕೆ ಧಕ್ಕೆ ಉಂಟಾಯಿತು. ಅವುಗಳ ಮೂರನೆಯ ಒಂದು ಭಾಗ ಕಾಂತಿಹೀನವಾಯಿತು. ಇದರಿಂದಾಗಿ ಹಗಲಿನಲ್ಲೂ ರಾತ್ರಿಯಲ್ಲೂ ಮೂರನೆಯ ಒಂದು ಭಾಗದಷ್ಟು ಬೆಳಕು ಕಡಿಮೆಯಾಯಿತು.


ಸರ್ವೇಶ್ವರ ಮತ್ತೆ ಮೋಶೆಗೆ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟ್ ದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳು. ಅವನು ಚಾಚುವಾಗ ಆ ನೀರೆಲ್ಲ ರಕ್ತವಾಗುವುದು. ಈಜಿಪ್ಟ್ ದೇಶದಲ್ಲೆಲ್ಲೂ ಮರದ ತೊಟ್ಟಿಗಳಲ್ಲೂ ಕಲ್ಲಿನ ಬಾನೆಗಳಲ್ಲೂ ಕೂಡ ರಕ್ತ ತುಂಬಿರುವುದು.”


ನಿನ್ನ ಬೆಳಕನು ನಾ ನಂದಿಸಿ ಕತ್ತಲಾಗಿಸುವಾಗ, ಮುಚ್ಚುವೆನು ಸೂರ್ಯಚಂದ್ರ ನಕ್ಷತ್ರಗಳನು ಮೋಡಮುಸುಕಿನಿಂದ.


ನಿಮ್ಮ ಮುಂದುಗಡೆಯಲ್ಲೇ ಹೋಗುವ ನಿಮ್ಮ ದೇವರಾದ ಸರ್ವೇಶ್ವರ ಈಜಿಪ್ಟ್ ದೇಶದಲ್ಲೂ ನೀವು ನೋಡಿದ ಮರುಭೂಮಿಯಲ್ಲೂ ಪ್ರತ್ಯಕ್ಷರಾಗಿ ನಿಮ್ಮ ಪರವಾಗಿ ಯುದ್ಧಮಾಡಿದಂತೆಯೇ, ಈಗಲೂ ನಿಮ್ಮ ಕಡೆಯವರಾಗಿದ್ದು ಯುದ್ಧಮಾಡುವರು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು