Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:28 - ಕನ್ನಡ ಸತ್ಯವೇದವು C.L. Bible (BSI)

28 ಅವನು ಮೋಶೆಗೆ, “ಇಲ್ಲಿಂದ ಹೊರಡು; ಇನ್ನು ಮುಂದೆ ನನ್ನ ಸಮ್ಮುಖಕ್ಕೆ ಬರಲೇ ಬೇಡ, ಎಚ್ಚರಿಕೆ! ತಿರುಗಿ ಬಂದೆಯಾದರೆ ಮರಣದಂಡನೆ ಆಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟುಹೋಗು. ಇನ್ನು ಮುಂದೆ ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಮೋಶೆಗೆ - ನನ್ನ ಬಳಿಯಿಂದ ಹೋಗು; ಇನ್ನು ಮುಂದೆ ನನ್ನ ಮುಖದೆದುರಿಗೆ ಬರಲೇ ಕೂಡದು; ಎಚ್ಚರ; ತಿರಿಗಿ ಸನ್ನಿಧಿಗೆ ಬಂದರೆ ಮರಣದಂಡನೆ ಆಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಫರೋಹನು ಮೋಶೆಗೆ, “ಇಲ್ಲಿಂದ ತೊಲಗಿ ಹೋಗು! ನೀನು ನನ್ನ ಸನ್ನಿಧಿಗೆ ಇನ್ನು ಮೇಲೆ ಬರಕೂಡದು. ನೀನು ಮತ್ತೆ ಬಂದರೆ ನಿನಗೆ ಮರಣದಂಡನೆ ವಿಧಿಸುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟು ಹೋಗು. ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರ. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ಸಾಯುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:28
6 ತಿಳಿವುಗಳ ಹೋಲಿಕೆ  

ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಿಯ ಮೇಲೆ ಕುಪಿತನಾಗಿ, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.


ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಸರ್ವೇಶ್ವರನನ್ನು ಆರಾಧಿಸಬಹುದು. ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೆ?” ಎಂದು ಹೇಳಿ ಅವರನ್ನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.


ತನ್ನ ತಂದೆಯ ದೇವರು ನನಗೆ ಸಹಾಯಕರಾಗಿದ್ದು ನನ್ನನ್ನು ಫರೋಹನ ಕತ್ತಿಯಿಂದ ಕಾಪಾಡಿದರು ಎಂದು ಕಿರಿಯ ಮಗನಿಗೆ ‘ಎಲಿಯೇಜರ್’ ಎಂದು ಹೆಸರಿಟ್ಟಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು