Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:13 - ಕನ್ನಡ ಸತ್ಯವೇದವು C.L. Bible (BSI)

13 ನೀವು ಬಾಗಿಲಿಗೆ ಹಚ್ಚಿದ ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವುದು. ಅದನ್ನು ಕಂಡು ನಿಮಗೆ ಯಾವ ಹಾನಿಯನ್ನು ಮಾಡದೆ ಮುಂದಕ್ಕೆ ದಾಟಿಹೋಗುವೆನು. ನಾನು ಈಜಿಪ್ಟಿನವರನ್ನು ಸಂಹರಿಸುವಾಗ ನಿಮಗೆ ಯಾವ ಕೇಡೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 [ನೀವು ಬಾಗಲಿಗೆ ಹಚ್ಚಿದ] ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವದಾದ ಕಾರಣ ನಾನು ಅದನ್ನು ಕಂಡು ನಿಮಗೆ ಯಾವ ನಷ್ಟವನ್ನೂ ಮಾಡದೆ ಮುಂದಕ್ಕೆ ದಾಟಿ ಹೋಗುವೆನು. ನಾನು ಐಗುಪ್ತದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ನಿಮ್ಮ ಮನೆಗಳಿಗೆ ಹಚ್ಚಿರುವ ರಕ್ತವು ಒಂದು ವಿಶೇಷ ಸೂಚನೆಯಾಗಿದೆ. ನಾನು ಆ ರಕ್ತವನ್ನು ನೋಡಿದಾಗ ನಿಮ್ಮ ಮನೆಯನ್ನು ದಾಟಿಹೋಗುವೆನು. ಈಜಿಪ್ಟಿನ ಜನರಿಗೆ ಕೇಡುಗಳಾಗುವಂತೆ ಮಾಡುವೆನು. ಆದರೆ ಆ ವ್ಯಾಧಿಗಳು ನಿಮಗೆ ಹಾನಿ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ, ನಿಮ್ಮನ್ನು ದಾಟಿಹೋಗುವೆನು. ಈಜಿಪ್ಟ್ ದೇಶವನ್ನು ನಾನು ಸಂಹರಿಸುವ ಸಮಯದಲ್ಲಿ, ನಿಮ್ಮನ್ನು ನಾಶಮಾಡುವ ಯಾವ ಉಪದ್ರವವು ನಿಮ್ಮ ಮೇಲೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:13
10 ತಿಳಿವುಗಳ ಹೋಲಿಕೆ  

ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.


ಸರ್ವೇಶ್ವರ ಈಜಿಪ್ಟಿನವರನ್ನು ವಧಿಸಲು ಆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೆಬಾಗಲಿನ ಮೇಲ್ಪಟ್ಟಿಯಲ್ಲೂ ಹಾಗೂ ಎರಡು ನಿಲುವು ಕಂಬಗಳಲ್ಲೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವರು. ನಿಮ್ಮನ್ನು ವಧಿಸಲು ವಿನಾಶಕನನ್ನು ನಿಮ್ಮ ಮನೆಗಳಿಗೆ ಅವರು ಬರಗೊಡಿಸುವುದೇ ಇಲ್ಲ.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ನೀವು ನಿಮ್ಮ ಜನನಾಂಗದ ಮುಂದೊಗಲನ್ನು ಸುನ್ನತಿಮಾಡಿಸಿಕೊಳ್ಳಬೇಕು. ಅದೇ ನಿಮಗೂ ನನಗೂ ಆದ ಒಡಂಬಡಿಕೆಯ ಗುರುತು.


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆ ತೋರಿದಂತೆ ನೀವೂ ನನ್ನ ತಂದೆಯ ಮನೆಯವರಿಗೆ ದಯೆ ತೋರಬೇಕು.


ಆ ಭೋಜನವನ್ನು ಮಾಡಬೇಕಾದ ಕ್ರಮ ಇದು: ನೀವು ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ಬೇಗ ಬೇಗನೆ ಊಟಮಾಡಬೇಕು. ಏಕೆಂದರೆ ಅದು ಸರ್ವೇಶ್ವರ ಸ್ವಾಮಿಗೆ ಆಚರಿಸತಕ್ಕ ಪಾಸ್ಕಹಬ್ಬ.


“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ಅವುಗಳ ರಕ್ತದಲ್ಲಿ ಸ್ವಲ್ಪ ತೆಗೆದು ತಾವು ಆ ಭೋಜನ ಮಾಡುವ ಮನೆಯ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗೂ ಹಚ್ಚಬೇಕು.


ನಾವು ಈ ನಾಡನ್ನು ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಕಿಗೆ ಈ ಕೆಂಪುದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನು, ಅಣ್ಣತಮ್ಮಂದಿರನ್ನು, ಎಲ್ಲಾ ಬಂಧುಬಳಗದವರನ್ನು ನಿನ್ನ ಮನೆಯಲ್ಲೇ ಸೇರಿಸಿಕೊಂಡಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು