Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:9 - ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಮೋಶೆ, “ನಾವು ಸರ್ವೇಶ್ವರ ಸ್ವಾಮಿಗಾಗಿ ಹಬ್ಬವನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು, ಮುದುಕರು ಎಲ್ಲರು ಹೋಗುತ್ತೇವೆ; ಗಂಡುಹೆಣ್ಣು ಮಕ್ಕಳನ್ನೂ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆ ಅವನಿಗೆ, “ನಾವು ಯೆಹೋವನಿಗೆ ಜಾತ್ರೆಯನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು ಮೊದಲುಗೊಂಡು, ಮುದುಕರವರೆಗೂ ಎಲ್ಲರೂ ಹೋಗುತ್ತೇವೆ; ಗಂಡು ಹೆಣ್ಣುಮಕ್ಕಳನ್ನೂ, ದನಕುರಿಗಳ ಮಂದೆಯನ್ನು ತೆಗೆದುಕೊಂಡು ಹೋಗುತ್ತೇವೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಶೆ ಅವನಿಗೆ - ನಾವು ಯೆಹೋವನಿಗೆ ಜಾತ್ರೆಯನ್ನು ನಡಿಸಬೇಕಾಗಿದೆ; ಆದಕಾರಣ ಹುಡುಗರು, ಮುದುಕರು ಎಲ್ಲರು ಹೋಗುತ್ತೇವೆ; ಗಂಡು ಹೆಣ್ಣು ಮಕ್ಕಳನ್ನೂ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೋಶೆಯು, “ಯೌವನಸ್ಥರು, ಮುದುಕರು, ಎಲ್ಲರೂ ಹೋಗುತ್ತೇವೆ. ನಮ್ಮ ಗಂಡು ಹೆಣ್ಣುಮಕ್ಕಳನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಯಾಕೆಂದರೆ ಇದು ಯೆಹೋವನ ಜಾತ್ರೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕೆ ಮೋಶೆಯು ಅವನಿಗೆ, “ನಮ್ಮ ಚಿಕ್ಕವರನ್ನೂ ವೃದ್ಧರನ್ನೂ ಕರೆದುಕೊಂಡು ಹೋಗುತ್ತೇವೆ. ಇದಲ್ಲದೆ ನಮ್ಮ ಪುತ್ರಪುತ್ರಿಯರನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಏಕೆಂದರೆ ನಾವು ಯೆಹೋವ ದೇವರಿಗಾಗಿ ಹಬ್ಬವನ್ನು ಮಾಡಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:9
19 ತಿಳಿವುಗಳ ಹೋಲಿಕೆ  

ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಬಂದರು. “ಇಸ್ರಯೇಲರ ದೇವರಾದ ಸರ್ವೇಶ್ವರನ ಮಾತುಗಳಿವು: ‘ನನ್ನ ಜನರು ಮರುಭೂಮಿಯಲ್ಲಿ ನನ್ನ ಗೌರವಾರ್ಥ ಒಂದು ಹಬ್ಬವನ್ನು ಆಚರಿಸಬೇಕಾಗಿದೆ. ಅದಕ್ಕೆ ಅವರಿಗೆ ಅಪ್ಪಣೆಕೊಡಬೇಕು’," ಎಂದರು.


“ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ.


ತಂದೆತಾಯಿಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಕೆರಳಿಸಬೇಡಿ. ಪ್ರತಿಯಾಗಿ ಪ್ರಭುವಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಅವರಿಗೆ ಶಿಕ್ಷಣವನ್ನು ಕೊಟ್ಟು ಶಿಸ್ತಿನಿಂದ ಸಾಕಿಸಲಹಿರಿ.


ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.


ನಿನ್ನ ಆಸ್ತಿಯನ್ನರ್ಪಿಸಿ ಸರ್ವೇಶ್ವರನನ್ನು ಸನ್ಮಾನಿಸು, ನಿನ್ನ ಬೆಳೆಯ ಪ್ರಥಮ ಫಲವನ್ನು ಕಾಣಿಕೆಯಾಗಿಕೊಡು.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


‘ಏಳನೆಯ ತಿಂಗಳಿನ ಹದಿನಾಲ್ಕನೆಯ ದಿನ ದೇವಾರಾಧನೆಗಾಗಿ ಸಭೆ ಕೂಡಬೇಕು. ನೀವು ಆ ದಿನದಂದು ಯಾವ ದುಡಿಮೆಯನ್ನೂ ಮಾಡಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಸರ್ವೇಶ್ವರನಿಗೆ ಹಬ್ಬವನ್ನು ಆಚರಿಸಬೇಕು.


ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ಸರ್ವೇಶ್ವರನ ಗೌರವಾರ್ಥ ಹಬ್ಬ ಮಾಡಬೇಕು.


ಮೋಶೆ ಮತ್ತು ಆರೋನರು, “ಹಿಬ್ರಿಯರ ದೇವರು ನಮಗೆ ದರ್ಶನವಿತ್ತರು. ಅಪ್ಪಣೆ ಆದರೆ ನಾವು ಮರುಭೂಮಿಯಲ್ಲಿ ಮೂರು ದಿವಸದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸಿ ಬರುತ್ತೇವೆ. ಹಾಗೆ ಮಾಡದೆಹೋದರೆ ಅವರು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರ ಮಾಡುವರು,” ಎಂದರು.


ಜೋಸೆಫನ ಮನೆಯವರೆಲ್ಲರು, ಅಣ್ಣತಮ್ಮಂದಿರು, ತಂದೆಯ ಮನೆಯವರೆಲ್ಲರು ಹೋದರು. ತಮ್ಮ ಮಡದಿಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಪ್ರಾಂತ್ಯದಲ್ಲಿ ಬಿಟ್ಟುಹೋದರು.


ಆಗ ಫರೋಹನು, “ನೀವು ನಿಮ್ಮ ಮನೆಯವರೆಲ್ಲರನ್ನು ಕರೆದುಕೊಂಡು ಹೋಗುವುದಕ್ಕೆ ನಾನೆಂದಿಗೂ ಅಪ್ಪಣೆಕೊಡುವುದಿಲ್ಲ. ಕೊಟ್ಟೆನಾದರೆ ಸರ್ವೇಶ್ವರನ ದಯೆಯೊಂದೇ ನಿಮ್ಮನ್ನು ಕಾಪಾಡಬೇಕಾಗುವುದು. ನೋಡಿ, ನೀವು ದುರಾಲೋಚನೆಯಿಂದ ಕೂಡಿದವರು ಎಂಬುದು ಸರಿಯಷ್ಟೆ!


ಅದು ಮಾತ್ರವಲ್ಲ, ನಮ್ಮ ಎಲ್ಲ ಪಶುಪ್ರಾಣಿಗಳನ್ನೂತೆಗೆದುಕೊಂಡು ಹೋಗಲು ಅಪ್ಪಣೆ ಕೊಡಿ. ಒಂದು ಗೊರಸನ್ನೂ ನಾವು ಬಿಟ್ಟುಹೋಗಲು ಆಗದು. ಈ ಪಶುಪ್ರಾಣಿಗಳಿಂದಲೇ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಬಲಿಯೊಪ್ಪಿಸಬೇಕಾಗಿದೆ ಅಲ್ಲವೆ? ಯಾವ ಯಾವ ಪ್ರಾಣಿಗಳನ್ನು ಅರ್ಪಿಸಬೇಕೋ ಅದು ನಾವು ಅಲ್ಲಿಗೆ ಸೇರುವುದಕ್ಕೆ ಮುಂಚೆ ನಮಗೆ ತಿಳಿಯದು,” ಎಂದನು.


ನೀವು ಕೇಳಿಕೊಂಡಂತೆ ಸರ್ವೇಶ್ವರನನ್ನು ಆರಾಧಿಸಿ. ನಿಮ್ಮ ಕೋರಿಕೆಯಂತೆ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು. ನನ್ನ ಹಿತಕ್ಕಾಗಿಯೂ ಪ್ರಾರ್ಥನೆಮಾಡಿ,” ಎಂದನು.


ಇಸ್ರಯೇಲರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಅವರಲ್ಲಿ ಮಹಿಳೆಯರನ್ನೂ ಮಕ್ಕಳನ್ನೂ ಬಿಟ್ಟು ಗಂಡಸರ ಸಂಖ್ಯೆಯೇ ಸುಮಾರು ಆರು ಲಕ್ಷವಿತ್ತು.


ಅವರೊಂದಿಗೆ ಬಹುಮಂದಿ ಅನ್ಯದೇಶೀಯರೂ ಹೊರಟು ಬಂದಿದ್ದರು. ಕುರಿ, ದನ ಮುಂತಾದ ಪಶುಪ್ರಾಣಿಗಳು ಬಹಳವಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು