Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 11:7 - ಕನ್ನಡ ಸತ್ಯವೇದವು C.L. Bible (BSI)

7 ಆದರೆ ಇಸ್ರಯೇಲರಲ್ಲಿರುವ ಮನುಷ್ಯನ ವಿರುದ್ಧವಾಗಲಿ, ಪ್ರಾಣಿಯ ವಿರುದ್ಧವಾಗಲಿ, ಒಂದು ನಾಯಿ ಕೂಡ ಬೊಗಳುವುದಿಲ್ಲ. ಇದರಿಂದ ಸರ್ವೇಶ್ವರ ಇಸ್ರಯೇಲರಿಗೂ ಈಜಿಪ್ಟಿನವರಿಗೂ ತಾರತಮ್ಯ ಮಾಡಿದ್ದಾರೆಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬದು ನಿಮಗೆ ತಿಳಿಯುವಂತೆ ಇಸ್ರಾಯೇಲ್ಯರಲ್ಲಿರುವ ಮನುಷ್ಯರ ಮೇಲಾಗಲಿ ಪಶುಗಳ ಮೇಲಾಗಲಿ ಒಂದು ನಾಯಿಯಾದರೂ ಬೊಗಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಇಸ್ರೇಲರಲ್ಲಿ ಯಾರಿಗೂ ಕೇಡಾಗುವುದಿಲ್ಲ. ಒಂದು ನಾಯಿಯೂ ಅವರಿಗೆ ಬೊಗಳುವುದಿಲ್ಲ. ಇಸ್ರೇಲಿನ ಜನರಿಗಾಗಲಿ ಪಶುಗಳಿಗಾಗಲಿ ಕೇಡಾಗುವುದಿಲ್ಲ. ಇಸ್ರೇಲರಿಗೂ ಮತ್ತು ಈಜಿಪ್ಟಿನವರಿಗೂ ನಾನು ವ್ಯತ್ಯಾಸ ಮಾಡಿದ್ದೇನೆಂದು ಆಗ ನೀವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಯೆಹೋವ ದೇವರು ಈಜಿಪ್ಟಿನವರಿಗೂ, ಇಸ್ರಾಯೇಲರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳುಕೊಳ್ಳುವಂತೆ, ಇಸ್ರಾಯೇಲಿನವರ ವಿರುದ್ಧ ಇಲ್ಲವೆ ಪ್ರಾಣಿಗಳ ವಿರುದ್ಧ ಒಂದು ನಾಯಿ ಸಹ ಬೊಗಳುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 11:7
11 ತಿಳಿವುಗಳ ಹೋಲಿಕೆ  

ಇಸ್ರಯೇಲರಾದರೋ ಮಕ್ಕೇದದಲ್ಲಿದ್ದ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಬಂದರು. ಇಸ್ರಯೇಲರ ವಿರುದ್ಧ ಯಾರೊಬ್ಬನೂ ನಾಲಿಗೆ ಮಸೆಯಲಿಲ್ಲ.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ಆ ಮೂರು ದಿವಸ ಒಬ್ಬರನ್ನೊಬ್ಬರು ನೋಡಲಾಗಲಿಲ್ಲ; ತಾವಿದ್ದ ಸ್ಥಳದಿಂದ ಏಳಲಿಲ್ಲ. ಆದರೆ ಇಸ್ರಯೇಲರೆಲ್ಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕಿತ್ತು.


ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.


ಇಸ್ರಯೇಲರ ಪಶುಪ್ರಾಣಿಗಳಿಗೂ ಈಜಿಪ್ಟಿನವರ ಪಶುಪ್ರಾಣಿಗಳಿಗೂ ಆತನು ವ್ಯತ್ಯಾಸಮಾಡುವನು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯುವುದಿಲ್ಲವೆಂದು ಹೇಳು.


ಎಂತಲೇ ಬಡವನಿಗೆ ನಿರೀಕ್ಷೆ ಇರುತ್ತದೆ. ಅನ್ಯಾಯ ಆಡುವ ಬಾಯಿ ಮುಚ್ಚಿಕೊಳ್ಳುತ್ತದೆ.


ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?


ಆದರೆ ಈಜಿಪ್ಟ್ ದೇಶದ ಮಾಟಗಾರರು ಕೂಡ ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನ ಹೃದಯ ಕಠಿಣವಾಯಿತು. ಸರ್ವೇಶ್ವರ ಈ ಮೊದಲೇ ತಿಳಿಸಿದ್ದಂತೆ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆಹೋದನು.


ಇಸ್ರಯೇಲರು ವಾಸವಾಗಿದ್ದ ಗೋಷೆನ್ ಪ್ರಾಂತ್ಯದಲ್ಲಿ ಮಾತ್ರ ಆ ಮಳೆ ಬೀಳಲಿಲ್ಲ.


ತೀಡುವನು ಕತ್ತಿಯನು, ಹೂಡುವನು ಬಾಣವನು I ಪಡೆಯದಿರೆ ದುರುಳನು ಮನಪರಿವರ್ತನೆಯನು II


ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು