Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:22 - ಕನ್ನಡ ಸತ್ಯವೇದವು C.L. Bible (BSI)

22 ಮೋಶೆ ಆಕಾಶದತ್ತ ಕೈಚಾಚಿದಾಗ ಈಜಿಪ್ಟ್ ದೇಶದಲ್ಲೆಲ್ಲಾ ಮೂರು ದಿವಸ ಕಾರ್ಗತ್ತಲು ಮುಚ್ಚಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮೋಶೆ ಆಕಾಶಕ್ಕೆ ಕೈಯನ್ನು ಚಾಚಿದಾಗ ಐಗುಪ್ತ ದೇಶದಲ್ಲೆಲ್ಲಾ ಮೂರು ದಿನ ಕಾರ್ಗತ್ತಲೆ ಮುಚ್ಚಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮೋಶೆ ಆಕಾಶಕ್ಕೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿವಸ ಕಾರ್ಗತ್ತಲು ಮುಚ್ಚಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮೋಶೆ ತನ್ನ ಕೈಯನ್ನು ಆಕಾಶದ ಕಡೆಗೆ ಚಾಚಿದಾಗ ಕಾರ್ಗತ್ತಲು ಈಜಿಪ್ಟನ್ನು ಆವರಿಸಿತು. ಕಾರ್ಗತ್ತಲು ಈಜಿಪ್ಟಿನಲ್ಲಿ ಮೂರು ದಿನಗಳವರೆಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ, ಈಜಿಪ್ಟ್ ದೇಶದಲ್ಲೆಲ್ಲಾ ಮೂರು ದಿನಗಳವರೆಗೆ ಘೋರವಾದ ಕತ್ತಲೆ ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:22
13 ತಿಳಿವುಗಳ ಹೋಲಿಕೆ  

ಕಾಳ ರಾತ್ರಿಯಾಯಿತು ಪ್ರಭು ಕಳಿಸಲು ಕತ್ತಲನು I ಈಜಿಪ್ಟರಾದರೊ ಇದಿರಿಸಿದರು ಆತನ ಮಾತನು II


ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಸುರಿದನು. ಕೂಡಲೇ ಆ ಮೃಗ ರಾಜ್ಯದ ಮೇಲೆ ಅಂಧಕಾರ ಕವಿಯಿತು. ಜನರು ತಮಗೆ ಬಂದೆರಗಿದ ಬಾಧೆಯನ್ನು ತಾಳಲಾರದೆ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ಸರ್ವೇಶ್ವರಸ್ವಾಮಿಯ ಭಯಂಕರ ಮಹಾದಿನದ ಮುಂಚೆ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ರಕ್ತಗೆಂಪಾಗುವನು.


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


“ಈ ಮಾತುಗಳನ್ನು ಸರ್ವೇಶ್ವರ ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯೆ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾಸ್ವರದಿಂದ ನುಡಿದರು; ಬೇರೆ ಏನನ್ನೂ ಕೂಡಿಸದೆ, ಈ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.


ಅಂದು ನೀವು ಹತ್ತಿರ ಬಂದು ಆ ಬೆಟ್ಟದ ಬುಡದಲ್ಲಿ ನಿಂತುಕೊಂಡಿರಿ. ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರಲು ಅಂತರಿಕ್ಷದವರೆಗೂ ಕರಿಮೋಡವೂ ಕಾರ್ಗತ್ತಲೂ ಆವರಿಸಿದ್ದವು.


ಮೋಶೆಯೊಬ್ಬನೇ ದೇವರಿದ್ದ ಕಾರ್ಮುಗಿಲನ್ನು ಸಮೀಪಿಸಿದ್ದನು. ಜನರು ದೂರದಲ್ಲೇ ನಿಂತಿದ್ದರು.


“ಸುಗ್ಗಿಗೆ ಮೂರು ತಿಂಗಳಿರುವಾಗಲೂ ಮಳೆಯನ್ನು ತಡೆದವನು ನಾನೇ. ಒಂದೂರಿಗೆ ಮಳೆಯಾಗುವಂತೆಯೂ ಮತ್ತೊಂದೂರಿಗೆ ಮಳೆಯಾಗದಂತೆಯೂ ಮಾಡಿದವನು ನಾನೇ. ಒಂದು ಹೊಲಕ್ಕೆ ಮಳೆಯಾಗುವಂತೆ, ಮತ್ತೊಂದು ಹೊಲ ಮಳೆಯಿಲ್ಲದೆ ಬಾಡಿಹೋಗುವಂತೆ ಮಾಡಿದವನು ನಾನೇ.


ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ.


ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.


ನಿನ್ನ ಬೆಳಕನು ನಾ ನಂದಿಸಿ ಕತ್ತಲಾಗಿಸುವಾಗ, ಮುಚ್ಚುವೆನು ಸೂರ್ಯಚಂದ್ರ ನಕ್ಷತ್ರಗಳನು ಮೋಡಮುಸುಕಿನಿಂದ.


ನಿನ್ನ ಮೇಲೆ ಗಗನದಲಿ ಮಿನುಗುವ ಸಕಲ ಜ್ಯೋತಿಗಳನು ಮುಸುಕು ಮಾಡುವೆನು, ನಿನ್ನ ನಾಡಿನೊಳು ಕತ್ತಲನೊಡ್ಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು