Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 11:10 - ಕನ್ನಡ ಸತ್ಯವೇದವು C.L. Bible (BSI)

10 ಮೋಶೆ ಮತ್ತು ಆರೋನರು ಫರೋಹನ ಮುಂದೆ ಈ ಸೂಚಕಕಾರ್ಯಗಳನ್ನೆಲ್ಲಾ ಮಾಡಿದ್ದರೂ ಸರ್ವೇಶ್ವರ ಫರೋಹನ ಹೃದಯವನ್ನು ಕಲ್ಲಾಗಿಸಿದ್ದರು. ಅವನು ತನ್ನ ದೇಶವನ್ನು ಬಿಟ್ಟು ಹೊರಡುವುದಕ್ಕೆ ಇಸ್ರಯೇಲರಿಗೆ ಅಪ್ಪಣೆಕೊಡದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೋಶೆ ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದಾಗ್ಯೂ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದದರಿಂದ ಫರೋಹನು ಇಸ್ರಾಯೇಲ್ಯರಿಗೆ ತನ್ನ ದೇಶವನ್ನು ಬಿಟ್ಟು ಹೊರಡುವದಕ್ಕೆ ಅಪ್ಪಣೆ ಕೊಡದೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ; ಆದ್ದರಿಂದ ಮೋಶೆ ಆರೋನರು ಈ ಅದ್ಭುತಕಾರ್ಯಗಳನ್ನೆಲ್ಲಾ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈ ಅದ್ಭುತಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 11:10
17 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ.


ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಅವರಿಗೆ ಅಪ್ಪಣೆಕೊಡಲು ಒಪ್ಪಲಿಲ್ಲ.


ಆದರೂ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣವಾಗಿಸಿದರು. ಅವನು ಇಸ್ರಯೇಲರನ್ನು ಹೋಗಲು ಬಿಡಲಿಲ್ಲ.


ದೇವರ ವಿಷಯದಲ್ಲಿಯೂ ಅಂತೆಯೇ. ದೇವರು ತಮ್ಮ ಕೋಪಾಗ್ನಿಯನ್ನು ಪ್ರದರ್ಶಿಸಿ, ತಮ್ಮ ಶಕ್ತಿಯನ್ನು ಪ್ರಕಟಿಸಲು ಬಯಸಿದರು. ಹಾಗೆಮಾಡದೆ ವಿಕೋಪಕ್ಕೂ ವಿನಾಶಕ್ಕೂ ಮಾಡಲಾಗಿದ್ದ ಕುಡಿಕೆಯನ್ನು ಹೋಲುವವರನ್ನು ಅತ್ಯಂತ ಸಹನೆಯಿಂದ ಸೈರಿಸಿಕೊಂಡರಾದರೆ, ಯಾರು ಏನನ್ನು ತಾನೇ ಹೇಳಲಾದೀತು?


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ಈಜಿಪ್ಟ್ ನವರಂತೆ ಆಗಲಿ, ಫರೋಹನಂತೆ ಆಗಲಿ ನೀವೇಕೆ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳಬೇಕು? ಇಸ್ರಯೇಲರನ್ನು ಕಳುಹಿಸಲೊಲ್ಲದ ಈ ಈಜಿಪ್ಟ್ ನವರನ್ನು ಸರ್ವೇಶ್ವರನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲವೆ?


ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.


“ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”


ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ.


ಆದರೂ ನಾನು ಫರೋಹನ ಹೃದಯವನ್ನು ಕಲ್ಲಾಗಿಸಿ ಈಜಿಪ್ಟ್ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ ನನ್ನ ಶಕ್ತಿಯನ್ನು ತೋರಿಸುವೆನು.


ಆದರೂ ಸರ್ವೇಶ್ವರ, ಮೋಶೆಗೆ ಮುಂತಿಳಿಸಿದಂತೆಯೇ ಆಯಿತು. ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಈಜಿಪ್ಟ್ ದೇಶದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೀಗೆಂದರು:


ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.


ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.


ಆ ಈಜಿಪ್ಟಿನ ಅರಸನು ಎಷ್ಟು ಬಲಾತ್ಕಾರ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ತಿಳಿದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು