Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 11:2 - ಕನ್ನಡ ಸತ್ಯವೇದವು C.L. Bible (BSI)

2 ಆದುದರಿಂದ ಸ್ತ್ರೀಪುರುಷರೆಲ್ಲರು ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂದು ನಿಮ್ಮ ಜನರಿಗೆ ಸ್ಪಷ್ಟವಾಗಿಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದದರಿಂದ ಸ್ತ್ರೀಪುರುಷರೆಲ್ಲರೂ ತಮ್ಮತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬದಾಗಿ ಜನರಿಗೆ ಸ್ಪಷ್ಟವಾಗಿ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಇಸ್ರೇಲರಿಗೆ ಈ ಸಂದೇಶವನ್ನು ತಿಳಿಸು: ‘ಸ್ತ್ರೀಯರೂ ಪುರುಷರೂ ತಮ್ಮ ನೆರೆಯವರಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ಕೇಳಿಕೊಳ್ಳಬೇಕು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಸ್ತ್ರೀಪುರುಷರೆಲ್ಲರು ತನ್ನ ನೆರೆಯವನಿಂದಲೂ ಬೆಳ್ಳಿಬಂಗಾರ ಒಡವೆಗಳನ್ನು ಕೇಳಿಕೊಳ್ಳಬೇಕೆಂದು ಇಸ್ರಾಯೇಲರಿಗೆ ಹೇಳು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 11:2
16 ತಿಳಿವುಗಳ ಹೋಲಿಕೆ  

ನಿಮ್ಮ ಪ್ರತಿಯೊಬ್ಬ ಮಹಿಳೆ ನೆರೆಹೊರೆಯ ಮಹಿಳೆಯರಿಂದಲೂ ನಿಮ್ಮ ಮನೆಯಲ್ಲೇ ತಂಗಿರುವ ಮಹಿಳೆಯರಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ಬಟ್ಟೆಬರೆಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಮಕ್ಕಳುಮರಿಗಳಿಗೆ ತೊಡಿಸಿರಿ. ಹೀಗೆ ಈಜಿಪ್ಟರನ್ನು ಸೂರೆಮಾಡಿ ಹೊರಡುವಿರಿ.


ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.


ಬೆಳ್ಳಿ ನನ್ನದು, ಬಂಗಾರವೆಲ್ಲ ನನ್ನದು.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.


ಹೊರತಂದನು ಇಸ್ರಯೇಲರನು ಬೆಳ್ಳಿಬಂಗಾರ ಸಹಿತ I ಅವರಾ ಗೋತ್ರದೊಳಿರಲಿಲ್ಲ ಯಾರೊಬ್ಬನೂ ನಿಶ್ಯಕ್ತ II


ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II


ಹೆಂಗಸರು ಹಾಗು ಗಂಡಸರು ಧಾರಾಳ ಮನಸ್ಸಿನಿಂದ ಸರ್ವೇಶ್ವರನಿಗೆ ಚಿನ್ನದ ಕಾಣಿಕೆಗಳನ್ನು, ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.


ಅದಕ್ಕೆ ನಾನು, “ಯಾರಲ್ಲಿ ಚಿನ್ನದ ಒಡವೆ ಇದೆಯೋ ಅವರೆಲ್ಲರು ಅದನ್ನು ತೆಗೆದು ನನಗೆ ಕೊಡಬೇಕು,” ಎಂದೆ. ಅವರು ಹಾಗೆಯೇ ಕೊಟ್ಟರು. ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರು ಹೊರಗೆ ಬಂತು,” ಎಂದನು.


ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು ತೆಗೆದು ನನಗೆ ಕೊಟ್ಟರು.


ಬಳಿಕ ತಾನು ತಂದಿದ್ದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ವಸ್ತ್ರಗಳನ್ನು ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಬೆಲೆಬಾಳುವ ಉಡುಗೊರೆಗಳನ್ನು ಕೊಟ್ಟನು.


“ನನ್ನ ಜನರಿಗೆ ಈಜಿಪ್ಟಿನವರು ಅನುಕಂಪ ತೋರಿಸುವಂತೆ ಮಾಡುವೆನು. ಆದ್ದರಿಂದ ನೀವು ಅಲ್ಲಿಂದ ಹೊರಡುವಾಗ ಬರಿಗೈಯಲ್ಲಿ ಹೋಗಬೇಕಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು