Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:27 - ಕನ್ನಡ ಸತ್ಯವೇದವು C.L. Bible (BSI)

27 ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಅವರಿಗೆ ಅಪ್ಪಣೆಕೊಡಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೂ ಯೆಹೋವನು ಫರೋಹನ ಹೃದಯವನ್ನು ಕಠಿಣಪಡಿಸಿದದರಿಂದ ಅವರಿಗೆ ಅಪ್ಪಣೆ ಕೊಡುವದಕ್ಕೆ ಫರೋಹನು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನು ಫರೋಹನ ಹೃದಯವನ್ನು ಮತ್ತೆ ಕಠಿಣಗೊಳಿಸಿದನು. ಆದ್ದರಿಂದ ಫರೋಹನು ಅವರನ್ನು ಕಳುಹಿಸಿಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಅವರನ್ನು ಕಳುಹಿಸಲಾರದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:27
9 ತಿಳಿವುಗಳ ಹೋಲಿಕೆ  

ಆದರೂ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣವಾಗಿಸಿದರು. ಅವನು ಇಸ್ರಯೇಲರನ್ನು ಹೋಗಲು ಬಿಡಲಿಲ್ಲ.


ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ.


ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.


ಬಳಿಕ ಸರ್ವೇಶ್ವರ ಸ್ವಾಮಿ ಮೋಶೆಗೆ: “ಫರೋಹನ ಬಳಿಗೆ ಮತ್ತೆ ಹೋಗು. ನಾನು ಅವನ ಮತ್ತು ಅವನ ಪರಿವಾರದವರ ಹೃದಯಗಳನ್ನು ಮೊಂಡಾಗಿಸಿದ್ದೇನೆ. ಏಕೆಂದರೆ ಈ ಸೂಚಕಕಾರ್ಯಗಳನ್ನು ಅವರ ಮುಂದೆ ನಡೆಸಲು ಆಸ್ಪದವಾಗಬೇಕು;


ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ.


ಮೋಶೆ ಮತ್ತು ಆರೋನರು ಫರೋಹನ ಮುಂದೆ ಈ ಸೂಚಕಕಾರ್ಯಗಳನ್ನೆಲ್ಲಾ ಮಾಡಿದ್ದರೂ ಸರ್ವೇಶ್ವರ ಫರೋಹನ ಹೃದಯವನ್ನು ಕಲ್ಲಾಗಿಸಿದ್ದರು. ಅವನು ತನ್ನ ದೇಶವನ್ನು ಬಿಟ್ಟು ಹೊರಡುವುದಕ್ಕೆ ಇಸ್ರಯೇಲರಿಗೆ ಅಪ್ಪಣೆಕೊಡದೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು