Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:11 - ಕನ್ನಡ ಸತ್ಯವೇದವು C.L. Bible (BSI)

11 ಆ ಭೋಜನವನ್ನು ಮಾಡಬೇಕಾದ ಕ್ರಮ ಇದು: ನೀವು ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ಬೇಗ ಬೇಗನೆ ಊಟಮಾಡಬೇಕು. ಏಕೆಂದರೆ ಅದು ಸರ್ವೇಶ್ವರ ಸ್ವಾಮಿಗೆ ಆಚರಿಸತಕ್ಕ ಪಾಸ್ಕಹಬ್ಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗೆಂದರೆ: ನೀವು ನಡುವನ್ನು ಕಟ್ಟಿಕೊಂಡು, ಕೆರವನ್ನು ಮೆಟ್ಟಿಕೊಂಡು, ಕೋಲುಹಿಡಿದು, ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗಂದರೆ - ನೀವು ನಡುವನ್ನು ಕಟ್ಟಿ ಕೆರವನ್ನು ಮೆಟ್ಟಿಕೊಂಡು ಕೋಲು ಹಿಡಿದು ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕೆಂದರೆ ಇದು ಯೆಹೋವನ ಪಸ್ಕಹಬ್ಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ತ್ವರೆಯಾಗಿ ಅದನ್ನು ತಿನ್ನಬೇಕು, ಅದು ಯೆಹೋವ ದೇವರ ಪಸ್ಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:11
21 ತಿಳಿವುಗಳ ಹೋಲಿಕೆ  

‘ಸರ್ವೇಶ್ವರ ಸ್ವಾಮಿ ಈಜಿಪ್ಟಿನವರನ್ನು ಸಂಹರಿಸಿದಾಗ ಆ ದೇಶದಲ್ಲೇ ಇದ್ದ ಇಸ್ರಯೇಲರ ಮನೆಗಳನ್ನು ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮವರನ್ನು ಉಳಿಸಿದರು. ಆದ್ದರಿಂದ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಈ ಪಾಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ’ ಎಂದು ಉತ್ತರಕೊಡಿ,” ಎಂದು ಹೇಳಿದನು. ...


ಶಾಂತಿಯ ಶುಭಸಂದೇಶವನ್ನು ಸಾರಲು ಶ್ರದ್ಧೆಯೆಂಬ ಪಾದರಕ್ಷೆಯನ್ನು ಮೆಟ್ಟುಕೊಳ್ಳಿರಿ.


ನೀವು ಹುಳಿಯಿಲ್ಲದ ಕಣಕವಾಗಿದ್ದೀರಿ. ಅಪ್ಪಟ ರೊಟ್ಟಿಯಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ಏಕೆಂದರೆ, ಪಾಸ್ಕ ಯಜ್ಞದ ಕುರಿಮರಿಯಾದ ಕ್ರಿಸ್ತಯೇಸು ಬಲಿಯಾಗಿದ್ದಾರೆ.


ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


“ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ.


‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಂದು ಸರ್ವೇಶ್ವರಸ್ವಾಮಿ ನೇಮಿಸಿದ ಪಾಸ್ಕಹಬ್ಬವಾಗಬೇಕು.


“ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ವೇಳೆಯಲ್ಲಿ ಸರ್ವೇಶ್ವರ ನೇಮಿಸಿದ ಪಸ್ಕಹಬ್ಬವಾಗಬೇಕು.


ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು: “ಪಾಸ್ಕಹಬ್ಬ ಆಚರಣೆಯ ಕ್ರಮ ಇದು - ವಿದೇಶೀಯನಾರೂ ಆ ಭೋಜನದಲ್ಲಿ ಪಾಲ್ಗೊಳ್ಳಬಾರದು.


ಮೋಶೆ ಇಸ್ರಯೇಲರ ಹಿರಿಯರೆಲ್ಲರನ್ನು ಕರೆಯಿಸಿ ಅವರಿಗೆ, “ನೀವು ನಿಮ್ಮ ನಿಮ್ಮ ಕುಟುಂಬಗಳಿಗಾಗಿ ಹಿಂಡಿನಿಂದ ಮರಿಗಳನ್ನು ಆರಿಸಿಕೊಂಡು ಪಾಸ್ಕ ಹಬ್ಬಕ್ಕೆ ಕೊಯ್ಯಿರಿ.


ತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ;


ಅವಳು ಯೇಸುವಿನ ಹಿಂಬದಿಯಲ್ಲಿ ಅಳುತ್ತಾನಿಂತು, ತನ್ನ ಕಂಬನಿಯಿಂದ ಅವರ ಪಾದಗಳನ್ನು ತೊಳೆದು ತಲೆಕೂದಲಿನಿಂದ ಒರಸಿ, ಆ ಪಾದಗಳಿಗೆ ಮುತ್ತಿಟ್ಟು, ಸುಗಂಧ ತೈಲವನ್ನುಹಚ್ಚಿದಳು.


ನೀವು ಬಾಗಿಲಿಗೆ ಹಚ್ಚಿದ ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವುದು. ಅದನ್ನು ಕಂಡು ನಿಮಗೆ ಯಾವ ಹಾನಿಯನ್ನು ಮಾಡದೆ ಮುಂದಕ್ಕೆ ದಾಟಿಹೋಗುವೆನು. ನಾನು ಈಜಿಪ್ಟಿನವರನ್ನು ಸಂಹರಿಸುವಾಗ ನಿಮಗೆ ಯಾವ ಕೇಡೂ ಆಗದು.


ಯೇಸುಸ್ವಾಮಿಯ ತಂದೆತಾಯಿಗಳು ಪ್ರತಿವರ್ಷವೂ ಪಾಸ್ಕಹಬ್ಬಕ್ಕೆ ಜೆರುಸಲೇಮಿಗೆ ಹೋಗುತ್ತಿದ್ದರು.


ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.


ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಮರುಭೂಮಿಯಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಯೊಂದಿಗೆ ಮಾತನಾಡಿದರು.


“ನೀವು ಚೈತ್ರಮಾಸದಲ್ಲಿ ಪಾಸ್ಕಹಬ್ಬವನ್ನು ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಆ ಮಾಸದಲ್ಲೇ ರಾತ್ರಿವೇಳೆಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈಜಿಪ್ಟ್ ದೇಶದಿಂದ ಬಿಡುಗಡೆ ಮಾಡಿದ್ದು.


ಇಸ್ರಯೇಲರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಜೆರಿಕೋವಿನ ಬಯಲಿನಲ್ಲಿ ಪಾಸ್ಕಹಬ್ಬವನ್ನಾಚರಿಸಿದರು.


ಅನಂತರ ಅರಸನು ಜನರೆಲ್ಲರಿಗೆ, ನಿಬಂಧನ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೋಸ್ಕರ ಪಾಸ್ಕಹಬ್ಬವನ್ನು ಆಚರಿಸಬೇಕು ಎಂದು ಆಜ್ಞಾಪಿಸಿದನು.


“ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಏಳು ದಿವಸದ ಪಾಸ್ಕಹಬ್ಬವನ್ನು ಆಚರಿಸತೊಡಗಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು