ವಿಮೋಚನಕಾಂಡ 11:1 - ಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಎಂದರು: “ಫರೋಹನಿಗೂ ಈಜಿಪ್ಟಿನವರಿಗೂ ಇನ್ನೊಂದು ಪಿಡುಗನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆಕೊಡುವನು. ಅದು ಮಾತ್ರವಲ್ಲ, ನಿಮ್ಮೆಲ್ಲರನ್ನು ಅಲ್ಲಿಂದ ಅಟ್ಟಿಬಿಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಮೋಶೆಗೆ, “ಫರೋಹನಿಗೂ ಮತ್ತು ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆ ಕೊಡುವನು. ಮಾತ್ರವಲ್ಲದೆ ನಿಮ್ಮೆಲ್ಲರನ್ನು ಬಲವಂತದಿಂದ ಕಳುಹಿಸಿ ಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಮೋಶೆಗೆ ಇಂತೆಂದನು - ಫರೋಹನಿಗೂ ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ; ಅದು ಬಂದ ನಂತರ ಅವನು ನಿಮಗೆ ಇಲ್ಲಿಂದ ಹೋಗುವದಕ್ಕೆ ಅಪ್ಪಣೆಕೊಡುವದು ಮಾತ್ರವಲ್ಲದೆ ನಿಮ್ಮೆಲ್ಲರನ್ನು ಅಟ್ಟಿಬಿಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬಳಿಕ ಯೆಹೋವನು ಮೋಶೆಗೆ, “ನಾನು ಫರೋಹನಿಗೂ ಈಜಿಪ್ಟಿಗೂ ಮತ್ತೊಂದು ವಿಪತ್ತನ್ನು ಬರಮಾಡುತ್ತೇನೆ. ಆಗ ಅವನು ನಿಮ್ಮನ್ನು ಈಜಿಪ್ಟಿನಿಂದ ಕಳುಹಿಸುವನು; ನಿಮ್ಮನ್ನು ಬಲವಂತದಿಂದ ಕಳುಹಿಸಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಮೋಶೆಗೆ, “ಇನ್ನು ಒಂದೇ ಉಪದ್ರವವನ್ನು ಫರೋಹನ ಮೇಲೆಯೂ, ಈಜಿಪ್ಟ್ ಮೇಲೆಯೂ ಬರಮಾಡುವೆನು. ಆಮೇಲೆ ಅವನು ಇಲ್ಲಿಂದ ಕಳುಹಿಸುವನು. ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲರನ್ನೂ ಕಳುಹಿಸಿಬಿಡುವನು. ಅಧ್ಯಾಯವನ್ನು ನೋಡಿ |