Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 11:3 - ಕನ್ನಡ ಸತ್ಯವೇದವು C.L. Bible (BSI)

3 ಈಜಿಪ್ಟಿನವರಿಗೆ ಇಸ್ರಯೇಲರ ಮೇಲೆ ಕನಿಕರ ಉಂಟಾಗುವಂತೆ ಮಾಡಿದರು ಸರ್ವೇಶ್ವರ. ಇದಲ್ಲದೆ ಈಜಿಪ್ಟ್ ದೇಶದ ಫರೋಹನ ಪರಿವಾರದವರು ಮೋಶೆಯನ್ನು ಮಹಾಪುರುಷನೆಂದು ಭಾವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಇಸ್ರಾಯೇಲ್ಯರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಆ ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈಜಿಪ್ಟಿನವರು ನಿಮಗೆ ದಯೆತೋರುವಂತೆ ಯೆಹೋವನು ಅವರನ್ನು ಪ್ರೇರೇಪಿಸುವನು. ಈಜಿಪ್ಟಿನ ಜನರು ಮತ್ತು ಫರೋಹನ ಅಧಿಕಾರಿಗಳು ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರ ದೃಷ್ಟಿಯಲ್ಲಿ ಜನರಿಗೆ ದಯೆ ದೊರಕುವಂತೆ ಮಾಡಿದರು. ಇದಲ್ಲದೆ ಮೋಶೆಯು ಈಜಿಪ್ಟ್ ದೇಶದಲ್ಲಿಯೂ ಫರೋಹನ ಅಧಿಕಾರಿಗಳ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹಳ ಗೌರವ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 11:3
14 ತಿಳಿವುಗಳ ಹೋಲಿಕೆ  

ಇಸ್ರಯೇಲರ ಮೇಲೆ ಈಜಿಪ್ಟಿನವರಿಗೆ ದಯೆ ಹುಟ್ಟುವಂತೆ ಮಾಡಿದ್ದರು ಸರ್ವೇಶ್ವರ. ಆದ್ದರಿಂದ ಅವರು ಕೇಳಿಕೊಂಡದ್ದನ್ನು ಈಜಿಪ್ಟಿನವರು ಕೊಟ್ಟುಬಿಟ್ಟರು. ಹೀಗೆ ಇಸ್ರಯೇಲರು ಈಜಿಪ್ಟಿನವರ ಸೊತ್ತನ್ನು ಸುಲಿಗೆ ಮಾಡಿಕೊಂಡರು.


“ನನ್ನ ಜನರಿಗೆ ಈಜಿಪ್ಟಿನವರು ಅನುಕಂಪ ತೋರಿಸುವಂತೆ ಮಾಡುವೆನು. ಆದ್ದರಿಂದ ನೀವು ಅಲ್ಲಿಂದ ಹೊರಡುವಾಗ ಬರಿಗೈಯಲ್ಲಿ ಹೋಗಬೇಕಾಗುವುದಿಲ್ಲ.


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಆದರೂ ಸರ್ವೇಶ್ವರ, ಜೋಸೆಫನ ಸಂಗಡ ಇದ್ದರು. ಅವನಿಗೆ ಅಪಾರ ಪ್ರೀತಿ ತೋರಿಸಿ, ಅವನಿಗೆ ಸೆರೆಯಜಮಾನನ ದಯೆ ದೊರಕುವಂತೆ ಮಾಡಿದರು.


ಅವನು ಈಜಿಪ್ಟರ ಸಕಲ ವಿದ್ಯೆಗಳಲ್ಲಿ ಪಾರಂಗತನಾಗಿ, ನಡೆಯಲ್ಲೂ ನುಡಿಯಲ್ಲೂ ಸಮರ್ಥನಾದನು.


ಆದುದರಿಂದ ಸಕಲ ಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಮತ್ತು ಇತರ ರಾಜಸೇವಕರೂ ಅವನಿಗೆ ಭಯಪಟ್ಟು ಯೆಹೂದ್ಯರಿಗೆ ನೆರವಾದರು.


ನೀನು ಹೋದಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು.


ಈಜಿಪ್ಟ್ ದೇಶದಲ್ಲಿ ಫರೋಹನ ಮುಂದೆ ಹಾಗು ಅವನ ಪ್ರಜಾಪರಿವಾರದವರ ಮುಂದೆ ಅವನು ವಿಧವಿಧವಾದ ಪವಾಡಗಳನ್ನೂ ಮಹತ್ಕಾರ್ಯಗಳನ್ನೂ ನಡೆಸಿದನು; ಸರ್ವೇಶ್ವರ ಅವನನ್ನು ಅದಕ್ಕಾಗಿಯೇ ಕಳುಹಿಸಿದ್ದರು.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಮೋಶೆ ಹೇಳಿಕೊಟ್ಟ ಹಾಗೆ ಈಜಿಪ್ಟಿನವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ಬಟ್ಟೆಗಳನ್ನು ಕೇಳಿಕೊಂಡರು.


ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡಿದರು.


ಆ ದಿನ ಸರ್ವೇಶ್ವರ ಯೆಹೋಶುವನನ್ನು ಇಸ್ರಯೇಲರೆಲ್ಲರ ದೃಷ್ಟಿಯಲ್ಲಿ ಇಷ್ಟು ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ, ಇವನು ಜೀವದಿಂದಿದ್ದ ಕಾಲವೆಲ್ಲ ಗೌರವವುಳ್ಳವರು ಆಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು