ವಿಮೋಚನಕಾಂಡ 10:5 - ಕನ್ನಡ ಸತ್ಯವೇದವು C.L. Bible (BSI)5 ನೆಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವುವು; ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲ ಮರಗಳ ಎಲೆಚಿಗುರುಗಳನ್ನು ತಿಂದುಬಿಡುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವವು. ನೆಲವೇ ಕಾಣಿಸದೆ ಹೋಗುವುದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆ ಚಿಗುರುಗಳನ್ನೂ ತಿಂದುಬಿಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವು ಭೂವಿುಯನ್ನೆಲ್ಲಾ ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದದ್ದೆಲ್ಲವನ್ನು ವಿುಡಿತೆಗಳು ತಿಂದುಬಿಡುವವು; ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆಚಿಗುರುಗಳನ್ನೂ ತಿಂದು ಬಿಡುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಮಿಡತೆಗಳು ಬಂದು ಭೂಮಿಯನ್ನು ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವುದು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವುದನ್ನು ಮಿಡತೆಗಳು ತಿಂದುಬಿಡುತ್ತವೆ; ಹೊಲದಲ್ಲಿರುವ ಎಲ್ಲಾ ಮರಗಳ ಎಲೆಗಳನ್ನು ತಿಂದುಬಿಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಒಬ್ಬನು ಭೂಮಿಯನ್ನು ಕಾಣುವುದಕ್ಕಾಗದಷ್ಟು ಅವು ಭೂಮಿಯನ್ನೆಲ್ಲಾ ಮುಚ್ಚಿಕೊಳ್ಳುವುವು. ಇದಲ್ಲದೆ ಅವು ಆಲಿಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವುದೆಲ್ಲವನ್ನೂ, ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡುವುವು. ಅಧ್ಯಾಯವನ್ನು ನೋಡಿ |